ನಾಡೋಜ, ನಿವೃತ್ತ ನ್ಯಾಯಮೂರ್ತಿ ಎಸ್.ಆರ್ ನಾಯಕ್ ವಿಧಿವಶ

ಸಮಗ್ರ ನ್ಯೂಸ್: ನಿವೃತ್ತ ನ್ಯಾಯಮೂರ್ತಿ ಎಸ್.ಆರ್ ನಾಯಕ್ (80) ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಎಸ್.ಆರ್ ನಾಯಕ್ ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿ ಸೇರಿದಂತೆ ಅಪಾರ ಸಂಖ್ಯೆಯ ಬಂಧು-ಮಿತ್ರರರು ಹಾಗೂ ಒಡನಾಡಿಗಳನ್ನು ಅಗಲಿದ್ದಾರೆ.

Ad Widget ... ..

ಎಸ್.ಆರ್. ನಾಯಕ್ 1944ರಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಜನಿಸಿದರು. ಅವರ ಪೂರ್ಣ ಹೆಸರು ಸುಬ್ರಾಯ್ ರಾಮ ನಾಯಕ್ ಆಗಿದ್ದು, ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಪ್ರಥಮ ಅಧ್ಯಕ್ಷರಾಗಿದ್ದರು. ಕರ್ನಾಟಕ ಕಾನೂನು ಆಯೋಗದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಎಸ್.ಆರ್ ನಾಯಕ್ ಸೇವೆಯನ್ನು ಪರಿಗಣಿಸಿ, ಹಂಪಿಯ ಕನ್ನಡ ವಿಶ್ವವಿದ್ಯಾಲಯವು ನಾಡೋಜ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.

Ad Widget

ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಮೊದಲ ಅಧ್ಯಕ್ಷರು ಮತ್ತು ಕರ್ನಾಟಕ ಕಾನೂನು ಆಯೋಗದ ಮಾಜಿ ಅಧ್ಯಕ್ಷರು, ಮಾಜಿ ಮುಖ್ಯ ನ್ಯಾಯಮೂರ್ತಿ ಎಸ್.ಆರ್ ನಾಯಕ್​ರವರ ನಿಧನದಿಂದ ತೀವ್ರ ದುಃಖವಾಗಿದೆ. ನ್ಯಾಯ, ಕಾನೂನು ಮತ್ತು ಮಾನವ ಹಕ್ಕುಗಳಿಗೆ ಅವರ ಕೊಡುಗೆಗಳು ಅನುಕರಣೀಯ. ಅವರ ಕುಟುಂಬ, ಸ್ನೇಹಿತರು ಮತ್ತು ಸಹೋದ್ಯೋಗಿಗಳಿಗೆ ನನ್ನ ಹೃತ್ಪೂರ್ವಕ ಸಂತಾಪಗಳು ಎಂದು ಸಿಎಂ ಎಕ್ಸ್​​​ನಲ್ಲಿ ಬರೆದುಕೊಂಡಿದ್ದಾರೆ.

Leave a Comment

Your email address will not be published. Required fields are marked *