ಪಿಸ್ತೂಲ್‌ ಹಿಡಿದು ಅಡ್ಡಾಡಿದ ಅಶೋಕ್ ರೈಯನ್ನು ಗಡಿಪಾರು ಮಾಡಿ – ಹಕೀಂ ಕೂರ್ನಡ್ಕ

ಸಮಗ್ರ ನ್ಯೂಸ್: ಕಾಂಗ್ರೆಸ್ ಕಾರ್ಯಕರ್ತ ಹಕೀಂ‌ ಕೂರ್ನಡ್ಕಗೆ ಗಡಿಪಾರು ಆದೇಶ ನೋಟೀಸ್ ನೀಡಿದ ಬೆನ್ನಲ್ಲೇ ಇದೀಗ ಪುತ್ತೂರು ಶಾಸಕ ಅಶೋಕ್ ರೈ ವಿರುದ್ದ ಕಾಂಗ್ರೆಸ್ ಕಾರ್ಯಕರ್ತ ಹಕೀಂ ಕೂರ್ನಡ್ಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾರ್ವಜನಿಕವಾಗಿ ಪಿಸ್ತೂಲ್ ಹಿಡಿದ ಶಾಸಕ ಅಶೋಕ್ ರೈಯನ್ನು ಮೊದಲು ಗಡಿಪಾರು ಮಾಡಲಿ ಎಂದು ಕಿಡಿಕಾರಿದ್ದಾರೆ.

Ad Widget ... ..

ಮಾಧ್ಯಮಗಳ ಜೊತೆ ಮಾತನಾಡಿದ ಅವರು ಪುತ್ತೂರು ಪೊಲೀಸರು ಸಹಾಯಕ ಆಯುಕ್ತರಿಗೆ ನನ್ನ ಮೇಲೆ ಇರುವ ಸುಳ್ಳು ದೂರುಗಳ ಮಾಹಿತಿ ನೀಡಿದ್ದಾರೆ. ಅಶೋಕ್ ರೈ ವಿರುದ್ಧ ಮಾತನಾಡಿದ್ರೆ ನಿಮ್ಮನ್ನ ಗಡಿಪಾರು ಮಾಡುತ್ತೇವೆಂದು ಪುತ್ತೂರು ನಗರ ಠಾಣೆಯ ಇನ್ಸ್ ಪೆಕ್ಟರ್ ಈ ಹಿಂದೆ ಹೇಳಿದ್ರು, ಇದೀಗ ಯಾವುದೇ ಗುಂಪು ಗಲಭೆ, ಕೋಮುಗಲಭೆ, ಹಲ್ಲೆ, ಹತ್ಯೆ, ಪ್ರಚೋದನಾಕಾರಿ ಭಾಷಣ ಮಾಡಿದ ಪ್ರಕರಣಗಳಲ್ಲಿ ಇಲ್ಲದ ನನ್ನನ್ನು ಯಾಕೆ ಗಡಿಪಾರು ಮಾಡಬಾರದೆಂಬ ನೋಟೀಸ್ ನೀಡಿದ್ದಾರೆ.

Ad Widget

ನನ್ನ ಗಡಿಪಾರು ನೋಟಿಸ್ ಹಿಂದೆ ಶಾಸಕ ಅಶೋಕ್‌ರೈ ಅವರ ಕೈವಾಡವಿದೆ. ಮುಸಲ್ಮಾನರ ಮತ ಪಡೆದು ಗೆದ್ದಿರುವ ಅಶೋಕ್ ರೈ ಮುಸಲ್ಮಾನರಿಗೆಯೇ ಅನ್ಯಾಯ ಮಾಡ್ತಾ ಇದ್ದಾರೆ. ಇತ್ತೀಚೆಗೆ ಹತ್ಯೆಯಾದ ರಹೀಂ ಮನೆಗೆ ಸಾಂತ್ವನ ಹೇಳಲು ಅಶೋಕ್ ರೈ ಯಾಕೆ ಹೋಗಿಲ್ಲ?, ಜಿಲ್ಲಾ ಉಸ್ತುವಾರಿ ಸಚಿವರು ಮಂಗಳೂರಿಗೆ ಬಂದಿರುವಾಗ ಅಶೋಕ್ ರೈ ಗೈರಾಗಿದ್ದರು. ಯಾಕಂದ್ರೆ ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ರಹೀಂ ಮನೆಗೆ ಸಾಂತ್ವನ ಹೇಳಲು ಹೋಗಬೇಕಾಗಬಹುದು, ಸಾಂತ್ವನ ಹೇಳಲು ಹೋದ್ರೆ ನನಗೆ ಹಿಂದೂಗಳ ಮತ ಸಿಗಲ್ಲ ಎಂಬುದು ಅವರ ಮನಸ್ಸಲ್ಲಿದೆ. ಅಶೋಕ್ ರೈಗಳೇ ನೀವು ನನ್ನ ಬೆವರಿನಿಂದ ಶಾಸಕರಾಗಿದ್ದೀರಿ. ಮುಂದಿನ ಬಾರಿ ನಿಮ್ಮನ್ನ ನಾನು ಮಾಜಿ ಶಾಸಕನಾಗಿ ಮಾಡ್ತೇನೆ. ನೀವು ಒಂದು ಗ್ರಾಮ ಪಂಚಾಯತ್ ಚುನಾವಣೆಯಲ್ಲೂ ನಿಂತರೂ ಸೋಲಿಸ್ತೇನೆ ಎಂದು ಸವಾಲು ಹಾಕಿದ್ದಾರೆ.

Leave a Comment

Your email address will not be published. Required fields are marked *