ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳ ಸೇವನೆ ಬ್ಯಾನ್| 21ವರ್ಷಕ್ಕಿಂತ ಕೆಳಗಿನವರಿಗೆ ಸಿಗಲ್ಲ ಬೀಡಿ, ಸಿಗರೇಟ್| ತಪ್ಪಿದ್ರೆ ಬೀಳುತ್ತೆ ಭಾರೀ ದಂಡ| ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ಸಮಗ್ರ ನ್ಯೂಸ್: ವಿಶ್ವ ತಂಬಾಕು ರಹಿತ ದಿನದಂದು ‘ಸಾರ್ವಜನಿಕ ಆರೋಗ್ಯ’ ರಕ್ಷಣೆಯತ್ತ ರಾಜ್ಯ ಸರ್ಕಾರದಿಂದ ಮಹತ್ವದ ಅಧಿಸೂಚನೆ ಹೊರಡಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್‌- ಬೀಡಿ ಜೊತೆಗೆ ಹೊಗೆ ರಹಿತ ತಂಬಾಕು ಪದಾರ್ಥಗಳ ಬಳಕೆಯನ್ನೂ ನಿಷೇಧಿಸಲಾಗಿದೆ.

Ad Widget . Ad Widget . Ad Widget .

COTPA ಕಾಯ್ದೆಗೆ ತಿದ್ದುಪಡಿ ತಂದು ಹೊಗೆ ರಹಿತ ತಂಬಾಕು ಪದಾರ್ಥಗಳಿಗೂ ಕಡಿವಾಣ ಹಾಕುವುದರೊಂದಿಗೆ ಹುಕ್ಕಾ ಬ್ಯಾನ್ ಮಾಡಿದ್ದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಕ್ರಮಕ್ಕೆ ಇದೀಗ ರಾಷ್ಟ್ರಪತಿಗಳಿಂದ ಕೂಡ ಮನ್ನಣೆ ದೊರೆತಿದ್ದು, ಇಂದು ರಾಜ್ಯ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದೆ.

Ad Widget . Ad Widget .

ರಾಜ್ಯದಲ್ಲಿ ಇನ್ಮುಂದೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನವಷ್ಟೇ ಅಲ್ಲದೇ ಹೊಗೆ ರಹಿತ ತಂಬಾಕು ಪದಾರ್ಥಗಳನ್ನೂ ಅಂದರೆ ಗುಟ್ಕಾ ಕೂಡ ಸೇವಿಸಿ ಉಗಿಯುವಂತಿಲ್ಲ. ಸಿಗರೇಟ್ ಹೊರತಾಗಿಯೂ ಹೊಗೆ ರಹಿತ ತಂಬಾಕು ಪದಾರ್ಥಗಳು ಸಾರ್ವಜನಿಕ ಆರೋಗ್ಯಕ್ಕೆ ಹಾನಿ ಉಂಟುಮಾಡುತ್ತಿದ್ದವು. ತಂಬಾಕು ಪದಾರ್ಥಗಳನ್ನ ಸೇವಿಸಿ ಸಾರ್ವಜನಿಕ ಸ್ಥಳಗಳಲ್ಲಿ ಏಲ್ಲಿ ಬೇಕಂದರಲ್ಲಿ ಉಗಿಯುವುದರಿಂದ ಗಾಳಿಯಲ್ಲಿ ಒಬ್ಬರಿಂದ ಒಬ್ಬರಿಗೆ ವೈರಸ್ ಹರಡಬಹುದು. ವಿಶೇಷವಾಗಿ ಕೋವಿಡ್ 19 ವೈರಸ್ ನಿಂದ ಸಾರ್ವಜನಿಕರು ತಮ್ಮನ್ನ ತಾವು ರಕ್ಷಿಸಿಕೊಕೊಳ್ಳುವುದು ಸವಾಲಾಗಿತ್ತು. ಅಲ್ಲದೇ ಟಿ.ಬಿ ಹೊಂದಿರುವ ರೋಗಿಗಳಿಗು ತೊಂದರೆ ಉಂಟಾಗಿತ್ತು.

ಈ ಸಮಸ್ಯೆಗಳನ್ನ ಗಮನಿಸಿದ್ದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಸಾರ್ವಜನಿಕ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಈ ಹಿಂದೆ ಇದ್ದ COPTA ಕಾಯ್ದೆಗೆ ತಿದ್ದುಪಡಿ ತಂದು ರಾಜ್ಯದ ಎರಡು ಸದನದಲ್ಲಿ ಅನುಮೋದನೆ ಪಡೆದಿದ್ದರು. ಇದು ಕೇಂದ್ರದ ಕಾಯ್ದೆಯಾಗಿದ್ದರಿಂದ ರಾಷ್ಟ್ರಪತಿಯವರ ಅನುಮೋದನೆಗೆ ಕಳಿಸಲಾಗಿತ್ತು. ರಾಜ್ಯ ಸರ್ಕಾರದ ಈ ಮಹತ್ವದ ಹೆಜ್ಜೆಗೆ ರಾಷ್ಟ್ರಪತಿಗಳಿಂದ ಅನುಮೋದನೆ ದೊರೆತಿದ್ದು, ರಾಜ್ಯ ಸರ್ಕಾರಿಂದ ಇಂದು ಅಧಿಸೂಚನೆ ಹೊರಡಿಸಲಾಗಿದೆ.

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಸೇವನೆಗೆ 200 ರೂ. ಇದ್ದ ದಂಡವನ್ನು 1000 ರೂಪಾಯಿ ವರೆಗೆ ಹೆಚ್ಚಿಸಲಾಗಿದೆ. 21 ವರ್ಷದ ಒಳಗಿನವರು ತಂಬಾಕು ಪದಾರ್ಥಗಳನ್ನ ಮಾರಾಟ ಮಾಡದಂತೆ ನಿಷೇಧ ಹೇರಲಾಗಿದೆ. ಉಪಹಾರ ಗೃಹ, ಪಬ್, ಬಾರ್, ರೆಸ್ಟೋರೆಂಟ್‌ಗಳಲ್ಲಿ ಹುಕ್ಕಾ ಬ್ಯಾನ್ ಮಾಡಲಾಗಿದ್ದು, ಹುಕ್ಕಾ ಬಾರ್ ವಿರುದ್ಧ ಕನಿಷ್ಠ 50 ಸಾವಿರದಿಂದ 1 ಲಕ್ಷ ದಂಡ, ಮೂರು ವರ್ಷ ಜೈಲು ಶಿಕ್ಷೆ ವಿಧಿಸಲು ಕಾಯ್ದೆಯಲ್ಲಿ ಅವಕಾಶ ಕಲ್ಪಿಸಲಾಗಿದೆ.

ರಾಜ್ಯದಲ್ಲಿ 21 ವಯೋಮಿತಿ ಒಳಗಿನ ವ್ಯಕ್ತಿಗಳಿಗೆ ಸಿಗರೇಟು, ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವಂತಿಲ್ಲ.‌ ಪ್ರಸ್ತುತ ತಂಬಾಕು ಉತ್ಪನ್ನಗಳನ್ನು ಖರೀದಿಸುವುದಕ್ಕೆ ಕನಿಷ್ಠ ವಯೋಮಾನ 18 ಇದೆ. ಇದೀಗ ಈ ವಯೋಮಾನವನ್ನು 21 ವರ್ಷಕ್ಕೆ ಏರಿಕೆ ಮಾಡಲಾಗಿದೆ. ಯಾವುದೇ ಶಿಕ್ಷಣ ಸಂಸ್ಥೆಯ 100 ಮೀಟರ್ ಸುತ್ತಳತೆಯೊಳಗಿನ ಪ್ರದೇಶದೊಳಗೆ, ಬಿಡಿಯಾಗಿ ಅಥವಾ ಒಂಟಿಯಾಗಿ ಸಿಗರೇಟ್ ಮಾರಾಟವನ್ನು ನಿಷೇಧಿಸಲಾಗಿದೆ. ಸಿಗರೇಟು ಅಥವಾ ಯಾವುದೇ ಇತರ ತಂಬಾಕು ಉತ್ಪನ್ನದ ಮಾರಾಟ ಮಾಡುವಂತಿಲ್ಲ. ಅಥವಾ ಮಾರಾಟಕ್ಕೆ ಅನುಮತಿ ನೀಡುವಂತಿಲ್ಲ.‌

ಮೂವತ್ತು ಕೊಠಡಿಗಳನ್ನು ಹೊಂದಿರುವ ಹೋಟೆಲ್ ಅಥವಾ ಮೂವತ್ತು ಅಥವಾ ಅದಕ್ಕೂ ಹೆಚ್ಚಿನ ವ್ಯಕ್ತಿಗಳಿಗೆ ಆಸನ ಸಾಮರ್ಥ್ಯ ಹೊಂದಿರುವ ರೆಸ್ಟೋರೆಂಟ್ ಮತ್ತು ವಿಮಾನ ನಿಲ್ದಾಣಗಳಲ್ಲಿ ಒಂದು ಪ್ರತ್ಯೇಕ ಧೂಮಪಾನ ಪ್ರದೇಶ ಅಥವಾ ಸ್ಥಳಕ್ಕೆ ಅವಕಾಶವನ್ನು ಕಲ್ಪಿಸಬಹುದಾಗಿದೆ.

ಈ ತಿದ್ದುಪಡಿ ಕಾಯ್ದೆ ಪ್ರಕಾರ ಹುಕ್ಕಾ ಬಾರ್ ತೆರೆಯುವುದು ಅಥವಾ ನಡೆಸುವುದಕ್ಕೆ ನಿಷೇಧಿಸಲಾಗಿದೆ. ಯಾರೇ ವ್ಯಕ್ತಿಯು ತಾನಾಗಿಯಾಗಲಿ ಅಥವಾ ಯಾರೇ ಇತರ ವ್ಯಕ್ತಿಯ ಪರವಾಗಿಯಾಗಲಿ ಉಪಹಾರ ಗೃಹ ಅಥವಾ ಪಬ್ ಅಥವಾ ಬಾರು ಅಥವಾ ರೆಸ್ಟೋರೆಂಟ್ ಒಳಗೊಂಡಂತೆ ಯಾವುದೇ ಸ್ಥಳದಲ್ಲಿ ಹುಕ್ಕಾ ಬಾರನ್ನು ತೆರೆಯುವಂತಿಲ್ಲ ಹಾಗೂ ನಡೆಸುವಂತಿಲ್ಲ. ಒಂದು ವೇಳೆ ನಿಯಮ‌ ಉಲ್ಲಂಘಿಸಿದರೆ ದಂಡವಾಗಿ 1,000 ರೂ ಕಟ್ಟಬೇಕು. ಈ ಹಿಂದೆ ಈ ದಂಡ ರೂ,200 ಇತ್ತು.

ಹುಕ್ಕಾ ಬಾರ್ ನಡೆಸಿ ನಿಯಮ ಉಲ್ಲಂಘಿಸುವವರಿಗೆ 1 ವರ್ಷದಿಂದ 3 ವರ್ಷಗಳಿಗೆ ವಿಸ್ತರಿಸಬಹುದಾದ ಅವಧಿಗೆ ಸೆರೆ ಮನೆವಾಸ ಮತ್ತು 50 ಸಾವಿರ ರೂಪಾಯಿಗಳಿಗಿಂತ ಕಡಿಮೆಯಲ್ಲದ, 1 ಲಕ್ಷ ರೂಪಾಯಿಗಳವರೆಗೆ ವಿಸ್ತರಿಸಬಹುದಾದ ದಂಡ ವಿಧಿಸಲಾಗುತ್ತದೆ.

Leave a Comment

Your email address will not be published. Required fields are marked *