ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. IAF ಮಹತ್ವದ ಹೇಳಿಕೆ..!

ಸಮಗ್ರ ನ್ಯೂಸ್: ಭಾರತ ಮತ್ತು ಪಾಕಿಸ್ತಾನ ಮಧ್ಯೆ ದಾಳಿಗಳು ನಡೆಯುತ್ತಿದ್ದು. ಇದೀಗ ಕದನವಿರಾಮ ಸಿಕ್ಕಿದೆ. ಆದರೆ ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನ ನಿನ್ನೆ ರಾತ್ರಿ ಜಮ್ಮು ಕಾಶ್ಮೀರ ಮತ್ತು ಗಡಿ ರಾಜ್ಯಗಳ ಮೇಲೆ ಡ್ರೋನ್ ದಾಳಿ ಮಾಡಿದೆ. ಇದೇ ವಿಚಾರವಾಗಿ ಭಾರತೀಯ ವಾಯುಪಡೆ( IAF) ಟ್ವೀಟ್ ಮಾಡಿದ್ದು ಆಪರೇಷನ್ ಸಿಂಧೂರ್(Operation Sindoor) ಮುಂದುವರೆದಿದೆ, ಸರಿಯಾದ ಸಮಯದಲ್ಲಿ ಸೂಕ್ತ ಮಾಹಿತಿಗಳನ್ನು ಹಂಚಿಕೊಳ್ಳಲಾಗುವುದು ಎಂದು ಭಾರತೀಯ ವಾಯುಪಡೆ(ಐಎಎಫ್) ಮಾಹಿತಿ ನೀಡಿದೆ.

Ad Widget .

ಭಾರತೀಯ ವಾಯುಪಡೆ (ಐಎಎಫ್) ಆಪರೇಷನ್ ಸಿಂಧೂರ್ ಅಡಿಯಲ್ಲಿ ನಿಯೋಜಿಸಲಾದ ಕಾರ್ಯಗಳನ್ನು ಅತ್ಯಂತ ನಿಖರತೆ ಮತ್ತು ವೃತ್ತಿಪರತೆಯಿಂದ ಯಶಸ್ವಿಯಾಗಿ ನಿರ್ವಹಿಸಿದೆ. ಈ ಕಾರ್ಯಾಚರಣೆಗಳನ್ನು ರಾಷ್ಟ್ರೀಯ ಉದ್ದೇಶಗಳಿಗೆ ಅನುಗುಣವಾಗಿ ಯೋಜಿತ ಮತ್ತು ರಹಸ್ಯ ರೀತಿಯಲ್ಲಿ ನಡೆಸಲಾಯಿತು. ಅಭಿಯಾನ ಇನ್ನೂ ನಡೆಯುತ್ತಿರುವುದರಿಂದ, ವಿವರವಾದ ಮಾಹಿತಿಯನ್ನು ಸೂಕ್ತ ಸಮಯದಲ್ಲಿ ಹಂಚಿಕೊಳ್ಳಲಾಗುವುದು. ಊಹಾಪೋಹಗಳಿಗೆ ಕಿವಿಗೊಡಬೇಡಿ ಮತ್ತು ಅಸ್ಪಷ್ಟ ಮಾಹಿತಿಯನ್ನು ಪ್ರಸಾರ ಮಾಡುವುದನ್ನು ತಪ್ಪಿಸಿ ಎಂದು ವಾಯುಪಡೆ ಎಲ್ಲರಿಗೂ ಮನವಿ ಮಾಡುತ್ತದೆ ಎಂದು ಹೇಳಿದೆ.

Ad Widget . Ad Widget .

Leave a Comment

Your email address will not be published. Required fields are marked *