ಚಿಕ್ಕಮಗಳೂರು: ಪ್ರೀತಿಸಿ ಮದುವೆಯಾದ ಪತ್ನಿಯನ್ನು ಮನಸೋ ಇಚ್ಛೆ ಇರಿದು ಕೊಂದ ಪತಿ| ಪರಾರಿಯಾದ ಪಾತಕಿಗಾಗಿ ಪೊಲೀಸರಿಂದ ಹುಡುಕಾಟ

ಸಮಗ್ರ ನ್ಯೂಸ್: ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಪತಿ ಮನಸೋ ಇಚ್ಛೆ ಇರಿದು ಹತ್ಯೆಗೈದಿರುವ ಆಘಾತಕಾರಿ ಘಟನೆ ಚಿಕ್ಕಮಗಳೂರು ತಾಲೂಕಿನ ಕೈಮರಾ ಚೆಕ್ ಪೋಸ್ಟ್ ನಲ್ಲಿ ನಡೆದಿದೆ.

Ad Widget ... ..

ಕೀರ್ತಿ (26) ಹತ್ಯೆಯಾದ ದುರ್ದೈವಿ. ಪತಿ ಅವಿನಾಶ್ (32) ಪತ್ನಿಯನ್ನು ಕೊಂದ ಆರೋಪಿ. 4 ವರ್ಷದ ಹಿಂದೆ ಅವಿನಾಶ್ ಮತ್ತು ಕೀರ್ತೀ ಪ್ರೀತಿಸಿ ಮದುವೆಯಾಗಿದ್ದರು ಆದರೆ ಇತ್ತೀಚಿಗೆ ಇಬ್ಬರ ನಡುವೆ ಜಗಳ ನಡೆಯುತಿತ್ತು ಅದರಂತೆ ಪತಿ ಪತ್ನಿ ನಡುವೆ ಜಗಳ ನಡೆದು ಕೋಪಗೊಂಡ ಪತಿ ಚಾಕುವಿನಿಂದ ಮನಸ್ಸೋ ಇಚ್ಛೆ 10 ಬಾರಿ ಚುಚ್ಚಿ ಸ್ಥಳದಿಂದ ಪರಾರಿಯಾಗಿದ್ದಾನೆ. ಗಂಭೀರ ಗಾಯಗೊಂಡ ಪತ್ನಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

Ad Widget

ಘಟನೆ ಸಂಬಂಧ ಚಿಕ್ಕಮಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ನಾಪತ್ತೆಯಾಗಿರುವ ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ.

Leave a Comment

Your email address will not be published. Required fields are marked *