ಇಂದು ರಾತ್ರಿ 8 ಗಂಟೆಗೆ ರಾಷ್ಟ್ರವನ್ನುದ್ದೇಶಿಸಿ ಪ್ರಧಾನಿ ಮಾತು| ‘ಆಪರೇಷನ್ ಸಿಂಧೂರ್’ ಬಳಿಕ ಮೊದಲ ಬಾರಿ ಮಾತನಾಡಲಿರುವ ನಮೋ

ಸಮಗ್ರ ನ್ಯೂಸ್: ಇಂದು ರಾತ್ರಿ 8 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ದೇಶವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಬಳಿಕ ಇದೇ ಮೊದಲ ಬಾರಿ ಪ್ರಧಾನಿ ಮೋದಿ ದೇಶದವನ್ನುದ್ದೇಶಿಸಿ ಮಾತನಾಡಲಿದ್ದಾರೆ.

Ad Widget ... ..

ಪಾಕಿಸ್ತಾನದ ಉಗ್ರರ ವಿರುದ್ಧ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಹಾಗೂ ಭಾರತ-ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಣೆ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ಮೋದಿ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದು, ಆಪರೇಷನ್ ಸಿಂಧೂರ್ ಬಗ್ಗೆ ಸ್ವತಃ ಮಾಹಿತಿ ನೀಡಲಿದ್ದಾರೆ.

Ad Widget

 ಪಾಕಿಸ್ತಾನ ರಾತ್ರಿಯಾಗುತ್ತಿದ್ದಂತೆ ಜಮ್ಮು, ಕಾಶ್ಮೀರ, ಪಂಜಾಬ್, ರಾಜಸ್ಥಾನ ಭಾಗದಲ್ಲಿ ಅಪ್ರಚೋದಿತ ಡ್ರೋನ್ ಮತ್ತು ಕ್ಷಿಪಣಿ ದಾಳಿಯನ್ನು ನಡೆಸಿತ್ತು. ಭಾರತೀಯ ಸೇನೆ ಈ ದಾಳಿಯನ್ನು ಯಶಸ್ವಿಯಾಗಿ ಹಿಮ್ಮೆಟ್ಟಿಸಿತ್ತು. ಶನಿವಾರ ಕದನವಿರಾಮ ಘೋಷನೆಯಾಗಿದ್ರೂ ರಾತ್ರಿ ಪಾಕಿಸ್ತಾನದಿಂದ ಡ್ರೋನ್ ದಾಳಿ ನಡೆದಿತ್ತು. ಇಂದು ದೇಶವನ್ನು ಉದ್ದೇಶಿಸಿ ಮಾತನಾಡಲಿರುವ ಪ್ರಧಾನಿಗಳು ಈ ಎಲ್ಲಾ ವಿಷಯಗಳ ಕುರಿತು ಮಾತನಾಡುವ ಸಾಧ್ಯತೆಗಳಿವೆ .

Leave a Comment

Your email address will not be published. Required fields are marked *