ಸಮಗ್ರ ನ್ಯೂಸ್: ಭಾರತ-ಪಾಕ್ ನಡುವೆ ಉದ್ವಿಗ್ನ ಪರಿಸ್ಥಿತಿ ಇತ್ತು ಇದೆ ಸಂದರ್ಭದಲ್ಲಿ ಕಾಂಗ್ರೆಸ್ ಟ್ವೀಟ್ ಮಾಡುವ ಮೂಲಕ ಶಾಂತಿ ಮಂತ್ರ ಜಪಿಸಿತ್ತು. ಇದು ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಕರ್ನಾಟಕ ಕಾಂಗ್ರೆಸ್ ನಿಂದ ಮತ್ತೊಂದು ಎಡವಟ್ಟಾಗಿದೆ. ಪ್ರಧಾನಿ ನರೇಂದ್ರ ಮೋದಿ ಟೀಕಿಸುವ ಭರದಲ್ಲಿ ಕಾಶ್ಮೀರ ಪಾಕ್ಗೆ ಸೇರಿದ ಮ್ಯಾಪ್ ಹಾಕಿ ಪೋಸ್ಟ್ ಮಾಡಲಾಗಿದೆ. ಆ ಮೂಲಕ ಕಾಂಗ್ರೆಸ್ ಕಾಶ್ಮೀರವನ್ನ ಪಾಕಿಸ್ತಾನಕ್ಕೆ ಬಿಟ್ಟುಕೊಟ್ಟಿದೆ. ಬಳಿಕ ಎಡವಟ್ಟು ಗೊತ್ತಾಗ್ತಿದ್ದಂತೆ ಕಾಂಗ್ರೆಸ್ ಪೋಸ್ಟ್ ಡಿಲೀಟ್ ಮಾಡಿದೆ.
ಕಾಶ್ಮೀರ ಪಾಕಿಸ್ತಾನಕ್ಕೆ ಸೇರಿದ ಮ್ಯಾಪ್ ಹಾಕಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಲಾಗಿದೆ. ಎಡವಟ್ಟು ಗೊತ್ತಾಗುತ್ತಿದ್ದಂತೆ ಪೋಸ್ಟ್ ಡಿಲೀಟ್ ಮಾಡಲಾಗಿದೆ. ಅಷ್ಟರಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಗೆ ತಿಳಿದಿದ್ದು, ಕೆಪಿಸಿಸಿ ಸಾಮಾಜಿಕ ಜಾಲತಾಣದ ಸಿಬ್ಬಂದಿಗೆ ತೀವ್ರ ತರಾಟೆ ತೆಗೆದುಕೊಂಡಿದ್ದಾರೆ. ಎಐಸಿಸಿಗೂ ರಾಜ್ಯ ಕಾಂಗ್ರೆಸ್ ಎಡವಟ್ಟು ತಲುಪಿದೆ.
ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್ ಇದೆಲ್ಲಾ ಸುಳ್ಳು, ಸಣ್ಣ ತಪ್ಪು ಇತ್ತು. ಅದೆಲ್ಲಾ ಮ್ಯಾಪ್ ತೆಗೆಯೋದಕ್ಕೆ ಆಗಲ್ಲ, ಸರಿ ಪಡಿಸಿದ್ದೇವೆ. ಯಾರು ಕೆಲಸ ಮಾಡುತ್ತಿದ್ದರೋ, ಅವರನ್ನೆಲ್ಲಾ ತೆಗೆದು ಬೀಸಾಕಿದ್ದೇನೆ ಎಂದು ಹೇಳಿದ್ದಾರೆ.