ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಖಂಡಿಸಿ ಚಿಕ್ಕಮಗಳೂರು ಬಂದ್| ಅನುಮತಿ ಇಲ್ಲದಿದ್ದರೂ ಕಾಫಿನಾಡು ಸ್ಥಬ್ದ

ಸಮಗ್ರ ನ್ಯೂಸ್: ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯನ್ನು ಖಂಡಿಸಿ, ವಿಶ್ವ ಹಿಂದೂ ಪರಿಷತ್ (ವಿ.ಎಚ್.ಪಿ.) ಹಾಗೂ ಬಜರಂಗದಳ ನೇತೃತ್ವದಲ್ಲಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಸ್ವಯಂಪ್ರೇರಿತ ಬಂದ್‌ಗೆ ಕರೆ ನೀಡಲಾಗಿದೆ. ಜಿಲ್ಲಾಡಳಿತದ ವಿರೋಧದ ನಡುವೆಯೂ ಈ ಬಂದ್‌ಗೆ ಕಾಫಿನಾಡಿನ ಗ್ರಾಮೀಣ ಭಾಗಗಳಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

Ad Widget . Ad Widget . Ad Widget . Ad Widget . Ad Widget . Ad Widget .

ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸೇರಿದಂತೆ ಮಂಗಳೂರು-ಚಿಕ್ಕಮಗಳೂರು ಗಡಿ ಗ್ರಾಮಗಳು ಸಂಪೂರ್ಣ ಸ್ಥಬ್ಧವಾಗಿವೆ. ಬೆಳಿಗ್ಗೆ 9 ಗಂಟೆಯಾದರೂ ಅಂಗಡಿ-ಮುಂಗಟ್ಟುಗಳು ತೆರೆಯದೇ ಇದ್ದು, ಜನಜೀವನ ಸಂಪೂರ್ಣ ಸ್ತಬ್ಧವಾಗಿದೆ. ಕೊಟ್ಟಿಗೆಹಾರದಲ್ಲಿ ವಾಣಿಜ್ಯ ಚಟುವಟಿಕೆಗಳು ಸ್ಥಗಿತಗೊಂಡಿವೆ, ಮತ್ತು ಸ್ಥಳೀಯರು ಬಂದ್‌ಗೆ ಬೆಂಬಲ ಸೂಚಿಸಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಜಿಲ್ಲಾಡಳಿತವು ಬಂದ್‌ಗೆ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದರೂ, ಸಂಘಪರಿವಾರದ ಕಾರ್ಯಕರ್ತರು ಶಾಂತಿಯುತವಾಗಿ ಪ್ರತಿಭಟನೆ ನಡೆಸಿದ್ದಾರೆ. ಪೊಲೀಸರು ಜಿಲ್ಲೆಯಾದ್ಯಂತ ಬಿಗಿ ಭದ್ರತೆ ಒದಗಿಸಿದ್ದು, ಯಾವುದೇ ಅಹಿತಕರ ಘಟನೆಗಳು ವರದಿಯಾಗಿಲ್ಲ.

Leave a Comment

Your email address will not be published. Required fields are marked *