ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ| ಮುಂದಿನ ೬ ದಿನಗಳ ಕಾಲ ಭಾರೀ ಮಳೆ ಸಾಧ್ಯತೆ| ವಿವಿಧ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಣೆ
ಸಮಗ್ರ ನ್ಯೂಸ್: ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ(ಮೇ 19) ಸತತವಾಗಿ ಆರು ದಿನಗಳ ಕಾಲ ಮಳೆ ಮುಂದುವರೆಯಲಿದೆ. ಗಾಳಿಯ ವೇಗವು ಗಂಟೆಗೆ 40-50 ಕಿ.ಮೀ. ಬೀಸಲಿದ್ದು, ಬಹುತೇಕ ಜಿಲ್ಲೆಗಳಿಗೆ ಅಲರ್ಟ್ ನೀಡಲಾಗಿದೆ. ಮೇ 19ರಂದು ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ ಮತ್ತು ತುಮಕೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ವಿಜಯಪುರ, ಬೆಂಗಳೂರು ನಗರ, ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಕೊಡಗು, ಹಾಸನ, ಕೋಲಾರ, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ […]










