ಬೆಂಗಳೂರು: ಆರ್ ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತ| ಇಬ್ಬರು ಸಾವು; ಹಲವರಿಗೆ ಗಾಯ

ಸಮಗ್ರ ನ್ಯೂಸ್: 18ನೇ ಆವೃತ್ತಿಯ ಐಪಿಎಲ್ (IPL) ಫೈನಲ್ ಗೆದ್ದು ಚಾಂಪಿಯನ್ ಆಗಿರುವ ಸಂಭ್ರಮದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ನಗರಕ್ಕೆ ಬಂದಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭ್ರಮಚರಣೆ ನಡೆಯಲಿದೆ. ಈ ಸಂಭ್ರಮಾಚರಣೆಯನ್ನು ನೋಡಲು ಅಪಾರ ಸಂಖ್ಯೆಯ ಅಭಿಮಾನಿಗಳು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸೇರಿದ್ದಾರೆ. ಈ ವೇಳೆ ಕಾಲ್ತುಳಿತ ಸಂಭವಿಸಿ ಇಬ್ಬರು ಆರ್​ಸಿಬಿ ಅಭಿಮಾನಿ ಮೃತಪಟ್ಟಿದ್ದಾರೆ.​

Ad Widget . Ad Widget . Ad Widget .

ಕಾಲ್ತುಳಿತದಲ್ಲಿ 15ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಅಸ್ವಸ್ಥಗೊಂಡವರನ್ನು ಶಿವಾಜಿನಗರದಲ್ಲಿರುವ ಬೌರಿಂಗ್ ಮತ್ತು ​ಲೇಡಿ ಕರ್ಜನ್ ಆಸ್ಪತ್ರೆ ಆಸ್ಪತ್ರೆಗೆ ದಾಖಲಿಸಲಾಗಿದೆ.

Ad Widget . Ad Widget .

Leave a Comment

Your email address will not be published. Required fields are marked *