ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂ ಕಾರ್ಯಕರ್ತ ಹಾಗೂ ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಮೇ 1 ರಂದು ನಡೆದಿದೆ. ಇದೀಗ ತನಿಖೆಯು ನಡೆಯುತ್ತಿದ್ದು ಇದರ ಬೆನ್ನಲ್ಲೇ ಮಂಗಳೂರಿನಲ್ಲಿ ಹಿಂದೂ ಮುಖಂಡರಿಗೆ ಕಿಡಿಗೇಡಿಗಳಿಂದ ಜೀವ ಬೆದರಿಕೆ ಹಾಕಲಾಗುತ್ತಿದೆ. ಮುಂದಿನ ಟಾರ್ಗೆಟ್ ಶರಣ್ ಪಂಪ್ವೆಲ್ ಮತ್ತು ಭರತ್ ಕುಮ್ಡೇಲ್ ಎಂದು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ವೈರಲ್ ಮಾಡಲಾಗಿದೆ.
ಮೇ 5ರಂದು ರಾತ್ರಿ 9.30ಕ್ಕೆ ನಿನ್ನ ಸ್ಥಳದಲ್ಲೇ ಕೊಲ್ಲುವುದಾಗಿ ಕಿಡಿಗೇಡಿಗಳು ಹಿಂದೂ ಮುಖಂಡ ಭರತ್ ಕುಮ್ಡೇಲ್‌ಗೆ ಜೀವ ಬೆದರಿಕೆ ಹಾಕಿದ್ದು, ಪೋಸ್ಟ್ ವೈರಲ್ ಮಾಡಿದ್ದಾರೆ. ಭರತ್ ಕುಮ್ಡೇಲ್ ಎಸ್ಡಿಪಿಐ ಮುಖಂಡ ಅಶ್ರಫ್ ಹತ್ಯೆಯ ಪ್ರಮುಖ ಆರೋಪಿ. ಎಸ್ಡಿಪಿಐನಲ್ಲಿ ಮುಂಚೂಣಿಯಲ್ಲಿದ್ದ ಮುಖಂಡ ಅಶ್ರಫ್ ಕಲಾಯಿ ಅನ್ನು 2017ರ ಜೂನ್ 21ರಂದು ಬಂಟ್ವಾಳದ ಬೆಂಜನಪದವು ಎಂಬಲ್ಲಿ ಬರ್ಬರವಾಗಿ ಹತ್ಯೆಗೈದಿದ್ದರು. ಅಶ್ರಫ್ ಕೊಲೆ ಬಳಿಕ ಪ್ರತೀಕಾರವಾಗಿ ಶರತ್ ಮಡಿವಾಳ ಹತ್ಯೆಯಾಗಿತ್ತು. ಅಶ್ರಫ್ ಕೊಂದ ಭರತ್ ನನ್ನ ಮರೆತಿಲ್ಲ. Wait and watch ಎಂದು ಕೇವಲ ಎಂಟು ಗಂಟೆ ಮೊದಲು On fixed leader ಎಂಬ ಹೆಸರಿನ ಇನ್ಸ್ಟಾಗ್ರಾಂ ಪೇಜ್ನಲ್ಲಿ ಮತ್ತೊಂದು ಪೋಸ್ಟ್ ಹಂಚಿಕೊಳ್ಳಲಾಗಿದೆ.
ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ವೆಲ್ಗೂ ಜೀವ ಬೆದರಿಕೆ ಹಾಕಲಾಗಿದೆ. ಮುಂದಿನ ಟಾರ್ಗೆಟ್ ಶರಣ್ ಪಂಪ್ವೆಲ್, ಶರಣ್ ಹತ್ಯೆಯಾಗಲು ತಯಾರಾಗಿರು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಲಾಗಿದೆ.