April 2025

ಯೂಟ್ಯೂಬರ್ ಸಮೀರ್ ಎಂ.ಡಿ‌ ವಿರುದ್ಧ ₹10ಕೋಟಿ ಮಾನನಷ್ಟ ಮೊಕದ್ದಮೆ ದಾಖಲು

ಸಮಗ್ರ ನ್ಯೂಸ್: ಇತ್ತೀಚಿಗೆ ಸಾಮಾಜಿಕ ಜಾಲತಾಣದಲ್ಲಿ ಅತಿ ಹೆಚ್ಚು ಟ್ರೆಂಡಿಂಗ್ ನಲ್ಲಿ ಬಂದಂತಹ ವಿಷಯ ಅಂದರೆ ಅದು ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ. ಇದೀಗ ವಿದ್ಯಾರ್ಥಿನಿ ಸೌಜನ್ಯಾ ಕೊಲೆ ಹಾಗೂ ಅತ್ಯಾಚಾರ ಪ್ರಕರಣ ಸಂಬಂಧ ಕೋರ್ಟ್ ಆದೇಶ ಉಲ್ಲಂಘಿಸಿ ಎರಡನೆ ವಿಡಿಯೊ ಬಿಟ್ಟಿರುವ ಆರೋಪ ಹಿನ್ನೆಲೆ ʼದೂತʼ ಹೆಸರಿನ ಯೂಟ್ಯೂಬರ್ ಸಮೀರ್ ಸಮೀರ್ ಎಂಡಿ ವಿರುದ್ಧ 10 ಕೋಟಿ ಮಾನನಷ್ಟ ಮೊಕದ್ದಮೆ ದಾಖಲಾಗಿದೆ. ಪ್ರರಕಣ ಸಂಬಂಧ 10 ಕೋಟಿ ಮಾನನಷ್ಟ ಮೊಕದ್ದಮೆಯನ್ನು ಧರ್ಮಸ್ಥಳ ಡಿ.ಹರ್ಷೇಂದ್ರ […]

ಯೂಟ್ಯೂಬರ್ ಸಮೀರ್ ಎಂ.ಡಿ‌ ವಿರುದ್ಧ ₹10ಕೋಟಿ ಮಾನನಷ್ಟ ಮೊಕದ್ದಮೆ ದಾಖಲು Read More »

ಹೆಚ್ಚಾದ ಸೈಬರ್ ಕ್ರೈಂ ಪ್ರಕರಣ: ಪೊಲೀಸ್ ಆಯುಕ್ತ ಬಿ ದಯಾನಂದ ಹೆಸ್ರಲ್ಲಿ ಫೇಕ್ ಅಕೌಂಟ್ ಓಪನ್

ಸಮಗ್ರ ನ್ಯೂಸ್: ಇತ್ತೀಚೆಗೆ ಸೈಬರ್ ಕ್ರೈಂ ಪ್ರಕರಣಗಳು ಹೆಚ್ಚಾಗಿದ್ದು, ಜನರಿಗೆ ಪೊಲೀಸರು ಎಚ್ಚರವಾಗಿರಿ ಎಂದು ಮಾಹಿತಿ ನೀಡುತ್ತಲೇ ಇರುತ್ತಾರೆ. ಆದರೆ ಇದೀಗ ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ ಅವರನ್ನು ಸೈಬರ್ ಖದೀಮರು ಬಿಟ್ಟಿಲ್ಲ. ಫೇಸ್ಬುಕ್ನಲ್ಲಿ ಬಿ.ದಯಾನಂದ ಹೆಸರಿನಲ್ಲಿ ಫೇಕ್ ಅಕೌಂಟ್ ಓಪನ್ ಮಾಡಿರುವ ವಂಚಕರು ಜನರಿಗೆ ರಿಕ್ವೆಸ್ಟ್ ಕಳಿಸುತ್ತಿರುವ ಘಟನೆಯೊಂದು ನಡೆದಿದೆ. ಇತ್ತೀಚೆಗೆ ಕೂಡ ಪೊಲೀಸ್‌ ಆಯುಕ್ತ ಬಿ.ದಯಾನಂದ್‌ ಅವರ ಹೆಸರಿನಲ್ಲೇ ನಕಲಿ ವಾಟ್ಸ್‌ಆ್ಯಪ್‌ ಖಾತೆ ತೆರೆದಿದ್ದ ಖದೀಮರು ವಂಚನೆಗೆ ಮುಂದಾಗಿದ್ದರು. ನಕಲಿ ವಾಟ್ಸ್‌ಆ್ಯಪ್‌ ಖಾತೆ

ಹೆಚ್ಚಾದ ಸೈಬರ್ ಕ್ರೈಂ ಪ್ರಕರಣ: ಪೊಲೀಸ್ ಆಯುಕ್ತ ಬಿ ದಯಾನಂದ ಹೆಸ್ರಲ್ಲಿ ಫೇಕ್ ಅಕೌಂಟ್ ಓಪನ್ Read More »

ಅವಳ‌ ಮೇಲಿನ ಅತ್ಯಾಚಾರಕ್ಕೆ ಅವಳೇ ಜವಾಬ್ದಾರಿ| ಅಲಹಾಬಾದ್ ಹೈಕೋರ್ಟ್ ನಿಂದ ಆರೋಪಿಗೆ ಜಾಮೀನು

ಸಮಗ್ರ ನ್ಯೂಸ್: ಅಲಹಾಬಾದ್ ಹೈಕೋರ್ಟ್ ಇತ್ತೀಚೆಗೆ ನೀಡಿದ ತೀರ್ಪಿನಲ್ಲಿ ಅತ್ಯಾಚಾರ ಸಂತ್ರಸ್ತೆಯನ್ನೇ ದೂಷಿಸಿದ್ದು, ನ್ಯಾಯಾಧೀಶ ಸಂಜಯ್ ಕುಮಾರ್ ಸಿಂಗ್ ಅವರು, ಮಹಿಳೆಯೇ ಸ್ವಯಂ ತೊಂದರೆಯನ್ನು ಆಹ್ವಾನಿಸಿಕೊಂಡಳು ಮತ್ತು ಆಕೆಯೇ ಅದಕ್ಕೆ ಕಾರಣ ಎಂದು ಹೇಳಿದ್ದಾರೆ. ದೆಹಲಿಯ ಹೌಜ್ ಖಾಸ್‌ನ ಬಾರ್‌ನಲ್ಲಿ ಭೇಟಿಯಾದ ಮಹಿಳೆಯ ಅತ್ಯಾಚಾರದ ಆರೋಪದ ಮೇಲೆ 2024ರ ಡಿಸೆಂಬರ್‌ನಲ್ಲಿ ಬಂಧಿತನಾಗಿದ್ದ ವ್ಯಕ್ತಿಗೆ ಜಾಮೀನು ನೀಡುವ ಸಂದರ್ಭದಲ್ಲಿ ನ್ಯಾಯಮೂರ್ತಿಗಳು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. “ಸಂತ್ರಸ್ತೆಯ ಆರೋಪವನ್ನು ಸತ್ಯವೆಂದು ಒಪ್ಪಿಕೊಂಡರೂ ಸಹ, ಆಕೆಯೇ ತೊಂದರೆಯನ್ನು ಆಹ್ವಾನಿಸಿಕೊಂಡಳು ಮತ್ತು ಅದಕ್ಕೆ

ಅವಳ‌ ಮೇಲಿನ ಅತ್ಯಾಚಾರಕ್ಕೆ ಅವಳೇ ಜವಾಬ್ದಾರಿ| ಅಲಹಾಬಾದ್ ಹೈಕೋರ್ಟ್ ನಿಂದ ಆರೋಪಿಗೆ ಜಾಮೀನು Read More »

ಚಿನ್ನದ ಬೆಲೆ‌ ಮತ್ತಷ್ಟು ಏರಿಕೆ| ಹಳದಿ ಲೋಹ ಇನ್ನು ಗಗನಕುಸುಮ

ಸಮಗ್ರ ನ್ಯೂಸ್: ಅಂತರರಾಷ್ಟ್ರೀಯ ಬೆಳವಣಿಗೆಗಳು ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸುಂಕ ಸಮರದ ಹಿನ್ನೆಲೆಯಲ್ಲಿ ಚಿನ್ನದ ಬೆಲೆ ತೀವ್ರವಾಗಿ ಏರುತ್ತಿದೆ. ಈ ಸಂದರ್ಭದಲ್ಲಿ, ಕಳೆದ ಮೂರು ದಿನಗಳಲ್ಲಿ ಬೆಲೆಗಳು ದಾಖಲೆ ಮಟ್ಟಕ್ಕೆ ಏರಿಕೆ ಕಾಣುತ್ತಿವೆ. ಪರಿಣಾಮವಾಗಿ, ಭಾರತದಲ್ಲಿ ಚಿನ್ನದ ಬೆಲೆ ಹೊಸ ದಾಖಲೆಗಳನ್ನು ನಿರ್ಮಿಸಿದೆ. ಶುಕ್ರವಾರ (ಏ.11) ಬೆಳಗ್ಗೆ ದಾಖಲಾದ ವಿವರಗಳ ಪ್ರಕಾರ, 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 2,020 ರೂ.ಗೆ ಏರಿಕೆಯಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ 1,850 ರೂ. ಹೆಚ್ಚಾಗಿದೆ. ಇದರೊಂದಿಗೆ,

ಚಿನ್ನದ ಬೆಲೆ‌ ಮತ್ತಷ್ಟು ಏರಿಕೆ| ಹಳದಿ ಲೋಹ ಇನ್ನು ಗಗನಕುಸುಮ Read More »

ಎ.12ರಿಂದ ಮಂಗಳೂರು – ಕುಕ್ಕೆ ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಆರಂಭ| ರೈಲು ಸಂಚಾರದ ವೇಳಾಪಟ್ಟಿ ಇಲ್ಲಿದೆ ನೋಡಿ…

ಸಮಗ್ರ ನ್ಯೂಸ್: ಮಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಎ.12ಕ್ಕೆ ಹೊಸ ರೈಲು ಆರಂಭಿಸಲಾಗುತ್ತಿದ್ದು, ದಿನಕ್ಕೆ 4 ಬಾರಿ ಸಂಚರಿಸಲಿದೆ ಎಂದು ಕೇಂದ್ರ ರೈಲ್ವೇ ಖಾತೆ ಸಹಾಯಕ ಸಚಿವ ವಿ. ಸೋಮಣ್ಣ ತಿಳಿಸಿದರು. ಅವರು ಮಂಗಳೂರಿನಲ್ಲಿ ರೈಲ್ವೇ ಮೇಲ್ಸೇತುವೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು ರೈಲಿನ ವೇಳಾಪಟ್ಟಿ: ಮಂಗಳೂರು ಸೆಂಟ್ರಲ್‌-ಕಬಕ ಪುತ್ತೂರು-ಸುಬ್ರಹ್ಮಣ್ಯ ರಸ್ತೆ ಪ್ಯಾಸೆಂಜರ್‌ ರೈಲು (56625) ಮುಂಜಾನೆ 4ಕ್ಕೆ ಮಂಗಳೂರು ಸೆಂಟ್ರಲ್‌ನಿಂದ ಹೊರಟು ಕಬಕ-ಪುತ್ತೂರಿಗೆ 5.18ಕ್ಕೆ ತಲುಪಲಿದೆ. 2 ನಿಮಿಷ ನಿಲುಗಡೆಯಾಗಿ 6.30ಕ್ಕೆ ಸುಬ್ರಹ್ಮಣ್ಯ ತಲುಪಲಿದೆ.

ಎ.12ರಿಂದ ಮಂಗಳೂರು – ಕುಕ್ಕೆ ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಆರಂಭ| ರೈಲು ಸಂಚಾರದ ವೇಳಾಪಟ್ಟಿ ಇಲ್ಲಿದೆ ನೋಡಿ… Read More »

ಪಿಯುಸಿಯಲ್ಲಿ ಅನುತ್ತೀರ್ಣ ಹಿನ್ನೆಲೆ| ರಾಜ್ಯದಲ್ಲಿ ಆರು ವಿದ್ಯಾರ್ಥಿಗಳು ಆತ್ಮಹತ್ಯೆ

ಸಮಗ್ರ ನ್ಯೂಸ್: ಕರ್ನಾಟಕ ದ್ವಿತೀಯ ಪಿಯು ಪಿಯುಸಿ ಪರೀಕ್ಷೆ ಫಲಿತಾಂಶ ಮಂಗಳವಾರ ಪ್ರಕಟಗೊಂಡಿದ್ದು ಒಟ್ಟಾರೆಯಾಗಿ ಶೇಕಡ 73.45 ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಮತ್ತೊಂದೆಡೆ, ಉತ್ತೀರ್ಣರಾಗದ ವಿದ್ಯಾರ್ಥಿಗಳಿಗೆ ಎರಡು ಹಾಗೂ ಮೂರನೆಯ ಪರೀಕ್ಷೆಗೆ ಶುಲ್ಕರಹಿತ ವ್ಯವಸ್ಥೆ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದ್ದಾರೆ. ಇಷ್ಟಾದರೂ, ಅನುತ್ತೀರ್ಣಗೊಂಡ ಹಾಗೂ ನಿರೀಕ್ಷಿಸಿದ ಅಂಕ ಬಂದಿಲ್ಲವೆಂದು ನೊಂದ ಆರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಲವು ಜಿಲ್ಲೆಗಳಲ್ಲಿ ನಡೆದಿದೆ. ಮೈಸೂರು ಜಿಲ್ಲೆಯ ಒಂಟಿಕೊಪ್ಪಲ್ಲಿನ ಸರ್ಕಾರಿ ಕಾಲೇಜಿನ ವಿದ್ಯಾರ್ಥಿನಿ ಐಶ್ವರ್ಯಾ

ಪಿಯುಸಿಯಲ್ಲಿ ಅನುತ್ತೀರ್ಣ ಹಿನ್ನೆಲೆ| ರಾಜ್ಯದಲ್ಲಿ ಆರು ವಿದ್ಯಾರ್ಥಿಗಳು ಆತ್ಮಹತ್ಯೆ Read More »

ವಾರದ ಹಿಂದೆ ಪರಿಚಯವಾದ ಇನ್ಸ್ಟಾಗ್ರಾಮ್ ಲವರ್ ಗಾಗಿ 13ವರ್ಷದ ದಾಂಪತ್ಯ ತೊರೆದ ಮಹಿಳೆ| ರೀಲ್ಸ್ ನಲ್ಲಿ ಪತ್ನಿಯ ಮದುವೆ ನೋಡಿ ಪತಿ ಕಂಗಾಲು

ಸಮಗ್ರ ನ್ಯೂಸ್: ಮದುವೆಯಾಗಿ 13 ವರ್ಷದ ನಂತರ ಇನ್‌ಸ್ಟಾದಲ್ಲಿ ಪರಿಚಯವಾದವನೊಂದಿಗೆ ಪತ್ನಿ ಎಸ್ಕೇಪ್ ಆಗಿ, ಎರಡನೇ ಮದುವೆಯಾಗಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲದಲ್ಲಿ ನಡೆದಿದೆ. ನೇತ್ರಾವತಿ ಜಕ್ಕಸಂದ್ರದ ರಾಘವೇಂದ್ರನಗರ ನಿವಾಸಿಯಾದ ರಮೇಶ್ ಎಂಬುವವರನ್ನು ಮದುವೆಯಾಗಿ 13 ವರ್ಷವಾಗಿತ್ತು. ಒಬ್ಬ ಮಗ ಕೂಡ ಇದ್ದಾನೆ. ಕಳೆದ 1 ವಾರದ ಹಿಂದೆ ಇನ್‌ಸ್ಟಾದಲ್ಲಿ ನೇತ್ರಾವತಿಗೆ ಸಂತೋಷ್ ಎಂಬಾತನ ಪರಿಚಯವಾಗಿತ್ತು. ಈ ಪರಿಚಯವು ಪ್ರೀತಿಗೆ ತಿರುಗಿತ್ತು. ನೇತ್ರಾವತಿಯು ಕೆಲವೇ ದಿನಗಳ ಪ್ರೀತಿಗಾಗಿ ಮೊದಲ ಪತಿಗೆ ಕೈಕೊಟ್ಟು, ಸಂತೋಷ್ ಜೊತೆ ದೇವಾಲಯಲ್ಲಿ ಎರಡನೇ

ವಾರದ ಹಿಂದೆ ಪರಿಚಯವಾದ ಇನ್ಸ್ಟಾಗ್ರಾಮ್ ಲವರ್ ಗಾಗಿ 13ವರ್ಷದ ದಾಂಪತ್ಯ ತೊರೆದ ಮಹಿಳೆ| ರೀಲ್ಸ್ ನಲ್ಲಿ ಪತ್ನಿಯ ಮದುವೆ ನೋಡಿ ಪತಿ ಕಂಗಾಲು Read More »

ರೆಪೋ‌ ದರ ಇಳಿಸಿದ ಆರ್ ಬಿಐ

ಸಮಗ್ರ ನ್ಯೂಸ್: ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ರಿಪೋ ದರಗಳನ್ನು 25 ಮೂಲಾಂಕಗಳಷ್ಟು ಕಡಿತಗೊಳಿಸಿದೆ. ಮೊನ್ನೆ ಮತ್ತು ನಿನ್ನೆ ನಡೆದ ಆರ್​​ಬಿಐ ಮಾನಿಟರಿ ಪಾಲಿಸಿ ಕಮಿಟಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿದ ಆರ್​​ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಅವರು ಕಮಿಟಿ ನಿರ್ಧಾರಗಳನ್ನು ಪ್ರಕಟಿಸುತ್ತಾ, ರಿಪೋ ದರವನ್ನು ಶೇ. 6.25ರಿಂದ ಶೇ 6ಕ್ಕೆ ಇಳಿಸಿರುವುದನ್ನು ತಿಳಿಸಿದರು. ಆರ್​​ಬಿಐನಿಂದ ಇದು ಸತತ ಎರಡನೇ ರಿಪೋ ದರ ಇಳಿಕೆ ಆಗಿದೆ. ಫೆಬ್ರುವರಿಯಲ್ಲಿ ನಡೆದ ಎಂಪಿಸಿ ಸಭೆಯಲ್ಲೂ

ರೆಪೋ‌ ದರ ಇಳಿಸಿದ ಆರ್ ಬಿಐ Read More »

ನೈಟ್ ಕ್ಲಬ್ ಮೇಲ್ಛಾವಣಿ ಕುಸಿತ| 79 ಮಂದಿ ದುರ್ಮರಣ; ಹಲವರಿಗೆ ಗಾಯ

ಸಮಗ್ರ ನ್ಯೂಸ್: ನೈಟ್ ಕ್ಲಬ್ ವೊಂದರ ಮೇಲ್ಛಾವಣಿ ಕುಸಿದ ಪರಿಣಾಮ 79ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದು, ನೂರೈವತ್ತು ಕ್ಕೂ ಹೆಚ್ಚು ಜನರಿಗೆ ಗಾಯಗಳಾದ ಘಟನೆ ನ್ಯೂಯಾರ್ಕ್ ನ ಡೊಮಿನಿಕನ್ ರಿಪಬ್ಲಿಕ್ ನಲ್ಲಿ ನಡೆದಿದೆ. ರಾಜಧಾನಿ ಸ್ಯಾಂಟೊ ಡೊಮಿಂಗೊದ ನೈಟ್ ಕ್ಲಬ್ ನಲ್ಲಿ ಸಂಗೀತ ಪ್ರದರ್ಶನದ ವೇಳೆ ಕ್ಲಬ್ ನ ಮೇಲ್ಛಾವಣಿ ಏಕಾಏಕಿ ಕುಸಿದು ಬಂದಿದ್ದು, ಈ ವೇಳೆ ಕ್ಲಬ್ ನಲ್ಲಿ ಸುಮಾರು 300 ಜನರಿದ್ದರು ಎನ್ನಲಾಗಿದೆ. ಸದ್ಯ 150ಕ್ಕೂ ಹೆಚ್ಚು ಗಾಯಗೊಂಡವರನ್ನು ಆಸ್ಪತ್ರೆಗೆ ಸ್ಥಳಾಂತರಿಸಿದ್ದು, 79 ಜನರ

ನೈಟ್ ಕ್ಲಬ್ ಮೇಲ್ಛಾವಣಿ ಕುಸಿತ| 79 ಮಂದಿ ದುರ್ಮರಣ; ಹಲವರಿಗೆ ಗಾಯ Read More »

ಬೆಂಗಳೂರು-ಕುಕ್ಕೆಸುಬ್ರಹ್ಮಣ್ಯ ಮಧ್ಯೆ ಹೊಸ ರೈಲು| ಎ.12ರಿಂದ ಸಂಚಾರ ಆರಂಭ

ಸಮಗ್ರ ನ್ಯೂಸ್: ಕರ್ನಾಟಕದ ಪ್ರಸಿದ್ಧ ತೀರ್ಥಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಇದೇ 12ರಿಂದ ಬೆಂಗಳೂರಿನಿಂದ ಹೊಸ ರೈಲು ಸಂಚರಿಸಲಿದೆ ಎಂದು ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಬುಧವಾರ ಘೋಷಣೆ ಮಾಡಿದರು. ತುಮಕೂರಿನಲ್ಲಿ ರೈಲ್ವೆ ಗೇಟ್ ಮೇಲ್ಸತುವೆಗೆ ಗುದ್ದಲಿ ಪೂಜೆ ನಡೆಸಿದ ಬಳಿಕ ಮಾತನಾಡಿದ ಅವರು, ಕರ್ನಾಟಕದಲ್ಲಿ ರೈಲ್ವೆ ಇಲಾಖೆಯ ಯೋಜನೆಗಳಿಗೆ ಸಂಬಂಧಿಸಿ ಮಹತ್ವದ ಮಾಹಿತಿ ಹಂಚಿಕೊಂಡರು. ಇದೆ 12 ರಂದು ಬೆಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಒಂದು ಹೊಸ ರೈಲು ಬಿಡುತ್ತಿದ್ದೇವೆ. ದಿನಕ್ಕೆ ನಾಲ್ಕು ಬಾರಿ

ಬೆಂಗಳೂರು-ಕುಕ್ಕೆಸುಬ್ರಹ್ಮಣ್ಯ ಮಧ್ಯೆ ಹೊಸ ರೈಲು| ಎ.12ರಿಂದ ಸಂಚಾರ ಆರಂಭ Read More »