ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ| ಮತ್ತೋರ್ವ ಆರೋಪಿ ದಸ್ತಗಿರಿ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಇನ್ನೋರ್ವ ಆರೋಪಿಯನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿರುತ್ತಾರೆ. ಮೇ 1ರಂದು ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳ ಜೊತೆ ಸೇರಿಕೊಂಡು ಕೊಲೆಗೆ ಸಂಚು ರೂಪಿಸಲು ಮತ್ತು ಆರೋಪಿಗಳು ತಲೆ ಮರೆಸಿಕೊಳ್ಳಲು ಸಹಾಯ ಮಾಡಿದ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.

Ad Widget . Ad Widget . Ad Widget .

ಬಜಪೆ ನಿವಾಸಿ ಅಬ್ದುಲ್ ರಜಾಕ್ (59) ಎಂಬಾತನನ್ನು ದಸ್ತಗಿರಿ ಮಾಡಲಾಗಿರುತ್ತದೆ. ಈತನು ಪ್ರಕರಣದಲ್ಲಿನ ಪ್ರಮುಖ ಆರೋಪಿಗಳ ಪೈಕಿ ತನ್ನ ಮಗ ಮೊಹಮ್ಮದ್ ಮುಜಾಂಮ್ಮಿಲ್ ಮತ್ತು ಮಗಳ ಗಂಡ ನೌಷದ್ ವಾಮಂಜೂರು @ ಚೊಟ್ಟೆ ನೌಷದ್ ಹಾಗೂ ಇತರ ಆರೋಪಿಗಳ ಜೊತೆ ಸೇರಿ ತನ್ನ ಮನೆಯಲ್ಲಿ ಕೊಲೆಗೆ ಸಂಚು ರೂಪಿಸಲು ಮತ್ತು ಆರೋಪಿಯು ತಲೆ ಮರೆಸಿಕೊಳ್ಳಲು ಸಹಕರಿಸಿರುತ್ತಾನೆ ಎಂದು ದೂರಲಾಗಿದೆ. ಈ ಕೊಲೆ ಪ್ರಕರಣದ ತನಿಖೆಯು ಮುಂದುವರಿದಿದ್ದು, ಪ್ರಕರಣದಲ್ಲಿ ಭಾಗಿಯಾದ ಇತರ ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Ad Widget . Ad Widget .

ಪ್ರಕರಣದಲ್ಲಿ ಬಂಧಿತರಾದವರು ಹೀಗಿದ್ದಾರೆ: ಕಳವಾರು ನಿವಾಸಿ ಅಜರುದ್ದೀನ್ ಅಲಿಯಾಸ್ ಅಜರ್ ಅಲಿಯಾಸ್ ಅಜ್ಜು(29), ಬಜಪೆ ನಿವಾಸಿ ಅಬ್ದುಲ್ ಖಾದರ್ ಅಲಿಯಾಸ್ ನೌಫಲ್ (24), ವಾಮಂಜೂರು ನಿವಾಸಿ ನೌಷದ್ ಅಲಿಯಾಸ್ ವಾಮಂಜೂರು ನೌಷದ್ ಅಲಿಯಾಸ್ ಚೊಟ್ಟೆ ನೌಷದ್(39), ಬಜಪೆ ನಿವಾಸಿ ಅಬ್ದುಲ್ ಸಫ್ವಾನ್ (29),, ಕೆಂಜಾರು ನಿವಾಸಿ ಮೊಹಮ್ಮದ್ ಮಝವಿಲ್ (32), ಕಳವಾರು ನಿವಾಸಿ ಕಲಂದರ್ ಶಾಫಿ (31), ಚಿಕ್ಕಮಗಳೂರು ಜಿಲ್ಲೆ ಕಳಸದ ರಂಜಿತ್ (19), ನಾಗರಾಜ್ (20), ಜೋಕಟ್ಟೆಯ ಮೊಹಮ್ಮದ್ ರಿಜ್ವಾನ್ (28), ಆದಿಲ್ , ಮೆಹರೂಫ್ , ಹಾಗೂ ನಿಯಾಜ್ ಈಗಾಗಲೇ ಬಂಧಿತರು ಎಂದು ಪೊಲೀಸರು ತಿಳಿಸಿದ್ದಾರೆ.

Leave a Comment

Your email address will not be published. Required fields are marked *