ಸಮಗ್ರ ನ್ಯೂಸ್: ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನಕ್ಕೆ ಪ್ರಧಾನಿ ಮೋದಿ ಎಚ್ಚರಿಕೆ ನೀಡಿದ್ದು, ಮತ್ತೆ ಏನಾದರೂ ದಾಳಿ ಮಾಡಿದರೆ ತಕ್ಕ ತಿರುಗೇಟು ನೀಡುತ್ತೇವೆ ಎಂದು ಅಮೆರಿಕ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ತಿಳಿಸಿದ್ದಾರೆ. ದೂರವಾಣಿಯ ಮೂಲಕ ಜೆ.ಡಿ. ವ್ಯಾನ್ಸ್ ಅವರೊಂದಿಗೆ ಚರ್ಚೆ ನಡೆಸಿದ ಮೋದಿ, ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನಕ್ಕೆ ಸ್ಪಷ್ಟ ಸಂದೇಶ ನೀಡಿದ್ದಾರೆ.
ಕಾಶ್ಮೀರ ವಿವಾದ ಬಗೆಹರಿಸಲು ಯಾರ ಮಧ್ಯಸ್ಥಿಕೆಯೂ ಬೇಡ. ಯಾರ ಮಧ್ಯಸ್ಥಿಕೆ ಕೂಡ ನಮಗೆ ಬೇಕಾಗಿಲ್ಲ ಎಂದು ಹೇಳಿದ್ದಾರೆ. ಪಿಒಕೆ ಮರಳುವಿಕೆ ಚರ್ಚಿಸಬೇಕಾದ ಏಕೈಕ ವಿಷಯ, ಯಾರೂ ಮಧ್ಯಸ್ಥಿಕೆ ವಹಿಸಲು ಬಯಸುವುದಿಲ್ಲ. ಎಂದು ಪಾಕಿಸ್ತಾನದೊಂದಿಗಿನ ಉದ್ವಿಗ್ನತೆ ಶಮನ ಒಪ್ಪಂದದ ಕುರಿತು ಚರ್ಚೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಪಾಕಿಸ್ತಾನದೊಂದಿಗೆ ಚರ್ಚಿಸಲು ಉಳಿದಿರುವ ಏಕೈಕ ವಿಷಯವೆಂದರೆ ಪಾಕ್ ಆಕ್ರಮಿತ ಕಾಶ್ಮೀರ(ಪಿಒಕೆ) ಮರಳುವಿಕೆ. ಪಾಕಿಸ್ತಾನ ಭಯೋತ್ಪಾದಕರನ್ನು ನಿರ್ವಹಿಸುವ ಬಗ್ಗೆ ಮಾತನಾಡುವಾಗ ಮಾತ್ರ ಮಾತುಕತೆ ನಡೆಯಲಿದೆ ಎಂದು ಪ್ರಧಾನಿ ಮೋದಿ ಸ್ಪಷ್ಟವಾಗಿ ಹೇಳಿದ್ದಾರೆ.
ಕಾಶ್ಮೀರದ ಬಗ್ಗೆ ನಮಗೆ ಸ್ಪಷ್ಟವಾದ ನಿಲುವು ಇದೆ, ಒಂದೇ ಒಂದು ವಿಷಯ ಉಳಿದಿದೆ – ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ಮರಳುವಿಕೆ. ಮಾತನಾಡಲು ಬೇರೆ ಏನೂ ಇಲ್ಲ. ಅವರು ಭಯೋತ್ಪಾದಕರನ್ನು ಹಸ್ತಾಂತರಿಸುವ ಬಗ್ಗೆ ಮಾತನಾಡಿದರೆ, ನಾವು ಮಾತನಾಡಬಹುದು. ನನಗೆ ಬೇರೆ ಯಾವುದೇ ವಿಷಯದ ಉದ್ದೇಶವಿಲ್ಲ. ಈ ವಿಷಯದ ಬಗ್ಗೆ ಭಾರತ ಯಾವುದೇ ರೀತಿಯ ಮಧ್ಯಸ್ಥಿಕೆಯನ್ನು ಬಯಸುವುದಿಲ್ಲ. ಯಾರೂ ಮಧ್ಯಸ್ಥಿಕೆ ವಹಿಸುವುದು ನಮಗೆ ಇಷ್ಟವಿಲ್ಲ. ಅಗತ್ಯವೂ ಇಲ್ಲ ಎಂದು ಪ್ರಧಾನಿ ಸ್ಪಷ್ಟಪಡಿಸಿದ್ದಾರೆ.