ರಾಜ್ಯವೇ ಖುಷಿ ಪಡೋ ಸುದ್ದಿ ನೀಡಿದ್ದ ದಿವ್ಯಾವಸಂತ ಮೇಲೆ ಮತ್ತೊಂದು ಕೇಸ್| ಬ್ಲ್ಯಾಕ್ ಮೇಲ್ ಮಾಡಿದ ಆರೋಪದಲ್ಲಿ ಆನಂದ್ ಗುರೂಜಿಯಿಂದ ದೂರು ದಾಖಲು

ಸಮಗ್ರ ನ್ಯೂಸ್: ಮಸಾಜ್ ಪಾರ್ಲರ್ ಹೆಸರಲ್ಲಿ ಬೆದರಿಕೆ ಹಾಗೂ ಸುಲಿಗೆ ಯತ್ನ ನಡೆಸಿದ ಪ್ರಕರಣದಲ್ಲಿ ಈ ಹಿಂದೆ ಆರೋಪಿಯಾಗಿ ತಲೆಮರೆಸಿಕೊಂಡಿದ್ದ ಹಾಗೂ ಇಡೀ ರಾಜ್ಯವೇ ಖುಷಿ ಪಡೋ ಸುದ್ದಿಯಿದು ಎಂದು ಹೇಳಿ ವೈರಲ್‌ ಆಗಿದ್ದ ನಿರೂಪಕಿ ದಿವ್ಯಾ ವಸಂತ ವಿರುದ್ಧ ಇದೀಗ ಮತ್ತೊಂದು ಕೇಸ್ ದಾಖಲಾಗಿದೆ.

Ad Widget ... ..

ಆನಂದ ಗುರೂಜೀ ವಿಡಿಯೋ ಹಾಗೂ ಜಮೀನು ಖರೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ. ಆದರೂ ಈ ಪ್ರಕರಣ ಸಂಬಂಧ ಹಣಕ್ಕಾಗಿ ಬೆದರಿಸಿ ಬ್ಲ್ಯಾಕ್ ಮೇಲ್ ಮತ್ತು ಜೀವಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿರುವ ಗುರೂಜೀ ದೂರು ದಾಖಲಿಸಿದ್ದಾರೆ.

Ad Widget

ಬೆಂಗಳೂರಿನ ಚಿಕ್ಕಜಾಲ ಠಾಣೆಗೆ ದೂರು ನೀಡಿರುವ ಆನಂದ ಗುರೂಜೀ ತಮ್ಮನ್ನು, ಕಾರು ಅಡ್ಡಿಗಟ್ಟಿ ಹಣಕ್ಕೆ ಬ್ಲ್ಯಾಕ್​ಮೇಲ್ ಹಾಗೂ ಜೀವಬೆದರಿಕೆ ಹಾಕಿದ್ದಾರೆ ಎಂದು ಕೃಷ್ಣಮೂರ್ತಿ ಹಾಗೂ ದಿವ್ಯಾ ವಸಂತ ವಿರುದ್ಧ FIR ದಾಖಲಿಸಿದ್ದಾರೆ ಎಂದು ವರದಿಯಾಗಿದೆ.

ಅಶ್ಲೀಲ ವೀಡಿಯೋಗಳನ್ನ ಸೋಶಿಯಲ್ ಮೀಡಿಯಾದಲ್ಲಿ ಹರಿಬಿಡುವುದಾಗಿ ಹಲವು ಯುಟ್ಯೂಬ್ ಚಾನೆಲ್​​​ಗಳ ಮೂಲಕ ಮಾನಹಾನಿ, ಚಾರಿತ್ರ್ಯ ತೇಜೋವಧೆ ಮಾಡಿದ್ದಾರೆ ಎಂದು ಗುರೂಜೀ ದೂರು ನೀಡಿದ್ದು, ಈ ಸಂಬಂಧ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Leave a Comment

Your email address will not be published. Required fields are marked *