ಸಮಗ್ರ ನ್ಯೂಸ್: ಬೆಲೆ ಏರಿಕೆ ಬಿಸಿ ನಡುವೆಯೇ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಕಾದಿದೆ. ನಂದಿನಿ ಹಾಲಿನ ದರದಲ್ಲಿ ಮತ್ತೆ ಏರಿಕೆ ಆಗುವ ಸಾಧ್ಯತೆ ಇದೆ. ಒಂದೂವರೆ ತಿಂಗಳ ಹಿಂದೆಯಷ್ಟೇ ಹಾಲಿನ ದರ ಏರಿಕೆ ಮಾಡಿದ್ದ ರಾಜ್ಯ ಸರ್ಕಾರ ಇದೀಗ ಗಾಯದ ಮೇಲೆ ಬರೆ ಎಳೆಯಲು ರೆಡಿಯಾಗಿದೆ. ಹೀಗಾಗಿ ಶೀಘ್ರವೇ ಹಾಲಿನ ದರ ಏರಿಕೆ ಮಾಡಿ ಆದೇಶ ಹೊರಡಿಸುವ ಸಾಧ್ಯತೆ ದಟ್ಟವಾಗಿದೆ.
ಕಳೆದ ತಿಂಗಳು ರಾಜ್ಯದಲ್ಲಿ ಹಾಲು, ಮೊಸರಿನ ಬೆಲೆಯನ್ನು ಸರ್ಕಾರ ಲೀಟರ್‌ಗೆ 4 ರೂ. ಏರಿಕೆ ಮಾಡಿತ್ತು. ಇದೇ ತಿಂಗಳ 21ಕ್ಕೆ ಈಗಿನ ಕೆಎಂಎಫ್ (KMF) ಆಡಳಿತ ಮಂಡಳಿಯ ಅವಧಿ ಮುಕ್ತಾಯವಾಗಲಿದೆ. ಅದರ ಬೆನ್ನಲ್ಲೇ ಇದೇ 25ಕ್ಕೆ ಹೊಸ ನಿರ್ದೇಶಕರ ಆಯ್ಕೆ ಆಗಲಿದೆ. ಹೊಸ ಆಡಳಿತ ಮಂಡಳಿ ರಚನೆಯಾದ ಬಳಿಕ ಪರಿಸ್ಥಿತಿಗೆ ಅನುಗುಣವಾಗಿ ಸರ್ಕಾರದ ಮುಂದೆ ಮತ್ತೆ ದರ ಹೆಚ್ಚಳ ಪ್ರಸ್ತಾವನೆ ಸಲ್ಲಿಸಲು ಚರ್ಚೆ ನಡೆಯುತ್ತಿದೆ.
ದರ ಏರಿಕೆಯು ಅಮುಲ್ ಸ್ಟ್ಯಾಂಡರ್ಡ್, ಅಮುಲ್ ಬಫೆಲೋ, ಅಮುಲ್ ಗೋಲ್ಡ್, ಅಮುಲ್ ಸ್ಲಿಮ್ ಎನ್ಟ್ರಿಮ್, ಅಮುಲ್ ಚಾಯ್‌ಮಜಾ, ಅಮುಲ್ ತಾಜಾ ಮತ್ತು ಅಮುಲ್ ಕೌ ಮಿಲ್ಕ್ಗಳಿಗೆ ಅನ್ವಯವಾಗುತ್ತದೆ. ಕಳೆದ ವರ್ಷವಷ್ಟೇ ಗ್ರಾಹಕರಿಗೆ ರಿಲೀಫ್ ನೀಡಲು ಅಮುಲ್ ಸುಮಾರು ಐದು ತಿಂಗಳ ಕಾಲ 1 ಲೀಟರ್ ಮತ್ತು 2 ಲೀಟರ್ ಹಾಲಿನ ಪ್ಯಾಕ್‌ಗಳಲ್ಲಿ ಕ್ರಮವಾಗಿ 50 ಮಿಲಿ ಮತ್ತು 100 ಮಿಲಿ ಹೆಚ್ಚುವರಿ ಹಾಲನ್ನು ಉಚಿತವಾಗಿ ನೀಡಿತ್ತು. ಇದಲ್ಲದೆ, 2025ರ ಜನವರಿಯಲ್ಲಿ, 1 ಲೀಟರ್ ಪ್ಯಾಕ್‌ನ ಬೆಲೆಯನ್ನು 1 ರೂ. ಕಡಿಮೆ ಮಾಡಿತ್ತು.