ಭಾರೀ ಮಳೆ ಹಿನ್ನಲೆ| ಜೂ.12ರಂದು ಉಡುಪಿ, ಕೊಡಗು ಜಿಲ್ಲೆಗಳ ಶಾಲೆಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಮುಂಗಾರು ಮಳೆ ಆರಂಭವಾಗಿದೆ. ಕರವಾಳಿ, ಮಲೆನಾಡು ಮತ್ತು ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಮುಂದಿನ ಐದು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ ಮತ್ತು ಕೊಡಗು ಜಿಲ್ಲೆಗಳಲ್ಲಿ ಗುರುವಾರ (ಜೂ.12) ರಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ. ಆದ್ದರಿಂದ ಹವಾಮಾನ ಇಲಾಖೆ ಈ ಎರಡು ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಿಸಿದೆ. ಉಡುಪಿ ಮತ್ತು ಕೊಡಗು ಜಿಲ್ಲೆಗಳಲ್ಲಿನ ಅಂಗನವಾಡಿ ಮತ್ತು ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

Ad Widget . Ad Widget . Ad Widget .

ಉಡುಪಿ ಜಿಲ್ಲೆಗೆ ರೆಡ್ ಅಲರ್ಟ್​ ಘೋಷಿಸಿದ ಹಿನ್ನೆಲೆಯಲ್ಲಿ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

Ad Widget . Ad Widget .

ಕೊಡಗು ಜಿಲ್ಲೆಗೂ ರೆಡ್ ಅಲರ್ಟ್ ಘೋಷಿಸಿದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ವೆಂಕಟರಾಜಾ ಅವರು ನಾಳೆ (ಜೂ.12) ಅಂಗನವಾಡಿ, ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.

Leave a Comment

Your email address will not be published. Required fields are marked *