ಚಾಮರಾಜನಗರ ಡಿಸಿ ಕಚೇರಿಗೆ ಬಾಂಬ್ ಬೆದರಿಕೆ: ನೌಕರರಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಇತ್ತೀಚೆಗೆ ಬಾಂಬ್ ಬೆದರಿಕೆ ಕರೆಗಳು ಹೆಚ್ಚಾಗುತ್ತಲೇ ಇದೆ. ಇದೀಗ ಮತ್ತೊಮ್ಮೆ ಚಾಮರಾಜನಗರ ಹಾಗೂ ರಾಯಚೂರು ಜಿಲ್ಲಾಧಿಕಾರಿ ಕಚೇರಿ ಸ್ಫೋಟಿಸುವುದಾಗಿ ಇ-ಮೇಲ್ ಮೂಲಕ ಬೆದರಿಕೆ ಸಂದೇಶ ಬಂದಿದೆ. ಚಾಮರಾಜನಗರ ಜಿಲ್ಲಾಧಿಕಾರಿ ಕಚೇರಿ ಇಂದು (ಮೇ 02) ಮಧ್ಯಾಹ್ನ 3 ಗಂಟೆಯೊಳಗೆ ಸ್ಫೋಟವಾಗಲಿದೆ ಎಂದು ಅಪರಿಚಿತನಿಂದ ಸಂದೇಶ ಬಂದಿದೆ. ಇದರಿಂದ ಕಚೇರಿಯ ಪ್ರತಿಯೊಂದು ಕಡೆಗಳಲ್ಲಿ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ. ಹೀಗಾಗಿ ಚಾಮರಾಜನಗರ ಜಿಲ್ಲಾಧಿಕಾರಿ ಕಚೇರಿ ನೌಕರರಿಗೆ ರಜೆ ನೀಡಲಾಗಿದೆ.

Ad Widget .

ಚಾಮರಾಜನಗರ ಜಿಲ್ಲಾಧಿಕಾರಿ ಕಚೇರಿ ಸ್ಫೋಟಿಸುವ ಬೆದರಿಕೆ ಇ-ಮೇಲ್ ಬಂದ ಬೆನ್ನಲ್ಲೆ ಖಾಕಿ ಪಡೆ ಫುಲ್ ಅಲರ್ಟ್ ಆಗಿದೆ. ಬಾಂಬ್ ನಿಷ್ಕ್ರೀಯ ದಳ ಜಿಲ್ಲಾಧಿಕಾರಿ ಕಚೇರಿಯ ಇಂಚಿಂಚು ಮೂಲೆಯನ್ನ ತಪಾಸಣೆ ನಡೆಸಿದೆ. ಕೂಡಲೇ ಜಿಲ್ಲಾಧಿಕಾರಿ ಕಚೇರಿಯಲ್ಲಿದ್ದ ಸಿಬ್ಬಂದಿಗಳನ್ನ ಪೊಲೀಸರು ಆಚೆ ಕಳಿಸಿದ್ದು, ಮಧ್ಯಾಹ್ನ 3 ಗಂಟೆಯವರೆಗೂ ಯಾರು ಜಿಲ್ಲಾಧಿಕಾರಿ ಕಚೇರಿಗೆ ಬಾರದಂತೆ ಜಿಲ್ಲಾಡಳಿತ ಸೂಚನೆ ನೀಡಿತ್ತು.

Ad Widget . Ad Widget .

ಚಾಮರಾಜನಗರ ಎಸ್‌ಪಿ ಕವಿತಾಗೆ ಜಿಲ್ಲಾಡಳಿತ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಚಾಮರಾಜನಗರ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇ-ಮೇಲ್ ಬಂದ ಅಕೌಂಟ್ ಕುರಿತು ಮಾಹಿತಿ ಕಲೆ ಹಾಕಲಾಗುತ್ತಿದೆ.

Leave a Comment

Your email address will not be published. Required fields are marked *