May 2025

ಕನ್ನಡದ ಹಿರಿಯ ಸಾಹಿತಿ ಬಾನು ಮುಷ್ತಾಕ್ ರ ”ಹಾರ್ಟ್ ಲ್ಯಾಂಪ್” ಕೃತಿಗೆ ಪ್ರತಿಷ್ಠಿತ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ

ಸಮಗ್ರ ನ್ಯೂಸ್: ಕನ್ನಡದ ಖ್ಯಾತ ಹಿರಿಯ ಸಾಹಿತಿ ಬಾನು ಮುಷ್ತಾಕ್‌ ಅವರ ಸಣ್ಣ ಕಥಾ ಸಂಕಲನ ‘ಹಾರ್ಟ್ ಲ್ಯಾಂಪ್’ ಕೃತಿಯು 2025ರ ಪ್ರತಿಷ್ಠಿತ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿಗೆ ಆಯ್ಕೆಯಾಗಿದೆ. ಅನುವಾದಿತ ಕಾದಂಬರಿ ವಿಭಾಗದ ಅಡಿಯಲ್ಲಿ ಈ ಗೌರವಕ್ಕೆ ಭಾಜನವಾಗಿದ್ದು, ಈ ಪ್ರಶಸ್ತಿಯನ್ನು ಪಡೆದ ಮೊದಲ ಸಣ್ಣ ಕಥೆಯಾಗಿದೆ. ಮುಷ್ತಾಕ್ ಅವರ ಹಾರ್ಟ್​ ಲ್ಯಾಂಪ್​ ಕೃತಿಯು ದಕ್ಷಿಣ ಭಾರತದ ಪಿತೃಪ್ರಧಾನ ಸಮುದಾಯಗಳಲ್ಲಿನ ಮಹಿಳೆಯರ ಜೀವನವನ್ನು ನಿರೂಪಿಸುವ 12 ಕಥೆಗಳನ್ನು ಹೊಂದಿದೆ. ತೀರ್ಪುಗಾರರ ಅಧ್ಯಕ್ಷರಾದ ಮ್ಯಾಕ್ಸ್ ಪೋರ್ಟರ್ ಅವರು ಈ […]

ಕನ್ನಡದ ಹಿರಿಯ ಸಾಹಿತಿ ಬಾನು ಮುಷ್ತಾಕ್ ರ ”ಹಾರ್ಟ್ ಲ್ಯಾಂಪ್” ಕೃತಿಗೆ ಪ್ರತಿಷ್ಠಿತ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ Read More »

ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ| ನಟಿ ರನ್ಯಾ ರಾವ್ ಗೆ ಜಾಮೀನು

ಸಮಗ್ರ ನ್ಯೂಸ್: ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ ನಟಿ ರನ್ಯಾರಾವ್‌ಗೆ ಆರ್ಥಿಕ ವ್ಯವಹಾರಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ದುಬೈನಿಂದ 12 ಕೋಟಿ ಮೌಲ್ಯದ 14 ಕೆ.ಜಿ ಚಿನ್ನ ಕಳ್ಳ ಸಾಗಣೆ ಆರೋಪದಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯದ(ಡಿಆರ್‌ಐ) ಅಧಿಕಾರಿಗಳಿಂದ ಅರಸ್ಟ್ ಆಗಿದ್ದ ನಟಿ ರನ್ಯಾರಾವ್‌ ಸೇರಿ ಮೂವರು ಆರೋಪಿಗಳಿಗೆ ಆರ್ಥಿಕ ವ್ಯವಹಾರಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಮಾರ್ಚ್ 3ರಂದು ಬೆಂಗಳೂರಿಗೆ ಆಗಮಿಸಿದ್ದ ರನ್ಯಾರಾವ್​ರನ್ನು ಕಂದಾಯ ಗುಪ್ತಚರ ಅಧಿಕಾರಿಗಳು (ಡಿಆರ್‌ಐ)

ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ| ನಟಿ ರನ್ಯಾ ರಾವ್ ಗೆ ಜಾಮೀನು Read More »

ಮಳೆ‌ ಅವಾಂತರಕ್ಕೆ ಮಣಿಪಾಲದಲ್ಲಿ‌ ನದಿಯಂತಾದ ರಸ್ತೆ

ಸಮಗ್ರ ನ್ಯೂಸ್: ಉಡುಪಿ ಜಿಲ್ಲೆಯ ಪ್ರಮುಖ ಶೈಕ್ಷಣಿಕ ಮತ್ತು ಆರೋಗ್ಯದ ಹಬ್ ಆಗಿರುವ ಮಣಿಪಾಲದಲ್ಲಿ ಮಳೆಯಿಂದಾಗಿ ಉಡುಪಿ-ಮಣಿಪಾಲ ರಸ್ತೆಯುದ್ದಕ್ಕೂ ಕೃತಕ ಪ್ರವಾಹ ನಿರ್ಮಾಣವಾಗಿದ್ದು, ವಾಹನ ಸವಾರರು ತೀವ್ರ ತೊಂದರೆ ಅನುಭವಿಸಿದ್ದಾರೆ. ಮಣಿಪಾಲದ ಐನಾಕ್ಸ್ ಬಳಿಯ ರಸ್ತೆ ಸಂಪೂರ್ಣವಾಗಿ ಮುಳುಗಿ, ನದಿಯಂತೆ ನೀರು ಹರಿದಿದ್ದು, ನೀರಿನ ಜೊತೆಗೆ ಕಲ್ಲು ಮಣ್ಣುಗಳು ರಸ್ತೆ ಮೇಲೆ ಹರಿದ ಪರಿಣಾಮ ವಾಹನ ಸಂಚಾರಕ್ಕೆ ತೊಂದರೆಯುಂಟಾಗಿದೆ. ಉಡುಪಿಯ ಪ್ರಮುಖ ರಸ್ತೆಯಾಗಿರುವ ಇಲ್ಲಿ ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ಮಳೆ ನೀರು ರಸ್ತೆ ಮೇಲೆ

ಮಳೆ‌ ಅವಾಂತರಕ್ಕೆ ಮಣಿಪಾಲದಲ್ಲಿ‌ ನದಿಯಂತಾದ ರಸ್ತೆ Read More »

ರೇಣುಕಾಸ್ವಾಮಿ ಕೊಲೆ ಪ್ರಕರಣ| ವಿಚಾರಣೆ ಮುಗಿಸಿ ಮರಳುವ ವೇಳೆ ದರ್ಶನ್ ನ ಹೊಸ ನಂಬರ್ ಕೇಳಿ ಪಡಕೊಂಡ ಪವಿತ್ರಾ

ಸಮಗ್ರ ನ್ಯೂಸ್: ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಇಂದು 57ನೇ ಸಿಸಿಹೆಚ್ ಕೋರ್ಟ್‌ನಲ್ಲಿ ನಡೆದ ವಿಚಾರಣೆಗೆ ನಟ ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿದಂತೆ 16 ಜನ ಆರೋಪಿಗಳು ಕೋರ್ಟ್‌ಗೆ ಹಾಜರಾದರು. ಈ ವೇಳೆ ಕೋರ್ಟ್ ವಿಚಾರಣೆ ಮುಗಿಯುವವರೆಗೆ ಗಪ್ ಚುಪ್ ಆಗಿದ್ದ ದರ್ಶನ್ ಮತ್ತು ಪವಿತ್ರಾ ಗೌಡ ಅವರು, ಕೊನೆಗೆ ವಿಚಾರಣೆ ಮುಗಿಸಿ ಹೊರಗೆ ಹೋಗುವಾಗ ನಟಿ ಪವಿತ್ರಾ ಕೈ ಹಿಡಿದು ಕೇಳಿದ್ದಕ್ಕೆ ತನ್ನ ಹೊಸ ನಂಬರ್ ಕೊಟ್ಟಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ 17 ಜನರನ್ನು

ರೇಣುಕಾಸ್ವಾಮಿ ಕೊಲೆ ಪ್ರಕರಣ| ವಿಚಾರಣೆ ಮುಗಿಸಿ ಮರಳುವ ವೇಳೆ ದರ್ಶನ್ ನ ಹೊಸ ನಂಬರ್ ಕೇಳಿ ಪಡಕೊಂಡ ಪವಿತ್ರಾ Read More »

ಉಪ್ಪಿನಂಗಡಿ ದೇವಸ್ಥಾನದ ಬಸವ ಹೃದಯಾಘಾತದಿಂದ ಸಾವು

ಸಮಗ್ರ ನ್ಯೂಸ್: ಉಪ್ಪಿನಂಗಡಿಯ ಸಹಸ್ರಲಿಂಗೇಶ್ವರ ದೇವಾಲಯದ ಉತ್ಸವಗಳಲ್ಲಿ ಭಾಗವಹಿಸುತ್ತಿದ್ದ, ಲವಲವಿಕೆಯಲ್ಲಿದ್ದ ಬಸವ ಶನಿವಾರ(ಮೇ.17) ಸಂಜೆ ಹೃದಯಾಘಾತದಿಂದ ಮೃತಪಟ್ಟಿದೆ. ದೇವಾಲಯದ ಉತ್ಸವಗಳಲ್ಲಿ ಬೆಳ್ಳಿ ಆಭರಣಗಳನ್ನು ಧರಿಸಿ ದೇವರ ಮುಂದೆ ಸಾಗುತ್ತ ಭಕ್ತರ ಆಕರ್ಷಣೆಗೆ ಒಳಗಾಗಿತ್ತು. ಬಸವನ ಮೃತ ದೇಹವನ್ನು ಕ್ರೇನ್ ಸಹಾಯದಿಂದ ಸ್ಥಳಾಂತರಿಸಿ ಅಂತ್ಯ ಸಂಸ್ಕಾರ ಮಾಡಲಾಯಿತು. ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಾಧಾಕೃಷ್ಣ ನಾಯಕ್ ನೇತೃತ್ವದಲ್ಲಿ ವ್ಯವಸ್ಥಾಪನಾ ಸಮಿತಿ ಸದಸ್ಯರು, ಭಕ್ತರು ಅಂತಿಮ ವಿಧಿಯನ್ನು ನೆರವೇರಿಸಿದರು.

ಉಪ್ಪಿನಂಗಡಿ ದೇವಸ್ಥಾನದ ಬಸವ ಹೃದಯಾಘಾತದಿಂದ ಸಾವು Read More »

ನಾಳೆ(ಮೇ.21) ಮದ್ಯದಂಗಡಿ ಬಂದ್

ಸಮಗ್ರ ನ್ಯೂಸ್: ಅಬಕಾರಿ ಸುಂಕ ಹಾಗೂ ಪರವಾನಗಿ ಶುಲ್ಕ ಹೆಚ್ಚಳಕ್ಕೆ ಮದ್ಯದಂಗಡಿ ಮಾಲೀಕರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಶುಲ್ಕ ಹೆಚ್ಚಿಸಿರುವ ಸರ್ಕಾರದ ಕ್ರಮ ಖಂಡಿಸಿ ರಾಜ್ಯದ ಸುಮಾರು 5000 ಮದ್ಯದಂಗಡಿಗಳ ಮಾಲೀಕರು ಮೇ 21 ರಂದು ಮದ್ಯದಂಗಡಿ ವ್ಯಾಪಾರ, ಡಿಪೊಗಳಿಂದ ಮದ್ಯ ಖರೀದಿ ಬಂದ್ ಮಾಡಲು ನಿರ್ಧರಿಸಿದ್ದಾರೆ. ಮದ್ಯದಂಗಡಿ ಮಾರಾಟ ಸ್ಥಗಿತಕ್ಕೂ ಮುನ್ನ ಅಂದರೆ ಮೇ 20 ರಂದು ಸಾಂಕೇತಿಕ ಪ್ರತಿಭಟನೆ ನಡೆಸಲಿದ್ದಾರೆ. ಮೇ 15 ರಂದು ರಾಜ್ಯ ಸರ್ಕಾರವು ದೇಶಿಯ ಮದ್ಯ (ಐಎಂಎಲ್‌) ಹಾಗೂ ಬಿಯರ್

ನಾಳೆ(ಮೇ.21) ಮದ್ಯದಂಗಡಿ ಬಂದ್ Read More »

ಚುನಾವಣಾ ರಾಜಕೀಯಕ್ಕೆ ಸಚಿವ ಕೆ.ಎನ್. ರಾಜಣ್ಣ ಗುಡ್ ಬೈ

ಸಮಗ್ರ ನ್ಯೂಸ್: ಚುನಾವಣಾ ರಾಜಕೀಯಕ್ಕೆ ಸಹಕಾರ ಸಚಿವ ಕೆ ಎನ್ ರಾಜಣ್ಣ ಗುಡ್ ಬೈ ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರ ಜೊತೆ‌ ಮಾತನಾಡುವ ವೇಳೆ ಈ ವಿಷಯ ತಿಳಿಸಿದರು. ಮೈಸೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ನನಗೆ ವಯಸ್ಸಾಯ್ತು, ಚುನಾವಣಾ ರಾಜಕೀಯಕ್ಕೆ ಗುಡ್ ಬೈ ಹೇಳುತ್ತೇನೆ. ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲ್ಲ, ಆದರೆ ರಾಜಕಾರಣದಲ್ಲಿ ಸಕ್ರಿಯವಾಗಿ ಭಾಗಿಯಾಗುತ್ತೇನೆ ಎಂದರು. ಸಹಕಾರ ಕ್ಷೇತ್ರವು ಪಟ್ಟಭದ್ರ ಹಿತಾಸಕ್ತಿಗಳ ಹಿಡಿತದಿಂದ ಮುಕ್ತಗೊಳಿಸುವ ಸಲುವಾಗಿ ಜನರ ನಿರೀಕ್ಷೆಗೆ ತಕ್ಕಂತೆ ಎರಡೂ ಸದನಗಳ ಒಪ್ಪಿಗೆ ಪಡೆದು ತಿದ್ದುಪಡಿ

ಚುನಾವಣಾ ರಾಜಕೀಯಕ್ಕೆ ಸಚಿವ ಕೆ.ಎನ್. ರಾಜಣ್ಣ ಗುಡ್ ಬೈ Read More »

ಭಾರೀ ಮಳೆಯಾಗುವ ಸಂಭವ| ರಾಜ್ಯದ ಆರು ಜಿಲ್ಲೆಗಳಿಗೆ ರೆಡ್ ಅಲರ್ಟ್

ಸಮಗ್ರ ನ್ಯೂಸ್: ರಾಜ್ಯದ ವಿವಿಧೆಡೆ ಮಂಗಳವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, ಆರು ಜಿಲ್ಲೆಗಳಿಗೆ ‘ರೆಡ್‌ ಅಲರ್ಟ್‌’, ನಾಲ್ಕು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್‌’ ಘೋಷಿಸಿದೆ. ಬೆಳಗಾವಿ, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಧಾರವಾಡ, ಹಾವೇರಿ, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಮುಂದಿನ

ಭಾರೀ ಮಳೆಯಾಗುವ ಸಂಭವ| ರಾಜ್ಯದ ಆರು ಜಿಲ್ಲೆಗಳಿಗೆ ರೆಡ್ ಅಲರ್ಟ್ Read More »

ಕರಾವಳಿಯಾದ್ಯಂತ ಭಾರೀ ಮಳೆ| ರೆಡ್ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ಕರಾವಳಿ ಭಾಗದಲ್ಲಿ ಪೂರ್ವ ಮುಂಗಾರು ಮಳೆ ತೀವ್ರಗೊಳ್ಳುವ ಸಾಧ್ಯತೆ ಇದ್ದು ಭಾರತೀಯ ಹವಾಮಾನ ಇಲಾಖೆಯು 20, 21 ರಂದು ರೆಡ್ ಅಲರ್ಟ್, ಮೇ 22 ರಿಂದ 25 ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಈ ವೇಳೆ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಗುಡುಗು ಸಿಡಿಲು ಗಾಳಿಯಿಂದ ಕೂಡಿದ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿರುಸಿನ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಜಿಲ್ಲಾಡಳಿತದಿಂದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.

ಕರಾವಳಿಯಾದ್ಯಂತ ಭಾರೀ ಮಳೆ| ರೆಡ್ ಅಲರ್ಟ್ ಘೋಷಣೆ Read More »

ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ನಾವೆಲ್ಲಿ ಹೇಳಿದೀವಿ? ಉಲ್ಟಾ ಹೊಡೆದ ಡಿಸಿಎಂ ಡಿ.ಕೆ ಶಿವಕುಮಾರ್

ಸಮಗ್ರ ನ್ಯೂಸ್: ನಾವು ಎಲ್ಲಿಯೂ ಗೃಹಲಕ್ಷ್ಮಿ ಹಣವನ್ನು ಪ್ರತಿ ತಿಂಗಳೂ ಕೊಡ್ತೀವಿ ಅಂತ ಹೇಳಿಲ್ಲ ಎಂಬುದಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳುವ ಮೂಲಕ ಉಲ್ಟಾ ಹೊಡೆದಿದ್ದಾರೆ. ಬಳ್ಳಾರಿಯಲ್ಲಿ ಕಾಂಗ್ರೆಸ್ ಸಾಧನಾ ಸಮಾವೇಶದ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರಿಗೆ ಗೃಹ ಲಕ್ಷ್ಮೀ ಹಣ ಯಾವಾಗ ಬರುತ್ತೆ ಎಂಬುದಾಗಿ ಪತ್ರಕರ್ತರೊಬ್ಬರು ಪ್ರಶ್ನಿಸಿದರು.ಆಗ ಮಾತನಾಡಿದ ಡಿಸಿಎಂ ನೋಡ್ರಿ ತಿಂಗಳು ತಿಂಗಳು ಹಣ ಕೊಡ್ತೀವಿ ಅಂತ ನಾವು ಹೇಳಿಲ್ಲ. ನೀವು ಟ್ಯಾಕ್ಸ್ ಕಟ್ಟುತ್ತಾ ಇರಬೇಕು. ನಾವು ದುಡ್ಡು ಕೊಡ್ತಾ ಇರಬೇಕು ಎಂದರು.

ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ನಾವೆಲ್ಲಿ ಹೇಳಿದೀವಿ? ಉಲ್ಟಾ ಹೊಡೆದ ಡಿಸಿಎಂ ಡಿ.ಕೆ ಶಿವಕುಮಾರ್ Read More »