ಸಮಗ್ರ ನ್ಯೂಸ್: ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಚಾಲಕ ಗಂಭೀರ ಗಾಯಗೊಂಡಿರುವ ಘಟನೆ ಶಿರಾಡಿ ಗ್ರಾಮದ ಕೊಡ್ಯಕಲ್ ಎಂಬಲ್ಲಿ ಮೇ 21 ರಂದು ಸಂಜೆ ಸುಮಾರು 4.30ರ ವೇಳೆ ನಡೆದಿದೆ.
ಮಂಗಳೂರಿನಿಂದ ಬೆಂಗಳೂರಿಗೆ ಅನಿಲ ಸಾಗಾಟ ಮಾಡುತ್ತಿದ್ದ ಟ್ಯಾಂಕರ್ ಕೊಡ್ಯಕಲ್ ನಲ್ಲಿ ಚಾಲಕ (ಬಬ್ಲಿ ಯಾದವ್) ನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಚಾಲಕ ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಟ್ಯಾಂಕರ್ ನಿಂದ ಅನಿಲ ಸೋರಿಕೆ ಇಲ್ಲದೇ ಇರುವುದರಿಂದ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಒಂದು ಬದಿಯಲ್ಲಿ ವಾಹನಗಳ ಓಡಾಟ ಮಾಡುತ್ತಿವೆ ಎಂದು ತಿಳಿದು ಬಂದಿದೆ