ಮಹಿಳೆಗೆ ಸಾರ್ವಜನಿಕ ಸ್ಥಳದಲ್ಲಿ ಗುಪ್ತಾಂಗ ತೋರಿ ವಿಕೃತಿ| ಗ್ರಾ.ಪಂ ಉಪಾಧ್ಯಕ್ಷನಿಗೆ ಗೇಟ್ ಪಾಸ್ ನೀಡಿದ ಬಿಜೆಪಿ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದ ಗ್ರಾಮ ಪಂಚಾಯತ್‌ ಉಪಾಧ್ಯಕ್ಷನೊಬ್ಬ ಮಹಿಳೆಗೆ ಗುಪ್ತಾಂಗ ತೋರಿಸಿ ವಿಕೃತಿ ಮೆರೆದಿದ್ದ. ಇದೀಗ ಉಪಾಧ್ಯಕ್ಷನ ವಿರುದ್ಧ ಪ್ರಕರಣ ದಾಖಲಾಗುತ್ತಿದ್ದಂತೆ ಆತನನ್ನು ಬಿಜೆಪಿಯಿಂದ ಉಚ್ಛಾಟನೆ ಮಾಡಲಾಗಿದೆ.

Ad Widget ... ..

ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಪದ್ಮನಾಭ ಸಪಲ್ಯ ‌ಮಹಿಳೆಗೆ ಸಾರ್ವಜನಿಕವಾಗಿ ಗುಪ್ತಾಂಗ ತೋರಿಸಿ ವಿಕೃತಿ ಮೆರೆದಿದ್ದ. ಮನೆ ದಾರಿಗೆ ಗೇಟು ಅಳವಡಿಸಿರುವುದನ್ನು ಪ್ರಶ್ನಿಸಿದ್ದಕ್ಕೆ ಮಹಿಳೆಗೆ ಗುಪ್ತಾಂಗ ತೋರಿಸಿದ್ದು, ಈ ಸಂಬಂಧ ಮಹಿಳೆ ವಿಟ್ಲ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಳು.

Ad Widget

ಮೇ 10ರಂದು ವಿಟ್ಲ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ ಬಿಎನ್​ಎಸ್​ 2023ರ ಅಡಿಯಲ್ಲಿ ಪದ್ಮನಾಭ ಸಪಲ್ಯ ವಿರುದ್ಧ ಪ್ರಕರಣ ದಾಖಲಾಗಿತ್ತು. ದೂರು ದಾಖಲಾಗುತ್ತಿದ್ದಂತೆಯೇ ಪದ್ಮನಾಭ ಸಪಲ್ಯ ಅವರ ಭಾರತೀಯ ಜನತಾ ಪಾರ್ಟಿಯ ಪ್ರಾಥಮಿಕ ಸದಸ್ಯತ್ವವನ್ನು ರದ್ದುಗೊಳಿಸಿ, ಪಕ್ಷದಿಂದ ಉಚ್ಚಾಟಿಸಿ ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜರೆಮಾರು ಆದೇಶಿಸಿದ್ದಾರೆ.

Leave a Comment

Your email address will not be published. Required fields are marked *