ಸಮಗ್ರ ನ್ಯೂಸ್: ಗಡಿಯಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆ, ಭಾರತ ಮತ್ತು ಪಾಕಿಸ್ತಾನ ಪೂರ್ಣ ಮತ್ತು ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ ಎಂದು ಎಎನ್‌ಐ ಸುದ್ದಿ ಸಂಸ್ಥೆ ರಾಯಿಟರ್ಸ್ ಉಲ್ಲೇಖಿಸಿ ವರದಿ ಮಾಡಿದೆ.
ಡೊನಾಲ್ಡ್ ಟ್ರಂಪ್ ಸಹ ಟ್ವೀಟ್ ಮಾಡುವ ಮೂಲಕ ಮಾಹಿತಿಯನ್ನು ನೀಡಿದ್ದಾರೆ. ಎರಡು ದೇಶಗಳು ಬುದ್ಧಿವಂತಿಕೆಯನ್ನು ಪ್ರದರ್ಶಿಸಿವೆ. ಎರಡು ದೇಶಗಳು ಕದನ ವಿರಾಮಕ್ಕೆ ಒಪ್ಪಿಕೊಂಡಿರೋದಕ್ಕೆ ಸಂತೋಷವಾಗಿದೆ ಎಂದು ಟ್ರಂಪ್ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಇತ್ತ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ರುಬಿಯೋ ಅವರು ಸಹ ಟ್ರಂಪ್ ಟ್ವೀಟ್‌ನ್ನ ರೀ ಟ್ವೀಟ್ ಮಾಡಿದ್ದಾರೆ.
ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ರೂಬಿಯೊ, ವಿದೇಶಾಂಗ ಸಚಿವ ಎಸ್.ಜೈಶಂಕರ್ ಮತ್ತು ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಜೊತೆ ಪ್ರತ್ಯೇಕವಾಗಿ ಮಾತನಾಡಿ, ಉದ್ವಿಗ್ನತೆಯನ್ನು ಶಮಗೊಳಿಸಿ ಎಂದು ಒತ್ತಿ ಹೇಳಿದ್ದರು. ಜೊತೆಗೆ ಭಯೋತ್ಪಾದಕ ಗುಂಪುಗಳಿಗೆ ಬೆಂಬಲ ನೀಡುವುದನ್ನು ನಿಲ್ಲಿಸಿ ಎಂದು ಪಾಕಿಸ್ತಾನಕ್ಕೆ ತಾಕೀತು ಮಾಡಿದ್ದರು.
ಇಂದು ಬೆಳಗ್ಗೆ ಮತ್ತೆ ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಹಾಗೂ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಮಾತುಕತೆ ನಡೆಸಿದ್ದರು. ಆಗ ಭಾರತ ದಾಳಿ ನಿಲ್ಲಿಸಿದರೆ ಪಾಕಿಸ್ತಾನವೂ ದಾಳಿ ಮಾಡುವುದಿಲ್ಲ ಎಂದು ಮುನೀರ್ ಹೇಳಿದ್ದರು. ಈಗ ಉಭಯ ದೇಶಗಳ ಮಧ್ಯದ ಯುದ್ಧ ನಿಂತಿದೆ.
ಪಾಕ್ ದಾಳಿಗೆ ಭಾರತ ತೀವ್ರ ಉತ್ತರ ನೀಡುತ್ತಿದ್ದು, ಯುದ್ಧ ಕಾರ್ಮೋಡ ಆವರಿಸಿದ್ದರಿಂದ ಇದೀಗ ಕದನವಿರಮಾನವನ್ನು ಉಭಯ ರಾಷ್ಟ್ರಗಳು ಶಾಂತಿ ನೆಲೆಸಲು ಒಪ್ಪಿಗೆ ಸೂಚಿಸಿವೆ ಎಂದು ಟ್ರಂಪ್ ಖಚಿತಪಡಿಸಿದ್ದಾರೆ.