ವಿಜಯಪುರ: ವಾಮಾಚಾರ ನಡೆಸಿ ಬ್ಯಾಂಕ್ ದರೋಡೆ

ಸಮಗ್ರ ನ್ಯೂಸ್: ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದಲ್ಲಿರುವ ರಾಷ್ಟ್ರೀಕೃತ ಕೆನರಾ ಬ್ಯಾಂಕ್​ನಲ್ಲಿ ಕಳ್ಳತನವಾಗಿದೆ. ಬ್ಯಾಂಕ್ ಬಾಗಲಿನ ಬೀಗ ಮುರಿದು, ಕಿಟಕಿಯ ಬಾರ್​ಗಳನ್ನು ಕಟ್ ಮಾಡಿ ಒಳಗೆ ನುಗ್ಗಿದ ಕಳ್ಳರು ಮೊದಲು ವಾಮಾಚಾರ ಮಾಡಿದ್ದಾರೆ.

Ad Widget . Ad Widget . Ad Widget .

ಬಳಿಕ, ಬ್ಯಾಂಕ್​ನಲ್ಲಿದ್ದ ಹಣ ಮತ್ತು ಚಿನ್ನಾಭರಣ ದೋಚಿದ್ದಾರೆ. ಇಷ್ಟೇ ಅಲ್ಲದೇ, ಬ್ಯಾಂಕ್​ನಲ್ಲಿ ಸಿಸಿ ಕ್ಯಾಮೆರಾಗಳ ಹಾರ್ಡ್​ ಡ್ರೈವ್​ ಕೂಡ ಕದ್ದು ಪರಾರಿಯಾಗಿದ್ದಾರೆ. ಕಳ್ಳರ ಈ ಚಾಲಾಕಿತನ ಪೊಲೀಸರ ನಿದ್ದೆಗೆಡಸಿದೆ.

Ad Widget . Ad Widget .

ಸ್ಥಳಕ್ಕೆ ಮನಗೂಳಿ ಠಾಣೆ ಪೊಲೀಸರು, ಬ್ಯಾಂಕ್​ನ ವ್ಯವಸ್ಥಾಪಕ ನಿರ್ದೇಶಕ ಹಾಗೂ ಸಿಬ್ಬಂದಿ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ. ಬೆರಳಚ್ಚು ತಂಡ ಪರಿಶೀಲನೆ ನಡೆಸಿದೆ. ಕೆನರಾ ಬ್ಯಾಂಕ್​ ಸಿಬ್ಬಂದಿ ಲೆಕ್ಕಪತ್ರಗಳನ್ನು ತಿರುವಿ ಹಾಕುತ್ತಿದ್ದಾರೆ. ಕೆನರಾ ಬ್ಯಾಂಕ್​​ನ ಹಿರಿಯ ಅಧಿಕಾರಿಗಳು ಸಹ ಆಗಮಿಸಿ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಆದರೆ, ಎಷ್ಟು ಹಣ ಮತ್ತು ಚಿನ್ನಾಭರಣ ಕಳ್ಳತನವಾಗಿದೆ ಎಂಬುವುದಕ್ಕೆ ನಿಖರವಾದ ಅಂಕಿ-ಸಂಖ್ಯೆಗಳು ಇನ್ನೂ ಬಹಿರಂಗವಾಗಿಲ್ಲ.

ಬ್ಯಾಂಕ್ ಒಳಗೆ ನುಗ್ಗಿರುವ ಕಳ್ಳರು ಸೈರನ್ ಮೊಳಗದಂತೆ ನೋಡಿಕೊಂಡಿದ್ದಾರೆ. ಸಿಸಿ ಕ್ಯಾಮೆರಾಗಳ ಹಾರ್ಡ್ ಡ್ರೈವ್ ತೆಗೆದುಕೊಂಡು ಹೋಗಿದ್ದಾರೆ. ಇನ್ನು, ಮನಗೂಳಿ ಪಟ್ಟಣ ಪಂಚಾಯತಿಯಿಂದ ಪ್ರಮುಖ ಭಾಗಗಳಲ್ಲಿ 35 ಸಿಸಿ ಕ್ಯಾಮೆರಾಮಗಳನ್ನು ಅಳವಡಿಕೆ ಮಾಡಲಾಗಿದ್ದು, ತನಿಖಾಧಿಕಾರಿಗಳು ಅವುಗಳನ್ನು ಪರಿಶೀಲಿಸುತ್ತಿದ್ದಾರೆ.
ಇನ್ನು ರಾಷ್ಟ್ರೀಯ ಹೆದ್ದಾರಿ ಹಾಗೂ ಇತರೆ ರಸ್ತೆಗಳಲ್ಲಿನ ಸಿಸಿ ಕ್ಯಾಮೆರಾಗಳ ದೃಶ್ಯಾವಳಿಗಳ ಪರಿಶೀಲನಾ ಕಾರ್ಯ ಕೂಡ ನಡೆದಿದೆ. ಮೂಲಗಳ ಪ್ರಕಾರ ಅಪಾರ ಪ್ರಮಾಣದ ಚಿನ್ನಾಭರಣ ಹಾಗೂ ನಗದು ಕಳ್ಳತನವಾಗಿದೆ ಎನ್ನಲಾಗಿದೆ. ಆದರೆ, ಬ್ಯಾಂಕ್ ಅಧಿಕಾರಿಗಳು ಹಾಗೂ ಪೊಲೀಸರು ಯಾವುದೇ ಮಾಹಿತಿ ನೀಡದೆ ಇರುವುದು ಗ್ರಾಹಕರಲ್ಲಿ ಭಯ ಹುಟ್ಟಿಸಿದೆ.

Leave a Comment

Your email address will not be published. Required fields are marked *