ಸಮಗ್ರ ನ್ಯೂಸ್: ಆಕಾಂಕ್ಷ ಎಸ್. ನಾಯರ್ ಅವರ ಆತ್ಮಹತ್ಯೆಗೆ ಪ್ರೇರಣೆ ನೀಡಿದ ಆರೋಪದಲ್ಲಿ ಕೇರಳ ಮೂಲದ ಪ್ರೊಫೆಸರ್ ಬಿಜಿಲ್ ಸಿ. ಮ್ಯಾಥ್ಯೂ ಅವರನ್ನು ಸೋಮವಾರ ರಾತ್ರಿ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಆಕಾಂಕ್ಷ ಅವರ ಮೃತದೇಹ ಬುಧವಾರ ಧರ್ಮಸ್ಥಳ ತಲುಪಲಿದ್ದು, ಬೊಳಿಯಾರ್ ನ ಅವರ ಮನೆಯ ಬಳಿ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಸೋಮವಾರ ಮರಣೋತ್ತರ ಪರೀಕ್ಷೆ ನಡೆಸಿದ ಸಿವಿಲ್ ಸರ್ಕಾರಿ ಆಸ್ಪತ್ರೆ ವೈದ್ಯರು, ಶವವನ್ನು ಮನೆಯವರಿಗೆ ಹಸ್ತಾಂತರಿಸಿದ್ದಾರೆ. ದೆಹಲಿ ವಿಮಾನ ನಿಲ್ದಾಣಕ್ಕೆ ರಾತ್ರಿ ಎರಡು ಗಂಟೆ ವೇಳೆಗೆ ಆಂಬುಲೆನ್ಸ್ ಮೂಲಕ ಶವವನ್ನು ತರಲಾಗಿತ್ತು. ಆಕಾಂಕ್ಷ ಅವರ ಶವ ಸಾಗಿಸಲು ಅವರು ಕೆಲಸ ಮಾಡುತ್ತಿದ್ದ ಕಂಪನಿಯು ದೆಹಲಿ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಉಚಿತವಾಗಿ ವಿಮಾನ ವ್ಯವಸ್ಥೆ ಮಾಡಿದೆ. ಬೆಂಗಳೂರಿನಿಂದ ಆಂಬುಲೆನ್ಸ್ ಮೂಲಕ ಧರ್ಮಸ್ಥಳ ಗ್ರಾಮದ ಬೊಳಿಯಾರ್‌ಗೆ ಬುಧವಾರ ಶವ ತರಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.