ಮಂಗಳೂರು: ಡಿವೈಡರ್ ಗೆ ಕಾರು ಡಿಕ್ಕಿ ಹೊಡೆದು ಯುವಕರಿಬ್ಬರು ಸಾವು

ಸಮಗ್ರ ನ್ಯೂಸ್: ಕಾರೊಂದು ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸಾವನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಮಂಗಳೂರು ಹೊರವಲಯದ ಜಪ್ಪಿನಮೊಗರು ಬಳಿ ನಡೆದಿದೆ. ಮೃತರನ್ನು ಕೊಂಚಾಡಿಯ ಓಂಶ್ರೀ (24) ಮತ್ತು ಮಲ್ಲಿಕಟ್ಟೆಯ ಅಮನ್ ರಾವ್ (23) ಎಂದು ಗುರುತಿಸಲಾಗಿದೆ

Ad Widget ... ..

ಓಂಶ್ರೀ ಅವರು ದ.ಕ. ಜಿಲ್ಲಾ ಎನ್‌ಎಸ್‌ಯುಐ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರು. ಅಪಘಾತವಾದ ಕಾರಿನಲ್ಲಿ ನಾಲ್ಕೈದು ಮಂದಿ ಪ್ರಯಾಣಿಸುತ್ತಿದ್ದು, ಕಾರನ್ನು ಅಮನ್ ರಾವ್ ಚಲಾಯಿಸುತ್ತಿದ್ದರು ಎನ್ನಲಾಗಿದೆ. ತಲಪಾಡಿ ಕಡೆಯಿಂದ ಪಂಪ್‌ವೆಲ್ ಕಡೆಗೆ ಬರುತ್ತಿದ್ದ ಕಾರು ಜಪ್ಪಿನಮೊಗರು ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕ್ಕೆ ಢಿಕ್ಕಿ ಹೊಡೆದಿದೆ.

Ad Widget

ತಡರಾತ್ರಿ 2.30ರ ವೇಳೆಗೆ ಘಟನೆ ನಡೆದಿದೆ. ರಾ.ಹೆ. 66ರ ಜಪ್ಪಿನಮೊಗರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯ ಎದುರಲ್ಲೇ ಅಪಘಾತ ನಡೆದಿದೆ. ಐವರು ಯುವಕರಿದ್ದ ಕಾರು ತಲಪಾಡಿಯಿಂದ ಮಂಗಳೂರಿನ ಕಡೆಗೆ ಅತಿ ವೇಗದಿಂದ ಧಾವಿಸುತ್ತಿತ್ತು. ಅಪಘಾತದ ತೀವ್ರತೆ ಎಷ್ಟು ಭೀಕರವಾಗಿತ್ತೆಂದರೆ, ಕಾರು ಸಂಪೂರ್ಣ ಪುಡಿಯಾಗಿದ್ದು ಇಂಜಿನ್ ಭಾಗವೇ ಹೊರಕ್ಕೆ ಬಂದಿದ್ದು ಎರ್ ಬ್ಯಾಗ್ ಚಿಂದಿಯಾಗಿದೆ.

ಕಾರಿನಲ್ಲಿದ್ದ ಇಟಲಿಯ ಪ್ರಜೆ ಸಹಿತ ಮೂವರಿಗೆ ಗಾಯಗಳಾಗಿದ್ದು ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಮಂಗಳೂರು ದಕ್ಷಿಣ ಸಂಚಾರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Comment

Your email address will not be published. Required fields are marked *