ಸಮಗ್ರ ನ್ಯೂಸ್: ರಾಜ್ಯದಲ್ಲಿ ಮುಂದಿನ ಒಂದು ವಾರಗಳ ಕಾಲ ರಾಜ್ಯದ ಹಲವೆಡೆ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಜೂ.2ರವರೆಗೆ ಭಾರೀ ಮಳೆ ಮುಂದುವರಿಯಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಒಳನಾಡಿನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದ್ದು, ಬೆಂಗಳೂರಿನಲ್ಲಿ ಇಂದು ಕೂಡ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಹಾಗೂ ಮಲೆನಾಡಿನ ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಮೇ 30ರ ವರೆಗೂ ರೆಡ್ ಅಲರ್ಟ್ ಘೋಷಿಸಲಾಗಿದೆ.
ಬೆಳಗಾವಿ, ಧಾರವಾಡ, ವಿಜಯಪುರ, ಬೀದರ್ ಹಾಗೂ ಕಲಬುರಗಿ ಯಾದಗಿರಿ, ಬಾಗಲಕೋಟೆ, ಗದಗ, ಹಾಸನ, ಕೊಡಗು, ಹಾವೇರಿ ಜಿಲ್ಲೆಗಳಿಗೆ ಮೇ 29 ರವರೆಗೆ ಯೆಲ್ಲೊಅಲರ್ಟ್ ಘೋಷಿಸಲಾಗಿದೆ