ಮಂಗಳೂರು: ಪಶ್ಚಿಮ ಘಟ್ಟ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಾರಣ ನಿಷೇಧ

ಸಮಗ್ರ ನ್ಯೂಸ್: ಪಶ್ಚಿಮಘಟ್ಟ ಸಹಿತ ಬೆಳ್ತಂಗಡಿ ತಾಲೂಕಿನ ಸುತ್ತಮುತ್ತ ಭಾರೀ ಮಳೆ ಹಾಗೂ ಮಂಜು ಮುಸುಕಿದ ವಾತಾವರಣವಿರುವ ಪರಿಣಾಮ ಪ್ರವಾಸಿ ತಾಣಗಳ ಚಾರಣ ಹಾಗೂ ವೀಕ್ಷಣೆಗೆ ಅರಣ್ಯ ಇಲಾಖೆ ನಿಷೇಧ ಹೇರಿದೆ.

Ad Widget ... ..

ಬೆಳ್ತಂಗಡಿ ತಾಲೂಕಿನ ಪಶ್ಚಿಮಘಟ್ಟ ಅಂಚಿನಲ್ಲಿರುವ ನರಸಿಂಹಗಢ (ಗಡಾಯಿಕಲ್ಲು), ಕಡಮಗುಂಡಿ, ಬೊಳ್ಳೆ, ಮತ್ತು ಬಂಡಾಜೆ ಜಲಪಾತಗಳಿಗೆ ತೆರಳಲು ಪ್ರವಾಸಿಗರಿಗೆ ಮುಂದಿನ ಆದೇಶದ ವರೆಗೆ ಬೆಳ್ತಂಗಡಿ ವನ್ಯಜೀವಿ ವಿಭಾಗದಿಂದ ಪ್ರವೇಶ ನಿಷೇಧಿಸಲಾಗಿದೆ.

Ad Widget

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರೇಕ್ಷಣೀಯ ಸ್ಥಳ ವೀಕ್ಷಿಸಲು ಪ್ರವಾಸಿಗರು ಹೆಚ್ಚಾಗುವ ಸಾಧ್ಯತೆಯಿದೆ. ಆದರೆ ಜಲಪಾತ ಪ್ರದೇಶದ ಸುತ್ತಮುತ್ತ ತೀರಾ ಕಡಿದಾದ ಕಲ್ಲು ಬಂಡೆಗಳಿದ್ದು, ಪ್ರವಾಸಿಗರ ಚಾರಣಕ್ಕೆ ಸೂಕ್ತ ಸಮಯವಲ್ಲ. ಈ ಹಿನ್ನೆಲೆಯಲ್ಲಿ ಈ ಪ್ರದೇಶಗಳಿಗೆ ಪ್ರವಾಸಿಗರ ಸಂದರ್ಶನವನ್ನು ಮುಂದಿನ ಆದೇಶದವರೆಗೆ ತತ್‌ಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಿ ಮೇ 31ರಂದು ಬೆಳ್ತಂಗಡಿ ವನ್ಯಜೀವಿ ವಿಭಾಗದ ವಲಯ ಅರಣ್ಯಾಧಿಕಾರಿ ಶರ್ಮಿಷ್ಠಾ ಆದೇಶ ಹೊರಡಿಸಿದ್ದಾರೆ.

Leave a Comment

Your email address will not be published. Required fields are marked *