ಸುಹಾಸ್ ಶೆಟ್ಟಿ, ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ| ಪೊಲೀಸರ ವಿರುದ್ಧ NHRC ತನಿಖೆಗೆ ಆದೇಶ

ಸಮಗ್ರ ನ್ಯೂಸ್: ಕಳೆದ ತಿಂಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೌಡಿಶೀಟರ್ ಹಾಗೂ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಭೀಕರ ಕೊಲೆಯಾಗಿತ್ತು. ಅದಾದ ನಂತರ ಕೆಲವೇ ದಿನಗಳಲ್ಲಿ ರೆಹಿಮಾನ್ ಎನ್ನುವ ಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಹೀಗಾಗಿ ಈ ಪ್ರಕರಣಗಳಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ಮಧ್ಯಪ್ರವೇಶಿಸಿದ್ದು, ದಕ್ಷಿಣ ಕನ್ನಡ ಜಿಲ್ಲಾ ಪೋಲೀಸರ ವಿರುದ್ಧ ತನಿಖೆ ನಡೆಸಿ 2 ವಾರದಲ್ಲಿ ವರದಿ ಸಲ್ಲಿಸುವಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ತನಿಖಾ ವಿಭಾಗದ ಡಿಜಿಗೆ ಸೂಚಿಸಲಾಗಿದೆ.

Ad Widget ... ..

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂ ಕಾರ್ಯಕರ್ತರ ಮನೆಗೆ ಇದೀಗ ಪೊಲೀಸರು ಭೇಟಿ ನೀಡಿದ್ದಾರೆ. ಅಲ್ಲದೆ ಈ ಒಂದು ಪ್ರಕರಣದಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಕೂಡ ಮಧ್ಯ ಪ್ರವೇಶ ಮಾಡಿದ್ದು, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರ ವಿರುದ್ಧ ತನಿಖೆಗೆ ಆದೇಶಿಸಿದೆ. ಪ್ರಕರಣದ ಸಮಗ್ರ ತನಿಖೆಗೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಇದೀಗ ಆದೇಶ ನೀಡಿದೆ.

Ad Widget

ರಾಷ್ಟ್ರೀಯ ಮಾನವ ಹಕ್ಕು ಆಯೋಗದ ತನಿಖಾ ವಿಭಾಗದ ಡಿಜಿಗೆ ಸೂಚನೆ ನೀಡಿದ್ದು, ಮಂಗಳೂರು ಉತ್ತರ ಬಿಜೆಪಿ ಶಾಸಕ ಭರತ್ ಶೆಟ್ಟಿ ನೀಡಿರುವ ದೂರನ್ನು ಆಧರಿಸಿ ತನಿಖೆಗೆ ಆದೇಶಿಸಿದೆ. ಪ್ರಕರಣ ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಿ. ಸ್ಥಳ ಪರಿಶೀಲನೆ ನಡೆಸಿ 2 ವಾರಗಳಲ್ಲಿ ವರದಿ ಸಲ್ಲಿಸುವಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ಆದೇಶ ನೀಡಿದೆ.

Leave a Comment

Your email address will not be published. Required fields are marked *