ಸಮಗ್ರ ನ್ಯೂಸ್: ಬಂಟ್ವಾಳದ ಕೊಳ್ತಮಜಲು ಮಸೀದಿಯ ಕಾರ್ಯದರ್ಶಿ ಅಬ್ದುಲ್ ರಹೀಂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೀಪಕ್ ಸಹಿತ ಮೂವರನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದೆ.
ಕೊಲೆ ಕೃತ್ಯದಲ್ಲಿ ಸುಮಾರು 15 ಮಂದಿ ಭಾಗಿಯಾಗಿದ್ದಾರೆ ಎನ್ನಲಾಗುತ್ತಿದ್ದು, ಕೃತ್ಯ ನಡೆದ ಬಳಿಕ ಆರೋಪಿಗಳು ಪರಾರಿಯಾಗಿದ್ದಾರೆ. ಆ ಪೈಕಿ ಮೂವರನ್ನು ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.