ಭಾರೀ ಮಳೆ ಮುನ್ಸೂಚನೆ ಹಿನ್ನಲೆ| ಜೂ.16ರಂದು ರಾಜ್ಯದ ನಾಲ್ಕು ಜಿಲ್ಲೆಗಳ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ನಾಳೆ(ಜೂ.16) ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

Ad Widget ... ..

ಉಡುಪಿ ಜಿಲ್ಲೆಯಾದ್ಯಂತ ರಜೆ:
ಉಡುಪಿ ಜಿಲ್ಲೆಯಲ್ಲಿ ಮಳೆಯಾಗುತ್ತಿರುವ ಕಾರಣ ಮನೆಯಿಂದ ಹೊರಗೆ ಬರದಂತ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಜೂ.16ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆಯನ್ನು ಘೋಷಿಸಿ ಡಿಸಿ ವಿದ್ಯಾಕುಮಾರಿ. ಕೆ ಆದೇಶಿಸಿದ್ದಾರೆ.

Ad Widget

ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಣೆ:

ರೆಡ್ ಅಲರ್ಟ್ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲೈ ಮುಗಿನಲ್ ಆದೇಶ ಹೊರಡಿಸಿದ್ದು, ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ನಾಳೆ ಕೂಡ ಭಾರೀ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಹೀಗಾಗಿ ನಾಳೆ ಜಿಲ್ಲೆಯ ಐದು ತಾಲ್ಲೂಕಿನ ಶಾಲೆಗಳಿಗೆ ರಜೆ ನೀಡಿರುವುದಾಗಿ ತಿಳಿಸಿದ್ದಾರೆ. ನಾಳೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಬಂಟ್ವಾಳ, ಮೂಡಬಿದ್ರೆ, ಮುಲ್ಕಿ, ಉಳ್ಳಾಲ ತಾಲ್ಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆಯನ್ನು ನೀಡಿ ಡಿಸಿ ಮುಲೈ ಮುಗಿಲನ್ ಆದೇಶಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ:
ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ. ನಾಳೆ ಕೂಡ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ನಾಳೆ ಚಿಕ್ಕಮಗಳೂರು ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರು ಆದೇಶ ಹೊರಡಿಸಿದ್ದು, ಚಿಕ್ಕಮಗಳೂರು, ಕಳಸ, ಮೂಡಿಗೆರೆ, ಶೃಂಗೇರಿ, ಎನ್ ಆರ್ ಪುರ, ಕೊಪ್ಪ ತಾಲ್ಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ನೀಡಿರುವುದಾಗಿ ತಿಳಿಸಿದ್ದಾರೆ.

Leave a Comment

Your email address will not be published. Required fields are marked *