ಸಮಗ್ರ ನ್ಯೂಸ್: ಪಹಲ್ಗಾಮ್ ಪ್ರತಿಕಾರವಾಗಿ ಭಾರತೀಯ ಸೇನೆಯ ಆಪರೇಷನ್ ಸಿಂಧೂರ್ ಗೆ ಪಾಕಿಸ್ತಾನ ಇದೀಗ ನಲುಗಿಹೋಗಿದೆ. ಭಾರತದಲ್ಲಿ ಸಂಭ್ರಮಾಚರಣೆ ನಡೆಯುತ್ತಿದೆ. ಆಪರೇಷನ್ ಸಿಂಧೂರ್ ಭಾರತೀಯ ಸೇನಾ ಕಾರ್ಯಾಚರಣೆಗೆ ಇನ್ನಷ್ಟು ಸ್ಥೈರ್ಯ ತುಂಬಲು ರಾಜ್ಯದ ಎಲ್ಲ ಮುಜರಾಯಿ ಇಲಾಖೆಯ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನೆರವೇರಿಸುವಂತೆ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಅವರು ಸೂಚನೆ ನೀಡಿದ್ದಾರೆ.
ಭಾರತೀಯ ಸೈನ್ಯದ ಕಾರ್ಯಾಚರಣೆ ಬಗ್ಗೆ ನಮಗೆ ಯಾವಾಗಲೂ ಹೆಮ್ಮೆ ಇದೆ. ಮಾಜಿ ಪ್ರಧಾನಿಗಳಾದ ಇಂದಿರಾ ಗಾಂಧಿ ಮತ್ತು ಜವಾಹರ್ ಲಾಲ್ ನೆಹರು ಅವರ ಅವಧಿಯಲ್ಲಿ ಪಾಕಿಸ್ತಾನ ಮತ್ತು ಚೀನಾ ವಿರುದ್ಧ ನಡೆದ ಯುದ್ದದಲ್ಲೂ ಕೂಡ ನಮ್ಮ ಸೇನೆ ತಕ್ಕ ಹೀಗೆ ಕಾರ್ಯಾಚರಣೆ ನಡೆಸಿದೆ. ಪುಲ್ವಾಮಾ ಘಟನೆ ಆದಾಗಲೇ ಇದನ್ನ ಮಾಡಬೇಕಿತ್ತು. ಕೇಂದ್ರ ಸರ್ಕಾರದ ನಿಲುವನ್ನು ಬೆಂಬಲಿಸುತ್ತೇವೆ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದರು.