ಹಿಂದೂ ದೇವಸ್ಥಾನ ಮಂಡಳಿಗಳಲ್ಲಿ ಮುಸ್ಲಿಮರಿಗೆ ಅವಕಾಶ ನೀಡುತ್ತೀರಾ? ವಕ್ಫ್ ತಿದ್ದುಪಡಿ ಕಾಯ್ದೆ ಅರ್ಜಿ ವಿಚಾರಣೆ ವೇಳೆ ಕೇಂದ್ರಕ್ಕೆ ಸುಪ್ರೀಂ ತರಾಟೆ
ಸಮಗ್ರ ನ್ಯೂಸ್: ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಹಲವು ಅರ್ಜಿಗಳ ವಿಚಾರಣೆಯನ್ನು ಇಂದು ಮಧ್ಯಾಹ್ನ 2 ಗಂಟೆಗೆ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್, ಕೇಂದ್ರ ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರ ಸದಸ್ಯರನ್ನು ನೇಮಕ ಮಾಡುವ ಕಾಯ್ದೆಯ ನಿಯಮವನ್ನು ಪ್ರಶ್ನಿಸಿತು. “ಸರಕಾರವೇನಾದರೂ ಹಿಂದೂ ಧಾರ್ಮಿಕ ದತ್ತಿ ಮಂಡಳಿಗಳಲ್ಲಿ ಮುಸ್ಲಿಮರ ನೇಮಕಕ್ಕೆ ಅವಕಾಶ ನೀಡುತ್ತದೆಯೆ?” ಎಂದು ಕೇಂದ್ರ ಸರಕಾರವನ್ನು ನ್ಯಾಯಾಲಯ ತರಾಟೆಗೆ ತೆಗೆದುಕೊಂಡಿತು. ನೂತನ ವಕ್ಫ್ ತಿದ್ದುಪಡಿ ಕಾಯ್ದೆಯಲ್ಲಿನ ವಿವಿಧ ನಿಯಮಗಳು, ವಿಶೇಷವಾಗಿ ಬಳಕೆದಾರರ ಆಸ್ತಿಯನ್ನು ಬಳಸಿಕೊಳ್ಳುವ ವಕ್ಫ್‌ಗೆ ರೂಪಿಸಲಾಗಿರುವ ನಿಯಮಗಳ […]