May 2025

ಮಂಗಳೂರು: ಫಾಝಿಲ್ ಹತ್ಯೆ ಪ್ರಕರಣದ ಆರೋಪಿ ಸುಹಾಸ್ ಶೆಟ್ಟಿ ಬರ್ಬರ ಹತ್ಯೆ

ಸಮಗ್ರ ನ್ಯೂಸ್: ಮಂಗಳೂರು ನಗರದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿ ಶೀಟ್ ನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಮಂಗಳೂರಿನ ಬಜ್ಪೆ ಬಳಿಯಲ್ಲಿ ಜುಲೈ 22, 2022ರಂದು ಸುರತ್ಕಲ್ ಫಾಜಿಲ್ ಕೊಲೆಯಾಗಿತ್ತು. ಈ ಪ್ರಕರಣದ ಪ್ರಮುಖ ಆರೋಪಿ ಸುಹಾಸ್ ಶೆಟ್ಟಿ ಆಗಿದ್ದರು. ಪ್ರವೀಣ್ ನೆಟ್ಟಾರು ಕೊಲೆಯ ಪ್ರತೀಕಾರವಾಗಿ ನಡೆದಿದ್ದಂತ ಕೊಲೆ ಫಾಜಿಲ್ ಆಗಿತ್ತು. ಇಂದು ಈ ಪ್ರಕರಣ ಪ್ರಮುಖ ಆರೋಪಿ, ರೌಡಿ ಶೀಟರ್ ಸುಹಾಸ್ ಶೆಟ್ಟಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಹಲವು, ಕೊಲೆ, ಸುಲಿಗೆ ಪ್ರಕರಣಗಳಲ್ಲಿ ಸುಹಾಸ್ ಶೆಟ್ಟಿ […]

ಮಂಗಳೂರು: ಫಾಝಿಲ್ ಹತ್ಯೆ ಪ್ರಕರಣದ ಆರೋಪಿ ಸುಹಾಸ್ ಶೆಟ್ಟಿ ಬರ್ಬರ ಹತ್ಯೆ Read More »

ಸುವರ್ಣ ಕರ್ನಾಟಕಕ್ಕೆ ಮತ್ತೊಂದು ಹಿರಿಮೆ| ಹಣಕಾಸು ನಿರ್ವಹಣೆ, ಅಭಿವೃದ್ಧಿ, ಆಡಳಿತದಲ್ಲಿ ರಾಜ್ಯಕ್ಕೆ ದೇಶದಲ್ಲಿ ಮೂರನೇ ಸ್ಥಾನ

ಸಮಗ್ರ ನ್ಯೂಸ್: ಕರ್ನಾಟಕ ಸರ್ಕಾರದ ಸಾಧನೆಯ ಸರಮಾಲೆ ಮುಂದುವರೆದಿದೆ. ಕರ್ನಾಟಕದ ಹಿರಿಮೆಗೆ ಮತ್ತೊಂದು ಗರಿ ಲಭಿಸಿದ್ದು ಹಣಕಾಸು ನಿರ್ವಹಣೆ, ಹಣಕಾಸು ಅಭಿವೃದ್ಧಿ, ಆಡಳಿತ ಮತ್ತು ಸಾಮಾಜಿಕ ಅಭಿವೃದ್ಧಿಯಲ್ಲಿ ದೇಶದಲ್ಲೇ ಕರ್ನಾಟಕಕ್ಕೆ ಮೂರನೇ ಸ್ಥಾನ ದೊರೆತಿದೆ. ರಾಜ್ಯ ಸರ್ಕಾರದ ದಕ್ಷ ಮತ್ತು ದೂರದೃಷ್ಟಿಯ ಆಡಳಿತದಿಂದಾಗಿ ಕರ್ನಾಟಕದ ಹಿರಿಮೆಗೆ ಮತ್ತೊಂದು ಗರಿ ಸೇರ್ಪಡೆಗೊಂಡಿದೆ. ರಾಜ್ಯಗಳ ಅಭಿವೃದ್ಧಿ ಸಾಮರ್ಥ್ಯ ಆಧಾರದ ಮೇಲೆ ಕ್ರೆಡಿಟ್‌ ರೇಟಿಂಗ್‌ ಏಜೆನ್ಸಿಯಾದ ಕೇರ್‌ಎಡ್ಜ್‌ ರೇಟಿಂಗ್ಸ್‌ ಸಿದ್ಧಪಡಿಸಿರುವ ಶ್ರೇಯಾಂಕ ಪಟ್ಟಿಯಲ್ಲಿ ದೇಶದಲ್ಲೇ ಕರ್ನಾಟಕವು ಮೂರನೇ ಸ್ಥಾನ ಪಡೆದುಕೊಂಡಿದೆ. ಹಣಕಾಸು

ಸುವರ್ಣ ಕರ್ನಾಟಕಕ್ಕೆ ಮತ್ತೊಂದು ಹಿರಿಮೆ| ಹಣಕಾಸು ನಿರ್ವಹಣೆ, ಅಭಿವೃದ್ಧಿ, ಆಡಳಿತದಲ್ಲಿ ರಾಜ್ಯಕ್ಕೆ ದೇಶದಲ್ಲಿ ಮೂರನೇ ಸ್ಥಾನ Read More »

ಮಂಗಳೂರು: ಪಾಕಿಸ್ತಾನ ಪರ ಘೋಷಣೆ ಕೂಗಿದ್ದಕ್ಕೆ ಹತ್ಯೆ| ದೂರು ದಾಖಲಿಸಿದ ಯುವಕ

ಸಮಗ್ರ ನ್ಯೂಸ್: ಮಂಗಳೂರು ಹೊರವಲಯದ ಕುಡುಪುವಿನಲ್ಲಿ ಕ್ರಿಕೆಟ್ ಮ್ಯಾಚ್ ವೇಳೆ ನಡೆದ ಗಲಾಟೆ ವೇಳೆ ವಲಸೆ ಕಾರ್ಮಿಕ ಮೊಹಮ್ಮದ್ ಅಶ್ರಫ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೊಂದು ಎಫ್‌ಐಆರ್ ದಾಖಲಾಗಿದ್ದು, ಮೃತ ವ್ಯಕ್ತಿ ಪಾಕಿಸ್ತಾನ ಪಾಕಿಸ್ತಾನ ಎಂದು ಕೂಗಿದ್ದಕ್ಕೆ ಹಲ್ಲೆ ನಡೆಸಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಕುಡುಪು ಬಳಿ ಗುಂಪು ಹಲ್ಲೆಯಿಂದ ಕೇರಳದ ವ್ಯಕ್ತಿ ಮೃತಪಟ್ಟ ಘಟನೆ ಸಂಬಂಧ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಗುರುವಾರ ಪ್ರಕರಣ ದಾಖಲಾಗಿದೆ. ದೀಪ್

ಮಂಗಳೂರು: ಪಾಕಿಸ್ತಾನ ಪರ ಘೋಷಣೆ ಕೂಗಿದ್ದಕ್ಕೆ ಹತ್ಯೆ| ದೂರು ದಾಖಲಿಸಿದ ಯುವಕ Read More »

ಮಂಗಳೂರು: ಗುಂಪು ಘರ್ಷಣೆ, ಯುವಕನ ಹತ್ಯೆ ಪ್ರಕರಣ| ಮೂವರು ಪೊಲೀಸರು ಅಮಾನತು

ಸಮಗ್ರ ನ್ಯೂಸ್: ಮಂಗಳೂರು ಸಮೀಪದ ಕುಡುಪು ಬಳಿ ನಡೆದಿದ್ದ ಘರ್ಷಣೆಯಲ್ಲಿ ಕೇರಳ ಮೂಲದ ಮುಸ್ಲಿಂ ಯುವಕನ ಹತ್ಯೆ ಪ್ರಕರಣ ಮುಚ್ಚಿ ಹಾಕಲು ಯತ್ನಿಸಿದ್ದ ಆರೋಪ ಕೇಳಿ ಬಂದಿದ್ದ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದೆ. ಕರ್ತವ್ಯ ಲೋಪ ಆರೋಪದಡಿ ಮಂಗಳೂರು ಗ್ರಾಮಾಂತರ ಠಾಣೆ ಇನ್ಸ್‌ಪೆಕ್ಟರ್‌ ಶಿವಕುಮಾರ್, ಹೆಡ್ ಕಾನ್ಸ್‌ಟೇಬಲ್ ಚಂದ್ರ. ಪಿ ಮತ್ತು ಕಾನ್ಸ್‌ಟೇಬಲ್‌ ಯಲ್ಲಾಲಿಂಗ ಅವರನ್ನು ಸಸ್ಪೆಂಡ್‌ ಮಾಡಲಾಗಿದೆ. ಆರಂಭದಲ್ಲಿ ಇನ್ಸ್‌ಪೆಕ್ಟರ್‌ ಶಿವಕುಮಾರ್ ಅಸಹಜ ಸಾವು ಪ್ರಕರಣ ದಾಖಲಿಸಿದ್ದರು. ವಿವಾದ ದೊಡ್ಡದಾದ ಮೇಲೆ ಕೊಲೆ ಪ್ರಕರಣ ದಾಖಲಿಸಿದ್ದರು.

ಮಂಗಳೂರು: ಗುಂಪು ಘರ್ಷಣೆ, ಯುವಕನ ಹತ್ಯೆ ಪ್ರಕರಣ| ಮೂವರು ಪೊಲೀಸರು ಅಮಾನತು Read More »

ನಾಳೆ(ಮೇ.2) ಎಸ್ಎಸ್ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟ

ಸಮಗ್ರ ನ್ಯೂಸ್: ನಾಳೆ ಬೆಳಗ್ಗೆ 11:30 ಕ್ಕೆ ಕರ್ನಾಟಕ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾಗಲಿದೆ ಎಂಬ ಅಧಿಕೃತ ಮಾಹಿತಿ ಲಭ್ಯವಾಗಿದೆ. ಸಚಿವ ಮಧು ಬಂಗಾರಪ್ಪ ಅವರು ನಾಳೆ ಬೆಳಗ್ಗೆ 11:30 ಕ್ಕೆ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟಿಸಲಿದ್ದಾರೆ. ಫಲಿತಾಂಶ ಪ್ರಕಟವಾದ ತಕ್ಷಣ, ಫಲಿತಾಂಶವನ್ನು ಡೌನ್ಲೋಡ್ ಮಾಡಲು ಲಿಂಕ್ ಅನ್ನು ಅಧಿಕೃತ ವೆಬ್ಸೈಟ್ನಲ್ಲಿ ಸಕ್ರಿಯಗೊಳಿಸಲಾಗುತ್ತದೆ. ಆ ಲಿಂಕ್ ಮೂಲಕ, ನೀವು ನಿಮ್ಮ ಫಲಿತಾಂಶವನ್ನು ಡೌನ್ಲೋಡ್ ಮಾಡಲು ಸಾಧ್ಯವಾಗುತ್ತದೆ ಮತ್ತು ಅದರೊಂದಿಗೆ, ರೋಲ್ ಶೇಕಡಾವಾರು,

ನಾಳೆ(ಮೇ.2) ಎಸ್ಎಸ್ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟ Read More »