ರಾಜ್ಯಾದ್ಯಂತ ಭಾರೀ ಮಳೆ ಮುನ್ಸೂಚನೆ| ಈ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಜೂನ್ 16ರವರೆಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಮಳೆ ಮುಂದುವರಿಯಲಿದ್ದು, ವಿವಿಧ ಜಿಲ್ಲೆಗಳಿಗೆ ರೆಡ್ ಅಲರ್ಟ್, ಯೆಲ್ಲೋ ಅಲರ್ಟ್, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು ಸಿಡಿಲಿನಿಂದ ಕೂಡಿದ್ದು ವ್ಯಾಪಕವಾಗಿ ಸಾಧಾರಣ ಮಳೆ ಸಹಿತ ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ ಮುನ್ಸೂಚನೆ ನೀಡಿದೆ.

Ad Widget . Ad Widget . Ad Widget .

ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು ಶಾಲೆಗಳಿಗೆ ರಜೆ ಘೋಷಣೆ:
ಉತ್ತರ ಕನ್ನಡ ಜಿಲ್ಲೆಯಲ್ಲಿ ಜೂನ್ 17 ರವರೆಗೆ ರೆಡ್ ಅಲರ್ಟ್ ಹಿನ್ನೆಲೆಯಲ್ಲಿ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ 5 ತಾಲೂಕುಗಳಿಗೆ ರಜೆ ಘೋಷಿಸಿ ಉತ್ತರ ಕನ್ನಡ ಡಿಸಿ ಲಕ್ಷ್ಮೀ ಪ್ರಿಯಾ ಆದೇಶ ಹೊರಡಿಸಿದ್ದಾರೆ. ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ತಾಲೂಕಿನ ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ.

Ad Widget . Ad Widget .

ಕೊಡಗು ಜಿಲ್ಲೆಯಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ:
ಕೊಡಗು ಜಿಲ್ಲೆಯಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಭಾರಿ ಮಳೆಯಾಗಲಿದ್ದು, ಇಂದು ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಇಂದಿನಿಂದ ಕೊಡಗು ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ನದಿತೀರ, ಬೆಟ್ಟಗುಡ್ಡಗಳ ನಿವಾಸಿಗಳು ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ. ಅಲ್ಲದೇ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಕೊಡಗು ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಇಂದು ರಜೆ ಘೋಷಿಸಿ ಜಿಲ್ಲಾಢಿಕಾರಿ ವೆಂಕಟರಾಜಾ ಆದೇಶ ಹೊರಡಿಸಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಇಂದು ಪ್ರಾಥಮಿಕ ಪ್ರೌಢಶಾಲೆಗಳಿಗೆ ರಜೆ ಘೋಷಣೆ:
ಉಡುಪಿ ಜಿಲ್ಲೆಯಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಇಂದು ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

ದ.ಕ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ:
ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಇಂದು ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.

Leave a Comment

Your email address will not be published. Required fields are marked *