June 2025

“ಈ ಸಲ‌ ಕಪ್‌‌ ನಮ್ದೇ”| 18 ವರ್ಷಗಳ ಬಳಿಕ ಚೊಚ್ಚಲ ಕಪ್‌ ಗೆದ್ದ ಆರ್ ಸಿಬಿ

ಸಮಗ್ರ ನ್ಯೂಸ್: 17 ವರ್ಷಗಳಿಂದ ಆರ್​ಸಿಬಿ ಕೈಗೆಟುಕದ ಗಗನ ಕುಸುಮವೊಂದು ಇದೀಗ ಐಪಿಎಲ್ (IPL 2025) ಕಿರೀಟವಾಗಿ ಆರ್​ಸಿಬಿ (RCB) ಮುಡಿಗೇರಿದೆ. ಕೋಟ್ಯಾಂತರ ಆರ್​ಸಿಬಿ ಅಭಿಮಾನಿಗಳ ಪ್ರಾಥನೆ ಕೊನೆಗೂ ಫಲಿಸಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2025 ರ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ (PBKS) ತಂಡವನ್ನು 6 ರನ್​​ಗಳಿಂದ ಮಣಿಸಿದ ಆರ್​ಸಿಬಿ ಚೊಚ್ಚಲ ಐಪಿಎಲ್ ಕಿರೀಟವನ್ನು ತನ್ನ ಮುಡಿಗೇರಿಸಿಕೊಂಡಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ 20 ಓವರ್‌ಗಳಲ್ಲಿ 9 ವಿಕೆಟ್‌ಗಳಿಗೆ 190 ರನ್ […]

“ಈ ಸಲ‌ ಕಪ್‌‌ ನಮ್ದೇ”| 18 ವರ್ಷಗಳ ಬಳಿಕ ಚೊಚ್ಚಲ ಕಪ್‌ ಗೆದ್ದ ಆರ್ ಸಿಬಿ Read More »

ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ| ಮತ್ತಿಬ್ಬರನ್ನು ವಶಕ್ಕೆ ಪಡೆದ ಖಾಕಿ

ಸಮಗ್ರ ನ್ಯೂಸ್: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ಇರಾಕೋಡಿಯಲ್ಲಿ ಕೊಳತ್ತಮಜಲಿನ ಅಬ್ದುಲ್ ರಹಿಮಾನ್ ಹತ್ಯೆ ಹಾಗೂ ಶಾಫಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ಜೂ. 3ರ ಮಂಗಳವಾರ ನಡೆದಿದೆ. ತೆಂಕಬೆಳ್ಳೂರು ನಿವಾಸಿ ಅಭಿನ್ ರೈ(32) ಹಾಗೂ ಬಡಗಬೆಳ್ಳೂರು ನಿವಾಸಿ ತೇಜಾಕ್ಷ(24) ಬಂಧಿತ ಆರೋಪಿಗಳು. ಪೊಲೀಸರು ಈ ಹಿಂದೆ ‌ಐವರು ಆರೋಪಿಗಳನ್ನು ಬಂಧಿಸಿದ್ದು, ಪ್ರಸ್ತುತ ಅವರೆಲ್ಲರೂ ಪೊಲೀಸ್ ಕಸ್ಟಡಿಯಲ್ಲಿದ್ದಾರೆ.

ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ| ಮತ್ತಿಬ್ಬರನ್ನು ವಶಕ್ಕೆ ಪಡೆದ ಖಾಕಿ Read More »

ಇಂದು RCB V/s PK ನಡುವೆ ಐಪಿಎಲ್ ಫೈನಲ್| ಯಾರ ಮುಡಿಗೆ ಕಪ್!?

ಸಮಗ್ರ ನ್ಯೂಸ್: ಇಂಡಿಯನ್‌ ಪ್ರೀಮಿಯರ್‌ ಲೀಗ್‌ 2025 ಫೈನಲ್‌ ಪಂದ್ಯ ಇಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಬೆಂಗಳೂರು ಹಾಗೂ ಪಂಜಾಬ್‌ ತಂಡಗಳು ಮುಖಾಮುಖಿಯಾಗಲಿವೆ. ಚೊಚ್ಚಲ ಕಿರೀಟಕ್ಕಾಗಿ ಎರಡೂ ತಂಡಗಳ ನಡುವಿನ ಹೋರಾಟ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ. ಐಪಿಎಲ್‌ ಇತಿಹಾಸದ 18 ವರ್ಷಗಳಲ್ಲಿಯೇ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಪಂಜಾಬ್‌ ಕಿಂಗ್ಸ್‌ ತಂಡಗಳು ಇದೇ ಮೊದಲ ಬಾರಿಗೆ ಐಪಿಎಲ್‌ ಟ್ರೋಫಿ ಗೆಲ್ಲುವ ಸನಿಹದಲ್ಲಿವೆ. ವಿರಾಟ್‌ ಕೊಯ್ಲಿ, ಜೋಶ್‌ ಹ್ಯಾಜಲ್‌ವುಡ್‌ ಅವರಂತಹ ಬಲಾಢ್ಯ ಆಟಗಾರರನ್ನು ಹೊಂದಿದ್ದು ಗೆಲ್ಲುವ

ಇಂದು RCB V/s PK ನಡುವೆ ಐಪಿಎಲ್ ಫೈನಲ್| ಯಾರ ಮುಡಿಗೆ ಕಪ್!? Read More »

ಪಿಸ್ತೂಲ್‌ ಹಿಡಿದು ಅಡ್ಡಾಡಿದ ಅಶೋಕ್ ರೈಯನ್ನು ಗಡಿಪಾರು ಮಾಡಿ – ಹಕೀಂ ಕೂರ್ನಡ್ಕ

ಸಮಗ್ರ ನ್ಯೂಸ್: ಕಾಂಗ್ರೆಸ್ ಕಾರ್ಯಕರ್ತ ಹಕೀಂ‌ ಕೂರ್ನಡ್ಕಗೆ ಗಡಿಪಾರು ಆದೇಶ ನೋಟೀಸ್ ನೀಡಿದ ಬೆನ್ನಲ್ಲೇ ಇದೀಗ ಪುತ್ತೂರು ಶಾಸಕ ಅಶೋಕ್ ರೈ ವಿರುದ್ದ ಕಾಂಗ್ರೆಸ್ ಕಾರ್ಯಕರ್ತ ಹಕೀಂ ಕೂರ್ನಡ್ಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾರ್ವಜನಿಕವಾಗಿ ಪಿಸ್ತೂಲ್ ಹಿಡಿದ ಶಾಸಕ ಅಶೋಕ್ ರೈಯನ್ನು ಮೊದಲು ಗಡಿಪಾರು ಮಾಡಲಿ ಎಂದು ಕಿಡಿಕಾರಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು ಪುತ್ತೂರು ಪೊಲೀಸರು ಸಹಾಯಕ ಆಯುಕ್ತರಿಗೆ ನನ್ನ ಮೇಲೆ ಇರುವ ಸುಳ್ಳು ದೂರುಗಳ ಮಾಹಿತಿ ನೀಡಿದ್ದಾರೆ. ಅಶೋಕ್ ರೈ ವಿರುದ್ಧ ಮಾತನಾಡಿದ್ರೆ ನಿಮ್ಮನ್ನ ಗಡಿಪಾರು

ಪಿಸ್ತೂಲ್‌ ಹಿಡಿದು ಅಡ್ಡಾಡಿದ ಅಶೋಕ್ ರೈಯನ್ನು ಗಡಿಪಾರು ಮಾಡಿ – ಹಕೀಂ ಕೂರ್ನಡ್ಕ Read More »

ಮೊದಲು ಕ್ಷಮೆ ಕೇಳಿ, ಆಮೇಲೆ ಅರ್ಜಿ ವಿಚಾರಣೆ| ಕಮಲ್ ಹಾಸನ್ ಕಿವಿ ಹಿಂಡಿದ ಹೈಕೋರ್ಟ್

ಸಮಗ್ರ ನ್ಯೂಸ್: ಥಗ್‌ ಲೈಫ್‌ ಸಿನಿಮಾ ಬಿಡುಗಡೆ ಅಡ್ಡಿಯನ್ನು ತೆರವು ಮಾಡುವಂತೆ ಕಮಲ್‌ ಹಾಸನ್‌ ಹಾಗೂ ಸಿನಿಮಾ ನಿರ್ಮಾಣ ಸಂಸ್ಥೆ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಿಚಾರಣೆಗೊಳಪಡಿಸಿದೆ. ಮೊದಲು ಕನ್ನಡಿಗರ ಕ್ಷಮೆ ಕೇಳಿ ಬಳಿಕ ಅರ್ಜಿ ವಿಚಾರಣೆ ನಡೆಸುತ್ತೇವೆ ಎಂದು ಹೈಕೋರ್ಟ್‌ ನ್ಯಾಯಮೂರ್ತಿ ಕಮಲ್‌ ಹಾಸನ್‌ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕಮಲ್‌ ಹಾಸನ್‌ ಯಾರೇ ಇರಲಿ ನೆಲ ಜಲ ವಿಚಾರದಲ್ಲಿ ರಾಜಿ ಇಲ್ಲ ಎಂದು ನ್ಯಾಯಮೂರ್ತಿಗಳು ಕನ್ನಡಮ್ಮನ ಪರವಾಗಿ ನಿಂತು ಭಾಷಾ ಪ್ರೇಮ ಮೆರೆದರು. ಕಮಲ್‌ ಹಾಸನ್‌ ಅವರನ್ನು

ಮೊದಲು ಕ್ಷಮೆ ಕೇಳಿ, ಆಮೇಲೆ ಅರ್ಜಿ ವಿಚಾರಣೆ| ಕಮಲ್ ಹಾಸನ್ ಕಿವಿ ಹಿಂಡಿದ ಹೈಕೋರ್ಟ್ Read More »

ಯಾವುದೇ ಕಾರಣಕ್ಕೂ ಗಡಿಪಾರು ಆದೇಶ ಸ್ವೀಕರಿಸಲಾರೆ – ಪುತ್ತಿಲ

ಸಮಗ್ರ ನ್ಯೂಸ್: ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲರನ್ನು ದ.ಕ.ಜಿಲ್ಲೆಯಿಂದ ಕಲಬುರಗಿ ಜಿಲ್ಲೆಯ ಶಹಬಾದ್ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡುವ ಕುರಿತು ಪುತ್ತೂರು ವಿಭಾಗದ ಸಹಾಯಕ ಆಯುಕ್ತರು ನೋಟಿಸ್ ಜಾರಿಗೊಳಿಸಿದ್ದಾರೆ. ಆದರೆ ಗಡಿಪಾರು ನೋಟಿಸ್ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅರುಣ್ ಕುಮಾರ್ ಪುತ್ತಿಲ್ ಅವರು ನಾನು ಯಾವುದೇ ಕಾರಣಕ್ಕೂ ಗಡಿಪಾರು ಆದೇಶವನ್ನು ಸ್ವೀಕರಿಸುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಯಾವುದೇ ಕಾರಣಕ್ಕೂ ಗಡಿಪಾರು ಆದೇಶ ಸ್ವೀಕರಿಸುವುದಿಲ್ಲ. ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ

ಯಾವುದೇ ಕಾರಣಕ್ಕೂ ಗಡಿಪಾರು ಆದೇಶ ಸ್ವೀಕರಿಸಲಾರೆ – ಪುತ್ತಿಲ Read More »

ವಿಜಯಪುರ:ರಾಜ್ಯದ ಇತಿಹಾಸದಲ್ಲೇ ಮಹಾ ದರೋಡೆ| ಮನಗೋಳಿ ಕೆನರಾ ಬ್ಯಾಂಕ್ ಶಾಖೆಯಿಂದ 58 ಕೆ.ಜಿ ಚಿನ್ನಾಭರಣ ಕಳವು

ಸಮಗ್ರ ನ್ಯೂಸ್: ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿಯ‌‌ ಮನಗೋಳಿ ಪಟ್ಟಣದ ಕೆನರಾ ಬ್ಯಾಂಕ್ ಶಾಖೆಯಲ್ಲಿ ನಡೆದ ಕಳ್ಳತನ ಪ್ರಕರಣ ಪೊಲೀಸ್ ಇಲಾಖೆಗೆ ಸವಾಲಾಗಿದೆ. ಸಿನಿಮೀಯ ರೀತಿಯಲ್ಲಿ, ಮಾಸ್ಟರ್ ಪ್ಲ್ಯಾನ್ ಮಾಡಿ ಕಳ್ಳರು ಕೋಟಿ ಕೋಟಿ ಮೌಲ್ಯದ ಚಿನ್ನಾಭರಣಗಳನ್ನು ಕದ್ದಿದ್ದಾರೆ. ಕದೀಮರ ಪತ್ತೆಗೆ ಪೊಲೀಸ್​ ಇಲಾಖೆ ಎಂಟು ವಿಶೇಷ ತಂಡಗಳು ರಚಿಸಿದೆ. ಬ್ಯಾಂಕ್​ನಲ್ಲಿದ್ದ 58 ಕೆಜಿ 975 ಗ್ರಾಂ ಚಿನ್ನಾಭರಣ ಮತ್ತು 5.20 ಲಕ್ಷ ನಗದು ಕಳ್ಳತನವಾಗಿದೆ ಎಂದು ಜಿಲ್ಲಾ ಪೊಲೀಸ್​ ವರಿಷ್ಟಾಧಿಕಾರಿ ಲಕ್ಷ್ಮಣ ನಿಂಬರಗಿ ಮಾಹಿತಿ ನೀಡಿದರು. ಕಳೆದ

ವಿಜಯಪುರ:ರಾಜ್ಯದ ಇತಿಹಾಸದಲ್ಲೇ ಮಹಾ ದರೋಡೆ| ಮನಗೋಳಿ ಕೆನರಾ ಬ್ಯಾಂಕ್ ಶಾಖೆಯಿಂದ 58 ಕೆ.ಜಿ ಚಿನ್ನಾಭರಣ ಕಳವು Read More »

ದ.ಕ ಜಿಲ್ಲೆಯಲ್ಲಿ ಶಾಂತಿ ಕಾಪಾಡಲು ಪೊಲೀಸ್ ಇಲಾಖೆಯಿಂದ ಮಹತ್ವದ ಕ್ರಮ| ಭರತ್ ಕುಮ್ಡೇಲ್, ಮಹೇಶ್ ತಿಮರೋಡಿ ಸೇರಿ‌ 36 ಮಂದಿಗೆ ಗಡಿಪಾರು ನೊಟೀಸ್

ಸಮಗ್ರ ನ್ಯೂಸ್: ದ.ಕ ಜಿಲ್ಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ, ಜಿಲ್ಲಾ ಪೊಲೀಸ್ ಇಲಾಖೆಯು ಮಹತ್ವದ ಕ್ರಮಕ್ಕೆ ಮುಂದಾಗಿದೆ. ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಮಾಜಘಾತುಕ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುತ್ತಿರುವ ಆರೋಪ ಹೊತ್ತಿರುವ ಒಟ್ಟು 36 ವ್ಯಕ್ತಿಗಳನ್ನು ಜಿಲ್ಲೆಯಿಂದ ಗಡಿಪಾರು ಮಾಡಲು ಕಾನೂನು ಪ್ರಕ್ರಿಯೆಗಳನ್ನು ಆರಂಭಿಸಿರುವುದಾಗಿ ಇಲಾಖೆ ಅಧಿಕೃತವಾಗಿ ಪ್ರಕಟಿಸಿದೆ. ಈ ಕುರಿತು ಪೊಲೀಸ್ ಇಲಾಖೆ ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ಗಡಿಪಾರಿಗೆ ಪ್ರಸ್ತಾಪಿಸಲಾದ ವ್ಯಕ್ತಿಗಳ ಹೆಸರು, ವಯಸ್ಸು ಹಾಗೂ

ದ.ಕ ಜಿಲ್ಲೆಯಲ್ಲಿ ಶಾಂತಿ ಕಾಪಾಡಲು ಪೊಲೀಸ್ ಇಲಾಖೆಯಿಂದ ಮಹತ್ವದ ಕ್ರಮ| ಭರತ್ ಕುಮ್ಡೇಲ್, ಮಹೇಶ್ ತಿಮರೋಡಿ ಸೇರಿ‌ 36 ಮಂದಿಗೆ ಗಡಿಪಾರು ನೊಟೀಸ್ Read More »

ಮಂಗಳೂರು: ಪಶ್ಚಿಮ ಘಟ್ಟ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಾರಣ ನಿಷೇಧ

ಸಮಗ್ರ ನ್ಯೂಸ್: ಪಶ್ಚಿಮಘಟ್ಟ ಸಹಿತ ಬೆಳ್ತಂಗಡಿ ತಾಲೂಕಿನ ಸುತ್ತಮುತ್ತ ಭಾರೀ ಮಳೆ ಹಾಗೂ ಮಂಜು ಮುಸುಕಿದ ವಾತಾವರಣವಿರುವ ಪರಿಣಾಮ ಪ್ರವಾಸಿ ತಾಣಗಳ ಚಾರಣ ಹಾಗೂ ವೀಕ್ಷಣೆಗೆ ಅರಣ್ಯ ಇಲಾಖೆ ನಿಷೇಧ ಹೇರಿದೆ. ಬೆಳ್ತಂಗಡಿ ತಾಲೂಕಿನ ಪಶ್ಚಿಮಘಟ್ಟ ಅಂಚಿನಲ್ಲಿರುವ ನರಸಿಂಹಗಢ (ಗಡಾಯಿಕಲ್ಲು), ಕಡಮಗುಂಡಿ, ಬೊಳ್ಳೆ, ಮತ್ತು ಬಂಡಾಜೆ ಜಲಪಾತಗಳಿಗೆ ತೆರಳಲು ಪ್ರವಾಸಿಗರಿಗೆ ಮುಂದಿನ ಆದೇಶದ ವರೆಗೆ ಬೆಳ್ತಂಗಡಿ ವನ್ಯಜೀವಿ ವಿಭಾಗದಿಂದ ಪ್ರವೇಶ ನಿಷೇಧಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರೇಕ್ಷಣೀಯ ಸ್ಥಳ ವೀಕ್ಷಿಸಲು ಪ್ರವಾಸಿಗರು ಹೆಚ್ಚಾಗುವ ಸಾಧ್ಯತೆಯಿದೆ. ಆದರೆ ಜಲಪಾತ

ಮಂಗಳೂರು: ಪಶ್ಚಿಮ ಘಟ್ಟ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಾರಣ ನಿಷೇಧ Read More »

ಚಿಕ್ಕಮಗಳೂರಿನಲ್ಲಿ ಮೊದಲ ಕೊರೊನಾ ಪಾಸಿಟಿವ್ ಪ್ರಕರಣ ದೃಢ

ಸಮಗ್ರ ನ್ಯೂಸ್ : ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮೊದಲ ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದ್ದು, 22 ವರ್ಷದ ಯುವಕನಿಗೆ ಸೋಂಕು ದೃಢಪಟ್ಟಿದೆ. ಕೇರಳದ ಕೊಚ್ಚಿಯಲ್ಲಿ ಕೆಲಸ ಮಾಡುತ್ತಿದ್ದ ಈ ಯುವಕ, ರಜೆಯ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿಗೆ ಆಗಮಿಸಿದ್ದರು. ಉಸಿರಾಟದ ತೊಂದರೆ ಅನುಭವಿಸುತ್ತಿದ್ದ ಎನ್ನಲಾಗಿದೆ, ನಂತರ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿಂದ ಆತನ ಸ್ವಾಬ್ ಸ್ಯಾಂಪಲ್ ತೆಗೆದು ಹಾಸನದ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಆರೋಗ್ಯ ಇಲಾಖೆಯ ಅಧಿಕೃತ ಹೆಲ್ತ್ ಬುಲೆಟಿನ್ ಪ್ರಕಾರ ಈ ಯುವಕನಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ತಿಳಿದು ಬಂದಿದೆ.

ಚಿಕ್ಕಮಗಳೂರಿನಲ್ಲಿ ಮೊದಲ ಕೊರೊನಾ ಪಾಸಿಟಿವ್ ಪ್ರಕರಣ ದೃಢ Read More »