ಸಮಗ್ರ ನ್ಯೂಸ್: ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಲಾರಿಗೆ ಹಿಂದಿನಿಂದ ಕಾರು ಡಿಕ್ಕಿಯಾಗಿ 6 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರಿನಲ್ಲಿ ಈ ಅಪಘಾತ ಸಂಭವಿಸಿದೆ. ಹರಿಯಾಣ ಮೂಲದ ಆಡಿ ಕಾರು ಅಪಘಾತಕ್ಕೀಡಾಗಿದೆ.
ಅಪಘಾತದಲ್ಲಿ ಓರ್ವ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರ ಬಗ್ಗೆ ಇನ್ನಷ್ಟೇ ಮಾಹಿತಿ ತಿಳಿದು ಬರಬೇಕಿದೆ.ಅಪಘಾತದಲ್ಲಿ ಗಾಯಗೊಂಡವನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಘಟನಾ ಸ್ಥಳಕ್ಕೆ ಬ್ಯಾಡಿಗೆ ಠಾಣೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ.