ಧರ್ಮಸ್ಥಳದ ಯುವತಿ ಪಂಜಾಬ್ ನಲ್ಲಿ ನಿಗೂಢ ಸಾವು ಪ್ರಕರಣ| ತನಿಖೆಯಲ್ಲಿ ಕೇಸ್ ಗೆ ಸಿಕ್ತು ಬಿಗ್ ಟ್ವಿಸ್ಟ್

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಮೂಲದ ಏರೋನಾಟಿಕ್ಸ್ ಇಂಜಿನಿಯರ್ ನಿಗೂಢ ಸಾವು ಪ್ರಕರಣ‌ದ ಕಾರಣ ತಿಳಿದು ಬಂದಿದೆ.

Ad Widget .

ಯುವತಿ ಆಕಾಂಕ್ಷಾ ಎಸ್ ನಾಯರ್ ಪ್ರೇಮ ವೈಫಲ್ಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುವುದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಧರ್ಮಸ್ಥಳದ ಬೊಳಿಯೂರು ನಿವಾಸಿಯಾಗಿರುವ ಸುರೇಂದ್ರ ನಾಯರ್ ಹಾಗೂ ಸಿಂಧೂದೇವಿ ದಂಪತಿಯ ಪುತ್ರಿ ಆಕಾಂಕ್ಷಾ ಎಸ್ ನಾಯರ್ ಮೇ.17 ರಂದು ಪಂಜಾಬ್​ನ ಪಗ್ವಾರದ ಲವ್ಲಿ ಪ್ರೊಫೆಷನಲ್ ವಿಶ್ವವಿದ್ಯಾಲಯದ ಕಟ್ಟಡದ ನಾಲ್ಕನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Ad Widget . Ad Widget .

ಮೃತ ಆಕಾಂಕ್ಷಾ ಅವರು ಇದೇ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಬಿಜಿಲ್ ಮ್ಯಾಥ್ಯೂ ಎಂಬುವರನ್ನು ಪ್ರೀತಿಸುತ್ತಿದ್ದರು. ಪ್ರಾಧ್ಯಾಪಕ ಬಿಜಿಲ್ ಮ್ಯಾಥ್ಯೂ ಕೇರಳದ ಕೊಟ್ಟಾಯಂ ನಿವಾಸಿಯಾಗಿದ್ದು, ಎರಡು ಮಕ್ಕಳ ತಂದೆಯಾಗಿದ್ದಾರೆ. ಆಕಾಂಕ್ಷಾ ಪ್ರಾಧ್ಯಾಪಕ ಮ್ಯಾಥ್ಯೂ ಅವರ ಮನೆಗೆ ಹೋಗಿ ಮದುವೆಯಾಗುವಂತೆ ಒತ್ತಾಯಿಸಿ ಜಗಳ ಮಾಡಿದ್ದರು. ಬಳಿಕ ಆಕಾಂಕ್ಷಾ ಕಾಲೇಜಿನಲ್ಲೂ‌ ಬಿಜಿಲ್ ಮ್ಯಾಥ್ಯೂ ಅವರ ಜೊತೆ ಜಗಳವಾಡಿದ್ದಾರೆ. ನಂತರ, ಕಟ್ಟಡದ ನಾಲ್ಕನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಆತ್ಮಹತ್ಯೆಗೆ ಪ್ರೇರಣೆ ನೀಡಿದ್ದ ಹಿನ್ನೆಲೆಯಲ್ಲಿ ಮ್ಯಾಥ್ಯೂ ವಿರುದ್ಧ ಪಂಜಾಬ್​ನ ಜಲಂಧರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೋಮವಾರ (ಮೇ.19) ಸಂಜೆ ವೇಳೆಗೆ ಧರ್ಮಸ್ಥಳ ಬೊಳಿಯೂರು ಮನೆಯಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ.

ಆಕಾಂಕ್ಷಾ, 6 ತಿಂಗಳಿಂದ ದೆಹಲಿಯಲ್ಲಿ ಏರೋಸ್ಪೇಸ್ ಇಂಜಿನಿಯರ್​​ ಆಗಿ ಕೆಲಸ ಮಾಡುತ್ತಿದ್ದರು. ಉದ್ಯೋಗಕ್ಕಾಗಿ ಜಪಾನ್​ಗೆ ಹೋಗಲು ಯೋಚಿಸಿದ್ದರು. ಈ ಹಿನ್ನೆಲೆಯಲ್ಲಿ, ಶನಿವಾರ (ಮೇ.19) ಕಾಲೇಜಿಗೆ ತೆರಳಿ ಸರ್ಟಿಫಿಕೇಟ್​ಗಳನ್ನು ತೆಗೆದುಕೊಂಡು ಬರಲು ಹೋಗಿದ್ದರು. ಅಲ್ಲದೆ, ಸರ್ಟಿಫಿಕೇಟ್​ಗಳನ್ನು ತೆಗೆದುಕೊಂಡಿರುವುದಾಗಿ ಪೋಷಕರಿಗೆ ಕರೆ ಮಾಡಿ ಆಕಾಂಕ್ಷಾ ತಿಳಿಸಿದ್ದರು.

ಆತ್ಮಹತ್ಯೆಗೆ ಪ್ರೇರಣೆ ಹಿನ್ನಲೆಯಲ್ಲಿ ಪ್ರಾಧ್ಯಾಪಕ ಮ್ಯಾಥ್ಯೂ ವಿರುದ್ಧ ಪಂಜಾಬ್ ನ ಜಲಂಧರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶ್ವವಿದ್ಯಾನಿಲಯದಿಂದ ಸರ್ಟಿಫಿಕೆಟ್ ಪಡೆಯಲೆಂದು ಪಂಜಾಬಿಗೆ ಹೋಗಿದ್ದ ಆಕಾಂಕ್ಷಾ ಅಲ್ಲಿ ವಿಶ್ವವಿದ್ಯಾನಿಲಯ ಕಟ್ಟಡದಿಂದ ಹಾರಿ ಮೃತಪಟ್ಟಿದ್ದಾರೆ ಎನ್ನುವುದು ಹಲವಾರು ಅನುಮಾನಗಳಿಗೆ ಕಾರಣವಾಗಿತ್ತು. ಇದೀಗ ಆಕಾಂಕ್ಷಾ ಅವರ ತಂದೆತಾಯಿ ಹಾಗೂ ಸಹೋದರ ಪಂಜಾಬಿಗೆ ತೆರಳಿ ಪೊಲೀಸರಿಂದ ಮಾಹಿತಿಗಳನ್ನು ಪಡೆದುಕೊಂಡಿದ್ದಾರೆ. ಸ್ಥಳೀಯ ಪೊಲೀಸರು ಕಾಲೇಜಿನ ಸಿಸಿಟಿವಿ ದಾಖಲೆಗಳನ್ನು ಪರಿಶೀಲಿಸಿದ್ದಾರೆ ನಿಗೂಢ ಸಾವು ಪ್ರಕರಣ ಪಡೆದುಕೊಂಡಿರುವುದಾಗಿ ತಿಳಿದು ಬಂದಿದೆ.

Leave a Comment

Your email address will not be published. Required fields are marked *