ದಾಂಪತ್ಯ ಜೀವನಕ್ಕೆ ಕಾಲಿರಿಸಿದ ಚೈತ್ರಾ ಕುಂದಾಪುರ

ಸಮಗ್ರ ನ್ಯೂಸ್: ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕುಂದಾಪುರ ಅವರು ಇಂದು (ಮೇ.9) ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. 12 ವರ್ಷಗಳ ಪ್ರೀತಿಯ ನಂತರ ಪರಸ್ಪರ ಎರಡೂ ಕುಟುಂಬಗಳ ಒಪ್ಪಿಗೆಯಂತೆ ಉಡುಪಿಯ ಹಿರಿಯಡ್ಕದ ಶ್ರೀಕಾಂತ್ ಕಶ್ಯಪ್ ಜೊತೆಗೆ ಚೈತ್ರಾ ಕುಂದಾಪುರ ಹಸೆಮಣೆಯೇರಿದ್ದಾರೆ.

Ad Widget ... ..

ಕುಟುಂಬಕ್ಕೆ ಆಪ್ತರಾದ 100 ಜನರಿಗೆ ಮಾತ್ರವೇ ಮದುವೆ ಆಹ್ವಾನ ನೀಡಲಾಗಿತ್ತು. ವೈದಿಕ ಶಾಸ್ತ್ರದಂತೆ ಮದುವೆ ಕಾರ್ಯಕ್ರಮ ನಡೆಯಿತು. ಬಿಗ್ ಬಾಸ್ ಸ್ಪರ್ಧಿಗಳಾದ ರಜತ್ ಹಾಗೂ ಗೋಲ್ಡ್ ಸುರೇಶ್ ಮದುವೆಯಲ್ಲಿ ಭಾಗಿಯಾಗಿ ನವದಂಪತಿಗೆ ಶುಭ ಹಾರೈಸಿದರು.

Ad Widget

ಕಾಲೇಜಿನಲ್ಲಿ ಓದುತ್ತಿದ್ದ ವೇಳೆ ಶ್ರೀಕಾಂತ್ ಕಶ್ಯಪ್ ಹಾಗೂ ಚೈತ್ರಾ ನಡುವೆ ಪರಿಚಯವಾಗಿತ್ತು. ಶ್ರೀಕಾಂತ್ ಆ್ಯನಿಮೇಷನ್ ಕೋರ್ಸ್ ಮಾಡಿದ್ದು, ಸುದ್ದಿವಾಹಿನಿವೊಂದರಲ್ಲಿ ಚೈತ್ರಾ ಜೊತೆ ಕೆಲಸ ಮಾಡಿದ್ದರು. ಇದೀಗ ಜ್ಯೋತಿಷ್ಯ, ವಾಸ್ತು, ಪೌರೋಹಿತ್ಯದ ಕೆಲಸ ಮಾಡುತ್ತಿದ್ದಾರೆ.

Leave a Comment

Your email address will not be published. Required fields are marked *