ದ್ವಿತೀಯ ಪಿಯುಸಿ – 2ರ ಫಲಿತಾಂಶ ಪ್ರಕಟ| ರಿಸಲ್ಟ್ ಹೀಗೆ ನೋಡಿ…

ಸಮಗ್ರ ನ್ಯೂಸ್: ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶ ಪ್ರಕಟಗೊಂಡಿದೆ. ವಿದ್ಯಾರ್ಥಿಗಳು ಫಲಿತಾಂಶವನ್ನು https://karresults.in ಜಾಲತಾಣಕ್ಕೆ ಭೇಟಿ ನೀಡಿ ವೀಕ್ಷಿಸಬಹುದಾಗಿದೆ.

Ad Widget .

ಈ ಕುರಿತಂತೆ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ 24-04-2025ರಿಂದ ದಿನಾಂಕ 08-05-2025ರವರೆಗೆ ಒಟ್ಟು 332 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಯಿತು. ಈ ಪರೀಕ್ಷೆಗೆ 1,94,077 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. 1,53,620 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಇವರಲ್ಲಿ 60,692 ಮಂದಿ ಉತ್ತೀರ್ಣರಾಗಿದ್ದಾರೆ ಎಂದು ತಿಳಿಸಿದ್ದಾರೆ.

Ad Widget . Ad Widget .

ದ್ವಿತೀಯ ಪಿಯುಸಿ 1 ಮತ್ತು 2ನೇ ಪರೀಕ್ಷೆಗೆ 6,88,678 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಪರೀಕ್ಷೆ-1ರಲ್ಲಿ 4,76,256 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರೇ, ಪರೀಕ್ಷೆ-2ರಲ್ಲಿ 60,692 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ ಎಂದಿದ್ದಾರೆ.

ದ್ವಿತೀಯ ಪಿಯುಸಿ ಪರೀಕ್ಷೆ-1 ಮತ್ತು 2ನೇ ಪರೀಕ್ಷೆಯಲ್ಲಿ ಫಲಿತಾಂಶ ಪೂರ್ಣಗೊಳ್ಳದ ವಿದ್ಯಾರ್ಥಿಗಳಿಗೆ 3ನೇ ಪರೀಕ್ಷೆಯನ್ನು ದಿನಾಂಕ 09-06-2025ರಿಂದ 20-06-2025ರವರೆಗೆ ನಡೆಸಲಾಗುವುದು ಎಂದು ಹೇಳಿದ್ದಾರೆ.

ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ ಹಾಜರಾಗಿದ್ದರೇ https://karresults.nic.in ಜಾಲತಾಣಕ್ಕೆ ಭೇಟಿ ನೀಡಿ, ತಮ್ಮ ನೋಂದಣಿ ಸಂಖ್ಯೆ ಸೇರಿದಂತೆ ಇತರೆ ಮಾಹಿತಿ ನೀಡಿ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ

Leave a Comment

Your email address will not be published. Required fields are marked *