ಸಮಗ್ರ ನ್ಯೂಸ್: ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಡಬ ಸಮೀಪದ ಹಳೆಸ್ಟೇಷನ್ ಎಂಬಲ್ಲಿ ಕೆಎಸ್ಸಾರ್ಟಿಸಿ ಬಸ್ಸು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಸೋಮವಾರ ರಾತ್ರಿ ನಡೆದಿದೆ.
ಮೃತಪಟ್ಟ ಯುವಕನನ್ನು ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ ಉದೇರಿ ನಿವಾಸಿ ದಿ. ಶ್ರೀಧರ ಗೌಡ ಎಂಬವರ ಪುತ್ರ ಬಿಶ್ವಜಿತ್(23) ಎಂದು ಗುರುತಿಸಲಾಗಿದೆ.
ಯುವಕ ಮರ್ಧಾಳದ ಪಾಲತ್ತಡ್ಕದಲ್ಲಿ ಫ್ಯಾಬ್ರಿಕೇಷನ್ ವೃತ್ತಿ ಮಾಡುತ್ತಿದ್ದು.ಎಂದಿನಂತೆ ಕೆಲಸ ಮುಗಿಸಿ ಮನೆಗೆ ಹೊರಟು ಕಡಬ ಕಡೆ ಬೈಕಿನಲ್ಲಿ ಬರುತ್ತಿದ್ದಾಗ ಹಳೆಸ್ಟೇಷನ್ ಬಳಿ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಒಮ್ನಿ ಕಾರೊಂದನ್ನು ಹಿಂದಿಕ್ಕಿ ಹೋಗುರವ ಭರದಲ್ಲಿ ಎದುರಿನಿಂದ ಬರುತ್ತಿದ್ದ ಬಿಶ್ವಜಿತ್ ಚಲಾಯಿಸುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದೆ. ಕಡಬ ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟಿದ್ದಾನೆ.
ಇದೇ ವೇಳೆ ಒಮ್ನಿ ಕಾರಿಗೂ ಹಾನಿಯಾಗಿದೆ. ಮೃತ ಯುವಕನಿಗೆ ತಾಯಿ, ಸಹೋದರ ಹಾಗೂ ಸಹೋದರಿ ಇದ್ದಾರೆ. ಘಟನಾ ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.