ಸಮಗ್ರ ನ್ಯೂಸ್: ನಿನ್ನೆ(ಮೇ.27) ಸಂಜೆ ಅರೆಸ್ಟ್ ಆಗಿದ್ದ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್ ರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಸುಹಾಸ್ ಶೆಟ್ಟಿ ಹತ್ಯೆ ದಿನ ಬಂದ್‌ಗೆ ಕರೆ ನೀಡಿದ ಹಿನ್ನೆಲೆ ಮತ್ತು ನಿನ್ನೆ ನಡೆದ ಕೊಲೆ ಹಿನ್ನೆಲೆ ಉಂಟಾದ ಮುಸ್ಲಿಂ ಮುಖಂಡರ ಆಕ್ರೋಶ ಹಿನ್ನೆಲೆಯಲ್ಲಿ ಹಿಂದೂ ಮುಖಂಡ ಶರಣ್ ಪಂಪ್‌ವೆಲ್ ಅವರನ್ನು ಮಂಗಳೂರಿನ ಕದ್ರಿ ಪೊಲೀಸರು ಬಂಧಿಸಿದ್ದರು.
ಬಂದ್‌ಗೆ ಕರೆ ನೀಡಿದ ಹಿನ್ನೆಲೆ ಕದ್ರಿ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಶರಣ್ ಪಂಪ್‌ವೆಲ್ ಬಂಧನ ಬೆನ್ನಲ್ಲೇ ಕದ್ರಿ ಪೊಲೀಸ್ ಠಾಣೆ ಮುಂದೆ ಹಿಂದೂ ಸಂಘಟನೆ ಕಾರ್ಯಕರ್ತರು ಜಮಾಯಿಸಿದ್ದಾರೆ. ನಿನ್ನೆ ರಾತ್ರಿಯೇ ಶರಣ್ ಪಂಪ್‌ವೆಲ್ ಅವರನ್ನು ಪೊಲೀಸರು ಕದ್ರಿ ಠಾಣೆಯಿಂದ ವೆನ್ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಆರೋಗ್ಯ ತಪಾಸಣೆ ನಡೆಸಿದ್ದರು.
ನಂತರ ಶರಣ್ ಪಂಪ್‌ವೆಲ್ ಬಂಧಿಸಿದ ಪೊಲೀಸರು ಮಂಗಳೂರಿನ ಬೋಂದೆಲ್‌ನ ನ್ಯಾಯಾಧೀಶರ ನಿವಾಸಕ್ಕೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರು ಶರಣ್ ಪಂಪ್‌ವೆಲ್‌ಗೆ ಜಾಮೀನು ನೀಡಿದ್ದಾರೆ.