ರಾಜ್ಯದಲ್ಲಿ ಮತ್ತೆ ಕಾಣಿಸಿಕೊಂಡ ಕೊರೊನಾ ಹೊಸ ಅಲೆ| 8 ಪ್ರಕರಣಗಳು ಪತ್ತೆ

ಸಮಗ್ರ ನ್ಯೂಸ್: ಸಿಂಗಾಪುರ್ ಮತ್ತು ಹಾಂಕಾಂಗ್ ನಲ್ಲಿ ಕೊರೋನಾ ಹೊಸ ತಳಿ ಸೋಂಕು ಹೆಚ್ಚಾಗಿದ್ದು, ಈ ಒಂದು ಕೊರೋನಾ ಸೋಂಕು ಭಾರತಕ್ಕೂ ಕಾಲಿಟ್ಟಿದ್ದು, ಕರ್ನಾಟಕದಲ್ಲಿ ಇದೀಗ 8 ಪ್ರಕರಣಗಳು ಪತ್ತೆಯಾಗಿವೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ. ಕೋವಿಡ್ ಹೊಸ ಅಲೆ ಶುರುವಾಗಿದ್ದು, ಕರ್ನಾಟದಲ್ಲಿ 8 ಪ್ರಕರಣ ಸೇರಿ ದೇಶಾದ್ಯಂತ 257 ಕೇಸ್ ಪತ್ತೆಯಾಗಿವೆ.

Ad Widget .

ಇದುವರೆಗೂ ಭಾರತದಲ್ಲಿ 257 ಪ್ರಕರಣಗಳು ಹಾಗೂ ಕರ್ನಾಟಕದಲ್ಲಿ 8 ಕೇಸ್ ಪತ್ತೆಯಾಗಿದ್ದು, ಕೇರಳದಲ್ಲಿ 69, ಮಹಾರಾಷ್ಟ್ರ 44, ತಮಿಳುನಾಡು 34, ಗುಜರಾತ್, ದೆಹಲಿ, ಹರ್ಯಾಣ, ರಾಜಸ್ಥಾನ, ಸಿಕ್ಕಿಂನಲ್ಲೂ ಪಾಸಿಟಿವ್ ಕೇಸ್‌ಗಳಿವೆ. ಸದ್ಯ ಯಾವುದೇ ರೀತಿಯ ಗಂಭೀರವಾದ ಗುಣಲಕ್ಷಣಗಳು ಕಾಣಿಸಿಕೊಂಡಿಲ್ಲ. ಹೀಗಾಗಿ ಆತಂಕದ ಸ್ಥಿತಿ ನಿರ್ಮಾಣವಾಗಿಲ್ಲ. ಆದರೆ ನಿರ್ಲಕ್ಷ್ಯ ಬೇಡ ಎಂದು ಆರೋಗ್ಯ ಇಲಾಖೆ ತಿಳಿಸಿದ್ದು, ಎಲ್ಲ ಕಡೆ ಸಂದೇಶ ರವಾನಿಸಿದ್ದು, ಕಟ್ಟೆಚ್ಚರ ವಹಿಸಿದೆ.

Ad Widget . Ad Widget .

ಈಗಾಗಲೇ ಸಿಂಗಾಪುರ ಮತ್ತು ಹಾಂಗ್‌ಕಾಂಗ್‌ನಲ್ಲಿ ಅಲರ್ಟ್ ಘೋಷಿಸಲಾಗಿದೆ. ಸಿಂಗಾಪುರದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ಮೇ 03 ರಿಂದ ಮೆ 16ರ ವರೆಗೆ 14,200 ಕೇಸ್ ದಾಖಲಾಗಿದೆ ಎಂದು ಸಿಂಗಾಪುರ ಆರೋಗ್ಯ ಸಚಿವಾಲಯ ತಿಳಿಸಿದೆ. ಏಷ್ಯಾದಲ್ಲಿ ಕೋವಿಡ್ ಹಾವಳಿ ಮತ್ತೆ ಶುರುವಾಗಿದ್ದು, ಸಿಂಗಾಪುರ, ಹಾಂಕಾಂಗ್ ಬಳಿಕ ದೇಶದಲ್ಲಿ ಕಾಣಿಸಿಕೊಳ್ಳುತ್ತಿದೆ. ಎಲ್‌ಎಫ್.7 ಮತ್ತು ಎನ್‌ಬಿ.1.8 ತಳಿಗಳು ಪತ್ತೆಯಾಗಿದ್ದು, ಕೊರೊನಾದ ಜೆಎನ್.1 ಗೆ ಸೇರಿದೆ.

Leave a Comment

Your email address will not be published. Required fields are marked *