ಹವಾಮಾನ ವರದಿ; ಕರಾವಳಿಯಲ್ಲಿ ಭಾರೀ ಮಳೆ‌ ಸಾಧ್ಯತೆ| ರೆಡ್ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ಕಳೆದ ಎರಡು ದಿನಗಳಿಂದ ರಾಜ್ಯಾದ್ಯಂತ ಅಬ್ಬರಿಸಿದ್ದ ಮುಂಗಾರು ಮಳೆ ಶುಕ್ರವಾರ ಕೊಂಚ ಬಿಡುವು ನೀಡಿದೆ. ಆದರೆ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆಯ ಸಂಭವ ಹೆಚ್ಚಿರುವ ಕಾರಣ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಿಸಿದೆ.

. Ad Widget . Ad Widget

ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಬೀದರ್‌ ಸೇರಿದಂತೆ ಹಲವೆಡೆ ಶುಕ್ರವಾರ ಅಲ್ಪ ಪ್ರಮಾಣದಲ್ಲಿ ಮಳೆ ಸುರಿದಿದೆ. ಬುಧವಾರ ತಡರಾತ್ರಿ ಸುರಿದ ಧಾರಕಾರ ಮಳೆಗೆ ತತ್ತರಿಸಿದ್ದ ಹುಬ್ಬಳ್ಳಿ, ಧಾರವಾಡ ಸೇರಿ ಉತ್ತರ ಕರ್ನಾಟಕದ ನೆರೆ ಪ್ರದೇಶಗಳು ಸಹಜ ಸ್ಥಿತಿಗೆ ಮರಳಿದೆ.

. Ad Widget . . Ad Widget . Ad Widget

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಮಳೆಯಾಗಿದ್ದು, 4 ಮನೆ, ಸುಮಾರು 40 ವಿದ್ಯುತ್‌ ಕಂಬಗಳಿಗೆ ಹಾನಿಯಾಗಿದೆ. ಇನ್ನು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ-ಮಲ್ಪೆ ರಸ್ತೆಯ ಆಗುಂಬೆ ಘಾಟಿಯಲ್ಲಿ ಜೂ.15 ರಿಂದ ಸೆ.30ರ ವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ.

ಬೆಳಗಾವಿ, ಧಾರವಾಡ, ಹಾವೇರಿ, ಹಾಸನ, ಮೈಸೂರಿನಲ್ಲಿ ಜೂ.14ರಿಂದ ಜೂ.15ರವರೆಗೆ ಬಿರುಸಾಗಿ ಮಳೆಯಾಗಲಿದ್ದು, ಈ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ನೀಡಲಾಗಿದೆ.

Leave a Comment

Your email address will not be published. Required fields are marked *