ಸಮಗ್ರ ನ್ಯೂಸ್: ಸುಹಾಸ್ ಶೆಟ್ಟಿ ಹತ್ಯೆ ಹಿನ್ನೆಲೆಯಲ್ಲಿ ಮಂಗಳೂರು ಬಂದ್ ಗೆ ಕರೆ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷದ್ ಮುಖಂಡ ಶರಣ್ ಪಂಪ್‌ವೆಲ್ ಅವರನ್ನು ಮಂಗಳವಾರ (ಮೇ 27) ಬಂಧಿಸಿದ್ದಾರೆ.
ಕದ್ರಿ ಠಾಣೆ ಪೊಲೀಸರು ಶರಣ್ ಪಂಪ್‌ವೆಲ್ ಅವರನ್ನು ಬಂಧನಕ್ಕೆ ಒಳಪಡಿಸಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆ ಹಿಂದೂ ಸಂಘಟನೆಗಳ ಕಾರ್ಯಕರ್ತರು ಠಾಣೆಯ ಮುಂದೆ ಜಮಾಯಿಸಿದ್ದಾರೆ. ಪೊಲೀಸರ ಕ್ರಮಕ್ಕೆ ಹಿಂದೂ ಸಂಘಟನೆ ಕಾರ್ಯಕರ್ತರ ಖಂಡನೆ ವ್ಯಕ್ತಪಡಿಸಿದ್ದಾರೆ.
ಠಾಣೆಗೆ ಡಿಸಿಪಿ ರವಿಶಂಕರ್ ಭೇಟಿ ನೀಡಿದರು. ನಿಷೇಧಾಜ್ಞೆ ಹಿನ್ನೆಲೆಯಲ್ಲಿ ಕಾರ್ಯಕರ್ತರನ್ನು ಠಾಣೆ ಆವರಣದಿಂದ ಚದುರಿಸಿದರು. ಶರಣ್ ಪಂಪ್‌ವೆಲ್ ಅವರನ್ನು ಪೊಲೀಸರು ವೈದ್ಯಕೀಯ ತಪಾಸಣೆಗೆ ವೆನ್ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.