ಸಂಚಾರಕ್ಕೆ ಮುಕ್ತಗೊಂಡ ಕಲ್ಲಡ್ಕ ಪ್ಲೈಓವರ್ ರಸ್ತೆ

ಸಮಗ್ರ ನ್ಯೂಸ್: ದಕ್ಷಿಣಕನ್ನಡ ಜಿಲ್ಲೆಯ ಬಹು ಚರ್ಚಿತ ಕಲ್ಲಡ್ಕ ಪ್ಲೈಓವರ್ ಕೊನೆಗೂ ವಾಹನ ಸಂಚಾರಕ್ಕೆ ಮುಕ್ತವಾಗಿದೆ. ಮಳೆಗಾಲ ಪ್ರಾರಂಭವಾಗಿರುವ ಸಂದರ್ಭದಲ್ಲೇ ಕಲ್ಲಡ್ಕ ಪ್ಲೈಓವರ್ ವಾಹನ ಸಂಚಾರಕ್ಕೆ ಮುಕ್ತವಾಗಿರುವು ವಾಹನ ಸವಾರರಿಗೆ ಸಂತಸ ತಂದಿದೆ.

. Ad Widget . Ad Widget

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿ.ಸಿ.ರೋಡ್-ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಡೆಯುತ್ತಿದ್ದು, ಈ ಹಿನ್ನಲೆ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕಲ್ಲಡ್ಕ ಫ್ಲೈಓವರ್ ಸೇರಿದಂತೆ ಕೆಲವೆಡೆ ವಾಹನಗಳ ಸುಗಮ ಸಂಚಾರಕ್ಕೆ ರಸ್ತೆ ತೆರವುಗೊಳಿಸಿ ಅನುಕೂಲ ಮಾಡಿಕೊಡುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸಂಸದ ಕ್ಯಾ.ಬ್ರಿಜೇಶ್ ಚೌಟ ಸೂಚನೆ ನೀಡಿದ್ದರು, ಅದರಂತೆ ಇದೀಗ ಇಂದು ಕಲ್ಲಡ್ಕ ಫ್ಲೈಓವರ್ ಸಂಚಾರಕ್ಕೆ ತೆರೆದುಕೊಂಡಿದೆ.

. Ad Widget . . Ad Widget . Ad Widget

ಇಂದು ಬೆಳಿಗ್ಗೆ 10.30 ಗಂಟೆಗೆ ಫೈ ಓವರ್ ನ ಆರಂಭಿಕ ಭಾಗವಾದ ಪೂರ್ಲಿಪಾಡಿಯಲ್ಲಿ ಸೇರಿದ ಕಲ್ಲಡ್ಕದ ನಾಗರಿಕರು ಹಿರಿಯ ಮುಂದಾಳು, ಕಲ್ಲಡ್ಕ ಶ್ರೀರಾಮ ವಿದ್ಯಾಸಂಸ್ಥೆಗಳ ಸಂಸ್ಥಾಪಕ ಕಲ್ಲಡ್ಕ ಡಾ.ಪ್ರಭಾಕರ್ ಭಟ್ ಅವರ ನೇತೃತ್ವದಲ್ಲಿ ಸೇರಿದ ಕಲ್ಲಡ್ಕದ ನಾಗರಿಕರು ಪ್ರೈಓವರ್‌ ಸಂಚಾರವನ್ನು ಸ್ವಾಗತಿಸಿದ್ದಾರೆ.

ಕಲ್ಲಡ್ಕದ ಪೂರ್ಲಿಪ್ಪಾಡಿಯಿಂದ ಕೃಷ್ಣಕೋಡಿಯವರೆಗೆ ಒಟ್ಟು 2.1 ಕಿ.ಮೀ. ಉದ್ದದ ಈ ಮೇಲ್ಸೇತುವೆಯಲ್ಲಿ 70 ಪಿಲ್ಲರ್‌ಗಳಿವೆ. ಒಂದರಿಂದ ಇನ್ನೊಂದಕ್ಕೆ 30 ಮೀಟರ್ ಅಂತರವಿದ್ದು, ಒಟ್ಟು 72 ಸ್ಪಾನ್‌ಗಳ ಫ್ಲೈಓವರ್ ಇದಾಗಿದೆ. ಜೂನ್ ಕೊನೆಯೊಳಗೆ ಫ್ಲೈಓವರ್​ಗೆ ಸಂಬಂಧಪಟ್ಟ ಎಲ್ಲ ಕಾಮಗಾರಿಗಳು ಮುಕ್ತಾಯಗೊಳ್ಳುವ ನಿರೀಕ್ಷೆಯಿದೆ.

Leave a Comment

Your email address will not be published. Required fields are marked *