ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರಿಗೆ ಗುಡ್ ನ್ಯೂಸ್/ ಗೌರವಧನ ಹೆಚ್ಚಿಸಿದ ಸರ್ಕಾರ

ಸಮಗ್ರ ನ್ಯೂಸ್: ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಅತಿಥಿ ಶಿಕ್ಷಕರು ಮತ್ತು ಪಿಯು ಕಾಲೇಜುಗಳ ಅತಿಥಿ ಉಪನ್ಯಾಸಕರಿಗೊಂದು ಖುಷಿಯ ಸುದ್ದಿ. ಅತಿಥಿ ಶಿಕ್ಷಕರು, ಉಪನ್ಯಾಸಕರ ಮಾಸಿಕ ಗೌರವಧನವನ್ನು ತಲಾ ₹2000 ಹೆಚ್ಚಿಸಿ ಸರ್ಕಾರ ಆದೇಶಿಸಿದೆ. ಇದು 2025-26ನೇ ಸಾಲಿನಲ್ಲಿ ನೇಮಕಗೊಳ್ಳುವ ಅತಿಥಿ ಶಿಕ್ಷಕರು, ಉಪನ್ಯಾಸಕರಿಗೆ ಅನ್ವಯಿಸಲಿದೆ.

Ad Widget .

2025ನೇ ಸಾಲಿನ ಬಜೆಟ್‌ನಲ್ಲಿ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವಧನವನ್ನು ₹2000 ಹೆಚ್ಚಳ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದರು. ಅದರಂತೆ ಈಗ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಗುರುವಾರ ಗೌರವಧನ ಹೆಚ್ಚಿಸಿ ಆದೇಶ ಮಾಡಿದೆ.

Ad Widget . Ad Widget .

ಈ ಆದೇಶಾನುಸಾರ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಮಾಸಿಕ ಗೌರವಧನ ತಲಾ ₹2000 ಏರಿಕೆಯಾಗಲಿದೆ. ಇದರಿಂದ ಕಳೆದ ಸಾಲಿನಲ್ಲಿ ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರಿಗೆ ಇದ್ದ ಮಾಸಿಕ ಗೌರವಧನವನ್ನು ₹10 ಸಾವಿರದಿಂದ ₹12 ಸಾವಿರಕ್ಕೆ ಹೆಚ್ಚಳವಾಗಲಿದೆ. ಪ್ರೌಢ ಶಾಲಾ ಅತಿಥಿ ಶಿಕ್ಷಕರಿಗೆ ಈಗಿರುವ ₹10,500 ಗೌರವಧನ ₹12,500ಕ್ಕೆ ಏರಿಕೆಯಾಗಲಿದೆ. ಅದೇ ರೀತಿ ಸರ್ಕಾರಿ ಪಿಯು ಕಾಲೇಜು ಅತಿಥಿ ಉಪನ್ಯಾಸಕರಿಗೆ ಈವರೆಗೆ ₹12 ಸಾವಿರ ಗೌರವಧನ ನೀಡಲಾಗುತ್ತಿತ್ತು. ಇನ್ನು ಮುಂದೆ ಅದು ₹14 ಸಾವಿರಕ್ಕೆ ಏರಿಕೆಯಾಗಲಿದೆ.

Leave a Comment

Your email address will not be published. Required fields are marked *