ಸಮಗ್ರ ನ್ಯೂಸ್: ಮಂಗಳೂರು ಹೊರವಲಯದ ಬಜ್ಪೆಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಹತ್ಯೆ ಖಂಡಿಸಿ ಇಂದು(ಮೇ.2) ದಕ್ಷಿಣ ಕನ್ನಡ ಜಿಲ್ಲೆ ಬಂದ್ ಗೆ ವಿಶ್ವ ಹಿಂದೂ ಪರಿಷತ್ ಕರೆ ನೀಡಿದೆ.
ಇಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಬಂದ್ ಗೆ ಕರೆ ನೀಡಲಾಗಿದೆ. ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಬಂದ್ ಗೆ ಕರೆ ನೀಡಲಾಗಿದೆ ಎಂದು VHP ಮುಖಂಡ ಶರಣ್ ಪಂಪ್ ವೆಲ್ ತಿಳಿಸಿದ್ದಾರೆ.
ಎಲ್ಲಾ ವ್ಯಾಪಾರ, ವಹಿವಾಟು, ವಾಹನ ಸಂಚಾರ ಬಂದ್ ಮಾಡಲು ಕರೆ ನೀಡಲಾಗಿದೆ. ಸುಹಾಸ್ ಶೆಟ್ಟಿ ಮತ್ತು ಐವರು ಸಹಚರರು ಕಾರ್ ನಲ್ಲಿ ಹೋಗುತ್ತಿದ್ದರು. ಜಿಹಾದ್ ಇಸ್ಲಾಮಿಕ್ ಉಗ್ರ ಮುಸಲ್ಮಾನರು ಹತ್ಯೆ ಮಾಡಿದ್ದಾರೆ. ಇದು ಪೂರ್ವ ನಿಯೋಜಿತ ಕೃತ್ಯ ಎಂದು ಶರಣ್ ಪಂಪ್ ವೆಲ್ ತಿಳಿಸಿದ್ದಾರೆ.
ಮಂಗಳೂರಿನ ಬಜ್ಪೆ ಬಳಿಯಲ್ಲಿ ಜುಲೈ 22, 2022ರಂದು ಸುರತ್ಕಲ್ ಫಾಜಿಲ್ ಕೊಲೆಯಾಗಿತ್ತು. ಈ ಪ್ರಕರಣದ ಪ್ರಮುಖ ಆರೋಪಿ ಸುಹಾನ್ ಶೆಟ್ಟಿ ಆಗಿದ್ದರು. ಪ್ರವೀಣ್ ನೆಟ್ಟಾರು ಕೊಲೆಯ ಪ್ರತೀಕಾರವಾಗಿ ನಡೆದಿದ್ದಂತ ಕೊಲೆ ಫಾಜಿಲ್ ಆಗಿತ್ತು. ಈ ಪ್ರಕರಣ ಪ್ರಮುಖ ಆರೋಪಿ ಸುಹಾನ್ ಶೆಟ್ಟಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಈ ಸಂಬಂಧ ಬಜ್ಪೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.