April 2025

ಕುಸಿತ ಕಂಡ ಷೇರುಪೇಟೆ ಸೂಚ್ಯಂಕ| ಹೂಡಿಕೆದಾರರಿಗೆ ಭಾರೀ ನಷ್ಟ

ಸಮಗ್ರ ನ್ಯೂಸ್: ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸುಂಕ ನೀತಿಗಳಿಂದ ಪ್ರಚೋದಿಸಲ್ಪಟ್ಟ ಜಾಗತಿಕ ವ್ಯಾಪಾರ ಯುದ್ಧದ ಭೀತಿಯ ಮಧ್ಯೆ ಭಾರತೀಯ ಬೆಂಚ್ ಮಾರ್ಕ್ ಈಕ್ವಿಟಿ ಸೂಚ್ಯಂಕಗಳಾದ ಬಿಎಸ್‌ಇ ಸೆನ್ಸೆಕ್ಸ್ ಮತ್ತು ನಿಫ್ಟಿ 50 ಸೋಮವಾರ ಮಾರುಕಟ್ಟೆ ಮುಕ್ತ ಮಾರುಕಟ್ಟೆಯಲ್ಲಿ ಕುಸಿದವು.‌ ಇದರಿಂದ ಮಾರುಕಟ್ಟೆಯಲ್ಲಿ ಹೂಡಿಕೆದಾರರು ‌ನಷ್ಟ ಅನುಭವಿಸುವಂತಾಗಿದೆ. ಬಿಎಸ್‌ಇ ಸೆನ್ಸೆಕ್ಸ್ 3,379.19 ಪಾಯಿಂಟ್ಸ್ ಅಥವಾ 4.48% ಕುಸಿದು 71,985.50 ಕ್ಕೆ ತಲುಪಿದೆ ಮತ್ತು ನಿಫ್ಟಿ 50 901.05 ಪಾಯಿಂಟ್ಸ್ ಅಥವಾ 3.93% ಕುಸಿದು 22,003.40 ಕ್ಕೆ […]

ಕುಸಿತ ಕಂಡ ಷೇರುಪೇಟೆ ಸೂಚ್ಯಂಕ| ಹೂಡಿಕೆದಾರರಿಗೆ ಭಾರೀ ನಷ್ಟ Read More »

ಮಂಗಳೂರು: ಪಿಎಸ್ಐ ಮಗನಿಂದ ಅಪ್ರಾಪ್ತೆ ಮೇಲೆ ಅತ್ಯಾಚಾರ| ಆರೋಪಿಯ ಬಂಧನ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮಗನಿಂದಲೆ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆದಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ. 17 ವರ್ಷದ ಕಾಲೇಜು ವಿದ್ಯಾರ್ಥಿನಿ ಮೇಲೆ PSI ಮಗ ಅತ್ಯಾಚಾರ ಎಸಗಿದ್ದಾನೆ. ವಿದ್ಯಾರ್ಥಿನಿ ಮನೆಯಲ್ಲಿ ಒಬ್ಬಳೇ ಇದ್ದಾಗ ಈ ಒಂದು ಕೃತ್ಯ ಎಸಗಿದ್ದಾನೆ. ಮನೆಗೆ ನೀರು ಕೇಳುವ ನೆಪದಲ್ಲಿ ಹೋಗಿ ಇನ್ಸ್ಪೆಕ್ಟರ್ ಮಗ ಅತ್ಯಾಚಾರ ಎಸಗಿದ್ದಾನೆ. ಅಲ್ಲದೇ ಬಾಲಕಿಗೆ

ಮಂಗಳೂರು: ಪಿಎಸ್ಐ ಮಗನಿಂದ ಅಪ್ರಾಪ್ತೆ ಮೇಲೆ ಅತ್ಯಾಚಾರ| ಆರೋಪಿಯ ಬಂಧನ Read More »

ಸುಬ್ರಹ್ಮಣ್ಯ: ತಾಯಿ – ಮಗ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ| ಮಗ ಸಾವು, ತಾಯಿ ಗಂಭೀರ

ಸುಬ್ರಹ್ಮಣ್ಯ: ಜೊತೆಯಾಗಿ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ತಾಯಿ ಮತ್ತು ಮಗ ಯತ್ನಿಸಿದ್ದು, ಘಟನೆಯಲ್ಲಿ ಮಗ ಸಾವನ್ನಪ್ಪಿ ತಾಯಿ ಗಂಭೀರ ಸ್ಥಿತಿಯಲ್ಲಿ ಸುಳ್ಯದ ಆಸ್ಪತ್ರೆಗೆ ದಾಖಲಾದ ಘಟನೆ ಸುಳ್ಯ ತಾಲೂಕಿನ ಸುಬ್ರಹ್ಮಣ್ಯ ಸಮೀಪದ ನಾಲ್ಕೂರು ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಮೃತಪಟ್ಟವರನ್ನು ನಡುಗಲ್ಲು ನಾಲ್ಕೂರು ಗ್ರಾಮದ ದೇರಪ್ಪಜ್ಜನಮನೆ ನಿವಾಸಿ ಕುಶಾಲಪ್ಪ‌ ಗೌಡ ಎಂಬವರ ಮಗ ನಿತಿನ್ (32 ವ.) ಎಂದು ಗುರುತಿಸಲಾಗಿದೆ. ತಾಯಿ ಸುಲೋಚನಾ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಬ್ಬರೂ ಮೂರು ದಿನಗಳ ಹಿಂದೆ ಇಲಿ ಪಾಷಾಣ

ಸುಬ್ರಹ್ಮಣ್ಯ: ತಾಯಿ – ಮಗ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ| ಮಗ ಸಾವು, ತಾಯಿ ಗಂಭೀರ Read More »

ಚಿಕ್ಕಮಗಳೂರು: ಮನೆ ಮೇಲೆ ಮರ ಬಿದ್ದು ಹಾನಿ

ಸಮಗ್ರ ನ್ಯೂಸ್: ಕಳಸ ತಾಲೂಕಿನ ಇಡಕಣಿ ಗ್ರಾಮ ಪಂಚಾಯತ್ ಗೆ ಸೇರುವ ಮನೆಯೊಂದರ ಮೇಲೆ ಮಳೆಯಿಂದಾಗಿ ಮರ ಬಿದ್ದು ಹಾನಿಯಾದ ಘಟನೆ ಎ.5 ರಂದು ನಡೆದಿದೆ. ಹೆಮ್ಮಕ್ಕಿ ಗ್ರಾಮದ ಎಳ್ಳುಕುಡಿಗೆ ಸುಂದರಿ ಎಂಬುವರಿಗೆ ಸೇರಿದ ಮನೆಯಾಗಿದೆ. ಜೋರಾಗಿ ಬೀಸಿದ ಗಾಳಿಗೆ ಹಳುವಳ್ಳಿ ಹೊರನಾಡು ಮದ್ಯೆ ವಿದ್ಯುತ್ ತಂತಿ ಮೇಲೆ ಅಡಕೆ ಮರವೊಂದು ಬಿದ್ದು ಕೆಲಕಾಲ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತು.ಅಲ್ಲದೇ ಕಳಸ ಸೇರಿದಂತೆ ತಾಲೂಕಿನ ಹಲವೆಡೆ ಜೋರಾಗಿ ಮಳೆ ಸುರಿದಿದೆ.

ಚಿಕ್ಕಮಗಳೂರು: ಮನೆ ಮೇಲೆ ಮರ ಬಿದ್ದು ಹಾನಿ Read More »

ಐತಿಹಾಸಿಕ ವಕ್ಫ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ಸಮಗ್ರ ನ್ಯೂಸ್: ಸಂಸತ್ತಿನ ಉಭಯ ಸದನಗಳಲ್ಲಿ ಅಂಗೀಕಾರಗೊಂಡ ಐತಿಹಾಸಿಕ ವಕ್ಫ್ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶನಿವಾರ ರಾತ್ರಿ ಒಪ್ಪಿಗೆ ನೀಡಿದ್ದು, ಕಾಯ್ದೆ ಜಾರಿಗೆ ಅಧಿಸೂಚನೆಯೊಂದೇ ಬಾಕಿ ಇದೆ. ಸುಮಾರು 17 ಗಂಟೆಗಳ ಚರ್ಚೆಯ ನಂತರ, ಶುಕ್ರವಾರ ಮುಂಜಾನೆ ರಾಜ್ಯಸಭೆಯು ಮಸೂದೆಯನ್ನು ಪರವಾಗಿ 128 ಮತಗಳು ಮತ್ತು ವಿರುದ್ಧ 95 ಮತಗಳೊಂದಿಗೆ ಅಂಗೀಕರಿಸಿತು. ಇನ್ನು ಸರ್ಕಾರದ ಅಧಿಸೂಚನೆ ಹೊರಬಿ ದ್ದರೆ ಕಾನೂನು ರೂಪದಲ್ಲಿ ಇದು ಜಾರಿಗೆ ಬರಲಿದೆ. ಅಧಿಸೂಚನೆ ಶೀಘ್ರದಲ್ಲೇ ಪ್ರಕಟವಾಗಲಿದೆ ಎಂದು ಮೂಲಗಳು ಹೇಳಿವೆ.

ಐತಿಹಾಸಿಕ ವಕ್ಫ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ Read More »

ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾದರೆ ಪಿಡಿಒಗಳೇ ಹೊಣೆ – ಸಚಿವ ದಿನೇಶ್ ಗುಂಡೂರಾವ್

ಸಮಗ್ರ ನ್ಯೂಸ್: ಬೇಸಗೆಯ ಉಳಿದ ತಿಂಗಳುಗಳಲ್ಲಿ ಕುಡಿಯುವ ನೀರಿಗೆ ಯಾವುದೇ ರೀತಿಯಲ್ಲಿ ಸಮಸ್ಯೆ ಆಗದಂತೆ ಅಧಿಕಾರಿಗಳು ಮುಂಜಾಗ್ರತೆ ವಹಿಸ ಬೇಕು. ಗ್ರಾಮೀಣ ಭಾಗಗಳಲ್ಲಿ ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳೇ ನೀರಿನ ಸಮಸ್ಯೆಗೆ ಹೊಣೆಗಾರರು ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಕುಡಿಯುವ ನೀರಿನ ಹಾಗೂ ಮಳೆಗಾಲದಲ್ಲಿ ಆಗಬಹುದಾದ ಪ್ರಾಕೃತಿಕ ವಿಕೋಪ ಎದುರಿಸಲು ಸಿದ್ಧತೆ ಕುರಿತಂತೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಜಿಲ್ಲೆಯ ಡ್ಯಾಂಗಳಲ್ಲಿ ಪ್ರಸ್ತುತ ಅಗತ್ಯಕ್ಕೆ

ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾದರೆ ಪಿಡಿಒಗಳೇ ಹೊಣೆ – ಸಚಿವ ದಿನೇಶ್ ಗುಂಡೂರಾವ್ Read More »

ಇಂದಿನಿಂದ ರಾಜ್ಯ ಸರ್ಕಾರದ ವಿರುದ್ಧ ನನ್ನ ಯುದ್ದ ಆರಂಭ : ಎಚ್.ಡಿ ಕುಮಾರಸ್ವಾಮಿ

ಸಮಗ್ರ ನ್ಯೂಸ್: ಕೇತಗಾಹಳ್ಳಿಯಲ್ಲಿ ಸರ್ಕಾರಿ ಜಮೀನು ಒತ್ತುವರಿ ಆರೋಪದಲ್ಲಿ ಇಷ್ಟು ದಿನ ಸೈಲೆಂಟ್ ಆಗಿದ್ದ ಮಾಜಿ ಸಿಎಂ, ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಇದೀಗ ಏಕಾಏಕಿ ಬೆಂಗಳೂರಿನಲ್ಲಿ ಸುದ್ದಿ ಗೋಷ್ಠಿ ನಡೆಸಿ ಕಿಡಿಕಾರಿದ್ದಾರೆ. ನನಗೆ ನೊಟೀಸ್ ಕೊಡುವುದು ಇರಲಿ. ಕೆಳಹಂತದ ಅಧಿಕಾರಿಗಳನ್ನ ನಾನು ಪ್ರಶ್ನೆ ಮಾಡಲ್ಲ. ಎಸ್ ಐಟಿ ತಂಡ ರಚಿಸಿ ತನಿಖೆ ಮಾಡಿಸಿದ್ದಾರೆ. ಇದು ಇತಿಹಾಸದಲ್ಲೇ ಪ್ರಥಮ. ಈ ಸರ್ಕಾರಕ್ಕೆ ನಾನು ಸವಾಲು ಹಾಕುವುದಕ್ಕೆ ಬಂದಿದ್ದೇನೆ. ಇಂದಿನಿಂದ ರಾಜ್ಯ ಸರ್ಕಾರದ ವಿರುದ್ಧ ನನ್ನ ಯುದ್ದ ಆರಂಭ

ಇಂದಿನಿಂದ ರಾಜ್ಯ ಸರ್ಕಾರದ ವಿರುದ್ಧ ನನ್ನ ಯುದ್ದ ಆರಂಭ : ಎಚ್.ಡಿ ಕುಮಾರಸ್ವಾಮಿ Read More »

ಡಿಸೇಲ್ ದರ ಏರಿಕೆ.. ಏ.14 ರಂದು ಲಾರಿ ಮಾಲೀಕರ ಮುಷ್ಕರ..!

ಸಮಗ್ರ ನ್ಯೂಸ್: ರಾಜ್ಯದಲ್ಲಿ ಇತ್ತೀಚೆಗೆ ಬೆಲೆ ಏರಿಕೆಗಳದ್ದೆ ಹಾವಳಿಯಾಗಿತ್ತು. ಇದರಿಂದ ನೊಂದಿರುವ ಜನಸಾಮಾನ್ಯರು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಅದರಲ್ಲು ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಹೆಚ್ಚಿಸಿದ್ದು ಇದು ಲಾರಿ ಮಾಲೀಕರ ಆಕ್ರೋಶಕ್ಕೆ ಕಾರಣವಾಗಿದೆ. ಇದೀಗ ಡೀಸೆಲ್ ದರ ಏರಿಕೆ ಖಂಡಿಸಿ ಲಾರಿ ಮಾಲೀಕರ ಸಂಘ ರಾಜ್ಯ ಸರ್ಕಾರದ ವಿರುದ್ಧ ಏಪ್ರಿಲ್​ 14ರ ಮಧ್ಯರಾತ್ರಿಯಿಂದ ಪ್ರತಿಭಟನೆ ನಡೆಸಲು ನಿರ್ಧರಿಸಿದೆ.ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಎರಡು ರೂಪಾಯಿ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಇದರಿಂದ ಕೆರಳಿ ಕೆಂಡವಾಗಿರುವ ಲಾರಿ

ಡಿಸೇಲ್ ದರ ಏರಿಕೆ.. ಏ.14 ರಂದು ಲಾರಿ ಮಾಲೀಕರ ಮುಷ್ಕರ..! Read More »

ರಾತ್ರಿಯಿಡೀ ಹುಡುಗಿ ಎಂದು ಹುಡುಗನ ಜೊತೆ ಅಶ್ಲೀಲ ಚಾಟಿಂಗ್| ಬೆಳಿಗ್ಗೆ ಹುಡುಗಿ ನೋಡಲು ಬಂದವನಿಗೆ ಸಿಕ್ತು ಬಿಸಿಬಿಸಿ‌ ಕಜ್ಜಾಯ

ಸಮಗ್ರ ನ್ಯೂಸ್: ಯುವಕನೊಬ್ಬ ಯುವತಿಯ ಮೊಬೈಲ್ ನಂಬರ್ ಪಡೆದು ರಾತ್ರೀ ಇಡೀ ಅಶ್ಲೀಲ ಮಸೇಜ್ ಮಾಡಿ ಮರುದಿನ ಭೇಟಿಯಾಗಲು ಬಂದ ವೇಳೆ ಸ್ಥಳೀಯರು ಸರಿಯಾಗಿ ಧರ್ಮದೇಟು ನೀಡಿ ಪೊಲೀಸರ ವಶಕ್ಕೆ ನೀಡಿದ ಘಟನೆ ವಿಟ್ಲ ಹೊರವಲಯದ ಕುಡ್ತಮುಗೇರು ಎಂಬಲ್ಲಿ ನಡೆದಿದೆ. ಧರ್ಮದೇಟು ತಿಂದವನನ್ನು ಕನ್ಯಾನ ಸಮೀಪದ ಪಂಜಾಜೆ ನಿವಾಸಿ ಸವಾದ್(22)ಎಂದು ತಿಳಿದುಬಂದಿದೆ. ಬೆಂಗಳೂರಿನ ಕೋರಮಂಗಲದ ಡ್ರೆಸ್ ಅಂಗಡಿಯಲ್ಲಿ ಸೇಲ್ಸ್ ಮ್ಯಾನ್ ಆಗಿರುವ ಸವಾದ್ ರಂಝಾನ್ ಹಬ್ಬಕ್ಕೆ ಬಂದಿದ್ದ. ಇದೇ ಸಂದರ್ಭ ಈತನ ಅದೃಷ್ಟ ಕೆಟ್ಟಿದ್ದ ಕಾರಣ ಮಾಡಬಾರದ್ದನ್ನು

ರಾತ್ರಿಯಿಡೀ ಹುಡುಗಿ ಎಂದು ಹುಡುಗನ ಜೊತೆ ಅಶ್ಲೀಲ ಚಾಟಿಂಗ್| ಬೆಳಿಗ್ಗೆ ಹುಡುಗಿ ನೋಡಲು ಬಂದವನಿಗೆ ಸಿಕ್ತು ಬಿಸಿಬಿಸಿ‌ ಕಜ್ಜಾಯ Read More »

ಬಂಗಾರದ ದರ ಮತ್ತೆ ಕೊಂಚ ಕುಸಿತ| ಚಿನ್ನದ ಬೆಲೆ ಇಳಿಕೆಗೆ ಕಾರಣವೇನು?

ಸಮಗ್ರ ನ್ಯೂಸ್: ಚಿನ್ನಾಭರಣ ಪ್ರಿಯರ ಜೇಬು ಭಾರವಾಗಿಸಿದ್ದ ಚಿನ್ನದ ಬೆಲೆ ಕಳೆದ ಎರಡು ದಿನಗಳಿಂದ ಕುಸಿತ ಕಂಡಿದೆ. ಶನಿವಾರ ಭಾರತದಲ್ಲಿ ಚಿನ್ನದ ಬೆಲೆ ಭರ್ಜರಿ ಕುಸಿತ ಕಂಡಿದ್ದು ಚಿನ್ನಾಭರಣ ಪ್ರಿಯರಲ್ಲಿ ಸಂತಸ ಮೂಡಿಸಿದೆ. ಕಳೆದ ಕೆಲವು ದಿನದಿಂದ ಏರಿಕೆಯಾಗುತ್ತಲೇ ಇದ್ದ ಚಿನ್ನದ ಬೆಲೆ 1 ಲಕ್ಷ ರೂಪಾಯಿ ಸನಿಹಕ್ಕೆ ಹೋಗುತ್ತಿದೆ. ಶುಕ್ರವಾರ ಮತ್ತು ಶನಿವಾರ ಎರಡೂ ದಿನ ಚಿನ್ನದ ಬೆಲೆ ಇಳಿಕೆಯಾಗಿದ್ದು ಹೂಡಿಕೆದಾರರು, ಚಿನ್ನಾಭರಣ ಪ್ರಿಯರಲ್ಲಿ ಸ್ವಲ್ಪ ನೆಮ್ಮದಿ ತಂದಿದೆ. ಶನಿವಾರ ಒಂದೇ ದಿನ 100 ಗ್ರಾಂ

ಬಂಗಾರದ ದರ ಮತ್ತೆ ಕೊಂಚ ಕುಸಿತ| ಚಿನ್ನದ ಬೆಲೆ ಇಳಿಕೆಗೆ ಕಾರಣವೇನು? Read More »