ಸಮಗ್ರ ನ್ಯೂಸ್: ದೆಹಲಿಯಲ್ಲಿ ನಡೆದ ನಾಗರಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಕನ್ನಡದ ಹಿರಿಯ ನಟ ಅನಂತ್ ನಾಗ್ ಅವರು ಪದ್ಮಭೂಷಣ ಪ್ರಶಸ್ತಿಯನ್ನು ಸ್ವೀಕರಿಸಿದರು.
ಕನ್ನಡ ಚಿತ್ರರಂಗದಲ್ಲಿ ಸುದೀರ್ಘ ಪಯಣ ಹಾಗೂ ಅಪಾರ ಕೊಡುಗೆಗಳನ್ನು ನೀಡಿರುವ ಅನಂತ್ ನಾಗ್ ಅವರ ಸೇವೆಯನ್ನು ಗಮನಿಸಿದ ಕೇಂದ್ರ ಸರ್ಕಾರ, ಇದೀಗ ಅವರಿಗೆ ಪದ್ಮಭೂಷಣ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಇದೇ ವೇಳೆ ಡಾ. ರಿಕಿ ಗ್ಯಾನ್ ಕೇಜ್ (ಕಲೆ), ಪ್ರಶಾಂತ್ ಪ್ರಕಾಶ್ (ವ್ಯಾಪಾರ ಮತ್ತು ಕೈಗಾರಿಕೆ), ಡಾ. ವೆಂಕಪ್ಪ ಅಂಬಾಜಿ ಸುಗಟೇಕರ್ (ಕಲೆ) ಅವರಿಗೆ ಪದ್ಮಶ್ರೀ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.