ಗುಂಡ್ಯ: ಬಸ್ – ಲಾರಿ ನಡುವೆ ಮುಖಾಮುಖಿ ಡಿಕ್ಕಿ| ಚಾಲಕರು ಸೇರಿ ನಾಲ್ಕು ಮಂದಿ ಗಂಭೀರ

ಸಮಗ್ರ ನ್ಯೂಸ್: ಸರ್ಕಾರಿ ಬಸ್ ಹಾಗು ಲಾರಿ ಪರಸ್ಪರ ಡಿಕ್ಕಿಯಾಗಿ ಇಬ್ಬರು ಚಾಲಕರು ಸೇರಿದಂತೆ ನಾಲ್ವರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಮಂಗಳೂರು – ಬೆಂಗಳೂರು ರಾ.ಹೆದ್ದಾರಿಯ ಶಿರಾಡಿ ಘಾಟ್ ನ ಗುಂಡ್ಯದಲ್ಲಿ ನಡೆದಿದೆ.

Ad Widget ... ..

ಅಪಾಯಕಾರಿ ತಿರುವಿನಲ್ಲಿ ಎದುರುನಿಂದ ವೇಗವಾಗಿ ಲಾರಿ ಬರುತ್ತಿತ್ತು ಈ ವೇಳೆ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕೆಎಸ್‌ಆರ್ಟಿಸಿ ಬಸ್ ಡಿಕ್ಕಿ ಹೊಡೆದಿದೆ.

Ad Widget

ಡಿಕ್ಕಿಯ ರಭಸಕ್ಕೆ ಕೆಎಸ್‌ಆರ್ಟಿಸಿ ಬಸ್ ಹಾಗು ಲಾರಿಯ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದೆ. ಲಾರಿ ಮತ್ತು ಬಸ್ ಚಾಲಕರ ಸ್ಥಿತಿ ಗಂಭೀರವಾಗಿದ್ದು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಅಪಘಾತದ ಕುರಿತಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *